Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

ಇಟ್ಟಿಗೆ ಕಾರ್ಖಾನೆ ಚಿಮಿಣಿ ಕುಸಿತ: ಒಂದೇ ಕುಟುಂಬದ ಮೂವರ ಸಾವು

Wednesday, 04.10.2017, 9:59 AM       No Comments

ಕೋಲಾರ: ಮಳೆ ಹಿನ್ನೆಲೆ ಇಟ್ಟಿಗೆ ಕಾರ್ಖಾನೆಯಲ್ಲಿನ ಚಿಮಿಣಿ ಕುಸಿದು ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿರುವ ಘಟನೆ ಬಂಗಾರಪೇಟೆ ತಾಲೂಕಿನ ರಾಜ್ ಪೇಟ್ ರಸ್ತೆ ಬಳಿಯಿರುವ ಇಟ್ಟಿಗೆ ಕಾರ್ಖಾನೆಯಲ್ಲಿ ಬುಧವಾರ ಬೆಳಗಿನ ಜಾವದಲ್ಲಿ ನಡೆದಿದೆ.

ಈ ಅವಘಡದಲ್ಲಿ JK ಪುರಂನ ನಿವಾಸಿಗಳಾದ ಬಾಷಾ(60), ಫಾತಿಮ (50) ಹಾಗೂ ಅವರ ಮೊಮ್ಮಗ ನಯಾಜ್ (5) ಎಂಬುವವರು ದುರಂತ ಸಾವನ್ನಪ್ಪಿದ್ದಾರೆ.

ಜೈರಾಜ್ ಎಂಬುವರಿಗೆ ಸೇರಿದ ಹಳೆಯ ಇಟ್ಟಿಗೆ ಕಾರ್ಖಾನೆಯಾಗಿದ್ದು, ನಿರತಂತರ ಮಳೆಯಾದ ಹಿನ್ನೆಲೆಯಲ್ಲಿ ಕಾರ್ಖಾನೆ ಮೇಲಿನ ಚಿಮಿಣಿ ಕುಸಿದು ಬಿದ್ದ
ಶೆಡ್‌ನಲ್ಲಿ ಮಲಗಿದ್ದ ಮೂವರು ಸಾವನ್ನಪ್ಪಿದ್ದಾರೆ.

ಈ ಸಂಬಂಧ ಆಂಡ್ರಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top