Monday, 19th February 2018  

Vijayavani

ನನ್ನ ಮಗನನ್ನ ನಾನೇ ಸರೆಂಡರ್​ ಮಾಡಿಸುತ್ತೇನೆ - ಪೊಲೀಸರಿಗೆ ಶೀಘ್ರವೇ ಒಪ್ಪಿಸುತ್ತೇನೆ - ಗೂಂಡಾ ನಲಪಾಡ್​​ ಕುರಿತು ಹ್ಯಾರಿಸ್​ ಪ್ರತಿಕ್ರಿಯೆ        ನಿನ್ನೆ ಚಿಕ್ಕವನು.. ಇಂದು ಬೆಳೆದ ಮಗ - ಬೈದ ನಂತರ ಮೊಬೈಲ್​ ಸ್ವಿಚ್​​ ಆಫ್​​ ಮಾಡ್ಕೊಂಡಿದ್ದ - ಕೇಸ್​ ಭೀತಿಯಲ್ಲಿ ಉಲ್ಟಾ ಹೊಡೆದ ಹ್ಯಾರಿಸ್​​        ರಾಜ್ಯದಲ್ಲಿ ಇಡೀ ದಿನ ಮೋದಿ ಮೇನಿಯಾ - ಮಧ್ಯಾಹ್ನ ಬಾಹುಬಲಿ ಸನ್ನಿಧಿಗೆ ಪ್ರಧಾನಿ - ಮತ್ತಷ್ಟು ಮೇಳೈಸಲಿದೆ ಮಹಾಮಜ್ಜನ        ಪರಿವರ್ತನಾ ರ‍್ಯಾಲಿಯಲ್ಲಿಂದು ಮೋದಿ ಅಬ್ಬರ - ಬಿಜೆಪಿಯಿಂದ ಗಣಪತಿ ಉಡುಗೊರೆ - ಮೈಸೂರು ಪೇಟ ತೊಡಿಸಿ ಸ್ವಾಗತ        ರೈತ ನಾಯಕ, ಶಾಸಕ ಕೆ.ಎಸ್ ಪುಟ್ಟಣ್ಣಯ್ಯ ವಿಧಿವಶ - ವಿದೇಶದಿಂದ ಮಕ್ಕಳ ಬಂದ ಬಳಿಕ ಅಂತ್ಯಕ್ರಿಯೆ - ಕಂಬನಿ ಮಿಡಿದ ಗಣ್ಯರು       
Breaking News

ಶಾಲಾ ಸೆಕ್ಯೂರಿಟಿ ಗಾರ್ಡನಿಂದ 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ

Wednesday, 13.09.2017, 7:34 AM       No Comments

ಬೆಂಗಳೂರು: ನಾಲ್ಕು ವರ್ಷದ ಶಾಲಾ ಬಾಲಕಿ ಮೇಲೆ ಶಾಲೆಯ ಸೆಕ್ಯೂರಿಟಿ ಗಾರ್ಡ್​ವೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವಂತಹ ಅಮಾನವೀಯ ಘಟನೆ ನಗರದ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಯಲ್ಲಿ ನಡೆದಿದೆ.

ಖಾಸಗಿ ಶಾಲೆಯ ಬಾಲಕಿ ಮೇಲೆ ಅದೇ ಶಾಲೆಯ ಸೆಕ್ಯೂರಿಟಿ ಗಾರ್ಡ್​ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ನಿನ್ನೆ ಸಂಜೆ ಬಾಲಕಿ ಶಾಲೆ ಮುಗಿಸಿಕೊಂಡು ವಾಪಸ್ ಮನೆಗೆ ಬಂದಾಗ ಹೊಟ್ಟೆ ನೊವಿನಿಂದ ಬಳಲುತ್ತಿದ್ದಳು. ತಕ್ಷಣ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿದ್ದಾರೆ. ಆಗ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದು ಬೆಳಕಿಗೆ ಬಂದಿದೆ.

ಇನ್ನು ಈ ಸಂಬಂಧ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕಿ ಪೊಷಕರು ಶಾಲಾ ಆಡಳಿತ ಮಂಡಳಿಯವರನ್ನು ಮತ್ತು ಕೃತ್ಯವೆಸಗಿದ ಸೆಕ್ಯೂರಿಟಿ ಗಾರ್ಡ್​​ನನ್ನು ತಕ್ಷಣ ಬಂಧಿಸಬೇಕು ಅಂತಾ ಪಟ್ಟು ಹಿಡಿದಿದ್ದಾರೆ.

ಅಲ್ಲದೆ ನಿನ್ನೆ ರಾತ್ರಿ ನೂರಾರು ಪೋಷಕರು ಕೂಡ ಶಾಲೆ ಬಳಿ ಜಮಾಯಿಸಿ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಆದರೆ, ಪರಿಸ್ಥಿತಿ ಕೈ ಮಿರಿ ಹೊಗುವ ಸಂದರ್ಭ ಗಮನಿಸಿದ ಪೊಲೀಸರು ಪೋಷಕರನ್ನು ಚದುರಿಸಿ ವಾಪಸ್​ ಕಳುಹಿಸಿದ್ದಾರೆ. ಇನ್ನು ಪ್ರಕರಣದ ಆರೋಪಿಯನ್ನ ವಶಕ್ಕೆ ಪಡೆದಿರೋ ಪೊಲೀಸರು ವಿಚಾರಣೆ ನಡೆಸ್ತಿದ್ದಾರೆ. ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top