Friday, 18th August 2017  

Vijayavani

1. ಕಾಂಗ್ರೆಸ್‌ನಲ್ಲಿ ಎಡಪಂಥಿಯರಿಗೆ ಮಾತ್ರ ಮಣೆ- ಚುನಾವಣಾ ತಂತ್ರಗಾರ ಕೈ ಗುಡ್‌ಬೈ- ಅಲ್ಪ ಸಂಖ್ಯಾತರರನ್ನ ಅತಿಯಾಗಿ ಓಲೈಸ್ತಿದ್ಯಾ ಕಾಂಗ್ರೆಸ್‌.? 2. ಜೆಡಿಎಸ್​ ಭಿನ್ನರಿಗೆಲ್ಲಾ ಇಲ್ಲಾ ಟಿಕೆಟ್​ – 3 ಕ್ಷೇತ್ರಗಳ ಟಿಕೆಟ್​​​​​​​​ಗೆ ಖಾತ್ರಿ ನೀಡದ ಖರ್ಗೆ- ತ್ರಿಶಂಕು ಸ್ಥಿತಿಯಲ್ಲಿ ಜೆಡಿಎಸ್​​​​​​ ಭಿನ್ನರ ಸ್ಥಿತಿ 3. ಸಿಲಿಕಾನ್ ಸಿಟಿಗೆ ಖತರ್ನಾಕ್​ ಗ್ಯಾಂಗ್​ ಎಂಟ್ರಿ- ಸೆಕ್ಯೂರಿಟಿ ಡ್ರೆಸ್​​​ನಲ್ಲಿ ಮಾಡ್ತಿದ್ದಾರೆ ಕಳ್ಳತನ- ಸಿಸಿ ಕ್ಯಾಮೆರಾದಲ್ಲಿ ಸೆರೆಯಾಯ್ತು ಕೃತ್ಯ 4. ರಾಜೀನಾಮೆ ಬಳಿಕ ವಿಶಾಲ್‌ ಸಿಕ್ಕಾ ಮೊದಲ ಮಾತು- ನನ್ನ ಜೀವನದ ದುಃಖದ ವಿಚಾರ ಅಂತಾ ಬೇಸರ- ಅತ್ತ ನಾನು ಕಾರಣನಲ್ಲ ಎಂದ ನಾರಾಯಣ ಮೂರ್ತಿ 5. ಯುಪಿ ಆಸ್ಪತ್ರೆಯಲ್ಲಿ ಮಕ್ಕಳ ಸಾವು ಪ್ರಕರಣ- ಹೈಕೋರ್ಟ್‌ನಿಂದ ಯೋಗಿ ಸರ್ಕಾರಕ್ಕೆ ತರಾಟೆಗೆ- ಕೂಡಲೇ ವರದಿ ನೀಡಲು ಸೂಚನೆ
Breaking News :

ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಸಿದ್ದರಾಮಯ್ಯರಿಂದ ಯೋಗ ಪ್ರದರ್ಶನಕ್ಕೆ ಚಾಲನೆ

Wednesday, 21.06.2017, 8:20 AM       No Comments

ಬೆಂಗಳೂರು: ಕಂಠೀರವ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ಯೋಗ ದಿನಾಚರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಶ್ವಾಸ ಸಂಸ್ಥೆ ಅಧ್ಯಕ್ಷ ಶ್ವಾಸಗುರು ಶ್ರೀ ವಚನಾನಂದ ಸ್ವಾಮೀಜಿ, ವಿಶ್ವದ ಹಿರಿಯ ಯೋಗಪಟು ತಾವೋಫೋರ್ಚನ್ ಲಿಂಚ್ ಸಾರಥ್ಯದಲ್ಲಿ ಸುಮಾರು ೧೦ ಸಾವಿರಕ್ಕೂ ಹೆಚ್ಚು ಸಾರ್ವಜನಿಕರು ಯೋಗ ಪ್ರದರ್ಶಿಸಿದರು.

ಕೇಂದ್ರ ಸಚಿವರಾದ ಅನಂತಕುಮಾರ್, ಪರಿಷತ್​ ಸಭಾಪತಿ ಡಿ.ಎಚ್. ಶಂಕರಮೂರ್ತಿ, ಸಭಾಧ್ಯಕ್ಷ ಕೋಳಿವಾಡ, ಬಿಬಿಎಂಪಿ ಮೇಯರ್ ಪದ್ಮಾವತಿ, ಭಾರತದ ಹಿರಿಯ ಯೋಗಪಟು ಅಮ್ಮಾ ನಾನಂಮ್ಮಾಳ್, ಐಕಾವ ಯೋಗ ಸಂಸ್ಥೆ ಸಂಸ್ಥಾಪಕ ಕಿಕೋ ಐಕಾವ, ಹಿರಿಯ ಗಾಂಧಿವಾದಿ ಅಣ್ಣಾ ಹಜಾರೆ ಸೇರಿ ಹಲವರು ಯೋಗ ಪ್ರದರ್ಶನದಲ್ಲಿ ಭಾಗಿಯಾಗಿದ್ದರು.

ಬ್ರಹ್ಮ ಕುಮಾರಿ ಸಮೂಹದಿಂದ ಪೂರ್ವಭಾವಿ ಯೋಗಾಭ್ಯಾಸ ಆರಂಭವಾಯಿತು. ಶ್ವಾಸಗುರು ವಚನಾನಂದ ಸ್ವಾಮೀಜಿ ಅವರಿಂದ ಸಾರ್ವಜನಿಕರಿಗೆ ಯೋಗಾಭ್ಯಾಸ ಮಾಡಿಸಲಾಯಿತು. ಯೋಗ ದಿನಾಚರಣೆಯಲ್ಲಿ ಮಹಿಳೆಯರು, ಪುರುಷರು, ಹಿರಿಯರು ಹಾಗು ಕಿರಿಯರು ಉತ್ಸಾಹದಿಂದ ಪಾಲ್ಗೊಂಡಿದ್ದರು.

ತಮಿಳುನಾಡಿನ 97 ವರ್ಷದ ಅಮ್ಮಾ ನಾನಂಮ್ಮಾಳ್ ಹಾಗೂ ನೂಯಾರ್ಕ್ ಮೂಲದ 98 ವರ್ಷದ ತಾವೋಫೋಚಾರ್ನ್ ಅವರಿಂದ ಯೋಗಾಭ್ಯಾಸ ಪ್ರದರ್ಶನ ನಡೆಯಿತು.

ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ಸಂಘ ಸಂಸ್ಥೆಗಳ ಸಿಬ್ಬಂದಿ ಕೂಡ ಭಾಗಿ ಯೋಗ ಪ್ರದರ್ಶನಕ್ಕೆ ಮೆರಗು ನೀಡಿದರು. ಯೋಗ ದಿನಾಚರಣೆ ಹಿನ್ನಲೆಯಲ್ಲಿ ಕಂಠೀರವ ಸ್ಟೇಡಿಯಂನಲ್ಲಿ ಬಿಗಿ ಪೋಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.

Leave a Reply

Your email address will not be published. Required fields are marked *

Back To Top