Wednesday, 21st February 2018  

Vijayavani

ಶಾಸಕ ಹ್ಯಾರಿಸ್ ಪುತ್ರ ನಲಪಾಡ್ ಗೂಂಡಾಗಿರಿ ಪ್ರಕರಣ - ಬೌರಿಂಗ್​ ಆಸ್ಪತ್ರೆಯಲ್ಲಿ ಮೆಡಿಕಲ್​ ಟೆಸ್ಟ್​ ಕಂಪ್ಲೀಟ್​​ - ಕೋರ್ಟ್​ಗೆ ಆರೋಪಿಗಳು ಹಾಜರ್​​​        ನಲಪಾಡ್ ಜಾಮೀನು ಅರ್ಜಿ ವಿಚಾರಣೆ ಆರಂಭ - ವಾದ ಮಂಡನೆಗೆ ಅವಕಾಶ ಕೋರಿ ಮಧ್ಯಂತರ ಅರ್ಜಿ - ಸರ್ಕಾರದ ಮೇಲೆ ನಂಬಿಕೆಯಿಲ್ಲ ಎಂದು ಆಲಂ ಪಾಷ ಅರ್ಜಿ        ಇಂದಿನಿಂದ ಬಾಹುಬಲಿ ಹೆಲಿ ಟೂರಿಸಂ - ಜಸ್ಟ್​​​ 2,100 ರೂಪಾಯಿಗೆ 8 ನಿಮಿಷ ಹಾರಾಟ - ಫೆಬ್ರವರಿ 25 ಬರ್ತಿದ್ದಾರೆ ಕೇಂದ್ರ ಗೃಹ ಸಚಿವರು        ಮುಗಿಯದ ಭೈರತಿ ಬಸವರಾಜ್ ಬೆಂಬಲಿಗರ ದರ್ಪ - ಪೇದೆ ಮೇಲೆ ಗೂಂಡಾಗಳ ಹಲ್ಲೆ - ಆರೋಪ ತಳ್ಳಿ ಹಾಕಿದ ಕಾಂಗ್ರೆಸ್​​​​​ ಶಾಸಕ        ಹೋಂ ಮಿನಿಸ್ಟರ್‌ ಹೆಸರಲ್ಲಿ ಭಾರಿ ಆಸ್ತಿ ಆರೋಪ - ದಿಗ್ವಿಜಯ ನ್ಯೂಸ್‌ನಲ್ಲಿ ದಾಖಲೆ ಬಯಲು - ಆರೋಪ ನಿರಾಕರಿಸಿದ ರಾಮಲಿಂಗಾರೆಡ್ಡಿ       
Breaking News

ವಿಶ್ವದ ಅತಿತೂಕದ ಮಹಿಳೆ, 5 ದಿನದಲ್ಲಿ 30 ಕೆ.ಜಿ. ತೂಕ ಇಳಿಕೆ

Friday, 17.02.2017, 12:32 PM       No Comments

ಮುಂಬೈ: ಅತಿಯಾದ ಬೊಜ್ಜಿನ ಸಮಸ್ಯೆಯಿಂದ ಬಳಲುತ್ತಿದ್ದ ಈಜಿಪ್ಟ್​ನ ಎಮನ್ ಅಹಮದ್​ಗೆ ಮುಂಬೈನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಕೇವಲ 5 ದಿನಗಳಲ್ಲಿ 30 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಕೈ-ಕಾಲುಗಳ ಚಲನೆ ಸಹ ಉತ್ತಮಗೊಂಡಿದೆ ಎಂದು ವೈದ್ಯರು ತಿಳಿಸಿದ್ದಾರೆ.

