Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ವಿಜಯವಾಣಿ- ದಿಗ್ವಿಜಯ ಸಹಯೋಗ: ನಗರದ ಹಲವೆಡೆ ಯೋಗ ಕಲರವ

Wednesday, 21.06.2017, 10:52 AM       No Comments

ಬೆಂಗಳೂರು: ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ನಗರದ ವಿವಿಧೆಡೆ ಆಯೋಜಿಸಿದ್ದ 3ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸಿದರು.

ಯಲಹಂಕ, ಅಬ್ಬಿಗೆರೆ, ಮಲ್ಲೇಶ್ವರಂನ ಸ್ಯಾಂಕಿ ಕೆರೆ , ಪದ್ಮನಾಭನಗರ, ಮಲ್ಲೇಶ್ವರಂನ ಶ್ರೀ ಶೃಂಗೇರಿ ಶಂಕರ ಮಠ, ಗೋವಿಂದರಾಜನಗರ, ನೈಸ್​ ರೋಡ್​ ಜಂಕ್ಷನ್​ ಸೇರಿದಂತೆ ಹಲವು ಭಾಗಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.

ಬುಧವಾರ ಬೆಳಗ್ಗೆ ಯೋಗಾಸಕ್ತರು ಮತ್ತು ಯೋಗ ಪಟುಗಳು ಕಾರ್ಯಕ್ರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯೋಗಾಭ್ಯಾಸ ನಡೆಸಿದರು. ನಗರದ ಸ್ಯಾಂಕಿ ಕೆರೆ ಅಂಗಳದಲ್ಲಿ ಆಯೋಜಿಸಿದ್ದ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಚಿತ್ರ ನಟಿ ರಾಗಿಣಿ ಭಾಗವಹಿಸಿದ್ದರು. ಯೋಗದ ಮಹತ್ವದ ಕುರಿತು ಜನರಿಗೆ ಮಾಹಿತಿ ನೀಡಿದ ರಾಗಿಣಿ ನಂತರ ಸೂರ್ಯ ನಮಸ್ಕಾರ ಸೇರಿದಂತೆ ಹಲವು ಯೋಗಾಸನಗಳನ್ನು ಮಾಡಿ ತೋರಿಸಿದರು.

– ಫುಲ್ ಸೈಜಿನಲ್ಲಿ ನೋಡಲು ಚಿತ್ರಗಳ ಮೇಲೆ ಕ್ಲಿಕ್ ಮಾಡಿ (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top