37 ವರ್ಷದ ಎಮನ್ ಅಹಮದ್ ಅವರನ್ನು ವಿಶೇಷ ವಿಮಾನದ ಮೂಲಕ ಈಜಿಪ್ಟ್​ನಿಂದ ಭಾರತಕ್ಕೆ ಕರೆತರಲಾಗಿತ್ತು. ನಂತರ ಅವರಿಗೆ ಮುಂಬೈನ ಸೈಫಿ ಆಸ್ಪತ್ರೆಯಲ್ಲಿ ವಿಶೇಷವಾಗಿ ನಿರ್ಮಿಸಿರುವ ವಾರ್ಡ್​ನಲ್ಲಿ ಚಿಕಿತ್ಸೆ ಪ್ರಾರಂಭ ಮಾಡಲಾಗಿತ್ತು. 3 ವಾರಗಳ ಬಳಿಕ ಎಮನ್ ಅವರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಲು ಚಿಂತಿಸಲಾಗುತ್ತಿದೆ. ಆದರೆ ಅದಕ್ಕೂ ಮುನ್ನ ಎಮನ್ ಅವರ ದೇಹದ ತೂಕವನ್ನು 450 ಕೆ.ಜಿ.ಗಿಂತಲೂ ಕಡಿಮೆ ಮಾಡಬೇಕಿದೆ. ಶಸ್ತ್ರಚಿಕಿತ್ಸೆಯ ಟೇಬಲ್ ಕೇವಲ 450 ಕೆ.ಜಿ ತೂಕ ತಡೆಯುವ ಸಾಮರ್ಥ್ಯ ಹೊಂದಿದೆ. ಹಾಗಾಗಿ ಶಸ್ತ್ರಚಿಕಿತ್ಸೆಗೂ ಮುನ್ನ ಎಮನ್ ಅವರ ದೇಹದ ತೂಕ ಇಳಿಸಲು ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಡಾ. ಮುಫಜಲ್ ಲಖಡ್​ವಾಲಾ ತಿಳಿಸಿದ್ದಾರೆ.

ಈ ವರ್ಷಾಂತ್ಯದ ವೇಳೆಗೆ ಎಮನ್ ಅವರ ದೇಹದ ತೂಕವನ್ನು 200 ಕೆ.ಜಿಗೆ ಇಳಿಸುವ ಗುರಿಯನ್ನು ಹೊಂದಲಾಗಿದೆ. ಪ್ರಸ್ತುತ ಹೆಚ್ಚು ಪ್ರೋಟೀನ್ ಇರುವ ನಾರಿನಂಶ ಹೆಚ್ಚಾಗಿರುವ ಆಹಾರ ಮಾತ್ರ ನೀಡಲಾಗುತ್ತಿದೆ. ಎಮನ್ ಅವರಿಗೆ ದಿನಕ್ಕೆ 1200 ಕ್ಯಾಲೊರಿ ಆಹಾರ ಮಾತ್ರ ನೀಡಲಾಗುತ್ತಿದೆ. ಎಮನ್ ಅವರು ಕಿಡ್ನಿ ಸಮಸ್ಯೆಯಿಂದಲೂ ಸಹ ಬಳಲುತ್ತಿರುವುದರಿಂದ ನಿಯಮಿತವಾಗಿ ಡಯಾಲಿಸಿಸ್ ಮಾಡಲಾಗುತ್ತಿದೆ. ಜತೆಗೆ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚಿನ ಪ್ರಮಾಣದ ದ್ರವಗಳನ್ನು ಹೊರಗೆ ತೆಗೆಯಲಾಗುತ್ತಿದೆ. ಆಕೆಗೆ ನಿಯಮಿತವಾಗಿ ಫಿಸಿಯೋ ಥೆರಪಿ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ವಾರದ ಚಿಕಿತ್ಸೆಯ ನಂತರ ಎಮನ್ ಈಗ ಕೈ-ಕಾಲುಗಳನ್ನು ಚಲನೆ ಮಾಡಲು ಸಾಧ್ಯವಾಗುತ್ತಿದೆ ಎಂದು ಲಖಡ್​ವಾಲಾ ತಿಳಿಸಿದ್ದಾರೆ.

ಎಮನ್ ಅವರ ಮೆಡಿಕಲ್ ವೀಸಾ ಅವಧಿ ಮಾರ್ಚ್ 7 ಕ್ಕೆ ಮುಕ್ತಾಯವಾಗಲಿದ್ದು, ಹೊಸದಾಗಿ ವೀಸಾ ಪಡೆಯುವ ಸಂಬಂಧ ಆಸ್ಪತ್ರೆಯ ಅಧಿಕಾರಿಗಳು ಶೀಘ್ರ ವಿದೇಶಾಂಗ ಸಚಿವಾಲಯವನ್ನು ಸಂರ್ಪಸಲಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

– ಏಜೆನ್ಸೀಸ್

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top