Friday, 22nd September 2017  

Vijayavani

1. ಸಮಾವೇಶಕ್ಕೆ ಲಕ್ಷ ಮಂದಿ ಸೇರಿಸೋ ಟಾರ್ಗೆಟ್​- ಬರದಿದ್ರೆ ಅಕ್ಕಿ ಕಟ್​​, ಬ್ಯಾಂಕ್​ ಸಬ್ಸಿಡಿಗೆ ಬ್ರೇಕ್​- ಫಲಾನುಭವಿಗಳಿಗೆ ಕೈ ಕಾರ್ಯಕರ್ತರ ಬೆದರಿಕೆ 2. ಕೊಟ್ಟ ಮಾತು ಮರೆತ ಸಿಎಂ ಸಿದ್ದರಾಮಯ್ಯ- 8 ತಿಂಗಳಾದ್ರೂ ಕುಟುಂಬಸ್ಥರಿಗೆ ಸಿಗದ ಪರಿಹಾರ- ಇದೇನಾ ನುಡಿದಂತೆ ನಡೆಯುವ ಸರ್ಕಾರ..? 3. ಎಸ್​​.ಎಂ.ಕೃಷ್ಣ ಅಳಿಯನ ಮನೆ ಕಚೇರಿ ತಲಾಷ್​​- ಎರಡನೇ ದಿನವೂ ಮುಂದುವರಿದ ಪರಿಶೀಲನೆ- ಹುಡುಕಿದಷ್ಟು ಪತ್ತೆಯಾಗ್ತಿದೆ ದಾಖಲೆ ಪತ್ರ 4. ಗದಗದಲ್ಲಿ ಹನಿ ನೀರಿಗಾಗಿ ಹೋರಾಟ- 6 ಸಾವಿರ ಜನಕ್ಕೆ ಟ್ಯಾಂಕರ್​ ನೀರೇ ಆಧಾರ- ಜನರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ 5. ಮೈಸೂರು ದಸರಾಗೆ ಜನವೋ ಜನ- ಅತ್ತೆ, ಸೊಸೆ ಜೊತೆ ಜೊತೆ ಮಾಡಿದ್ರು ನಳಪಾಕ- ಕೆಲವೇ ಕ್ಷಣಗಳಲ್ಲಿ ಯುವ ದಸರಾಗೆ ಚಾಲನೆ
Breaking News :

ಡಿವೈಡರ್​ಗೆ ಡಿಕ್ಕಿ ಹೊಡೆದ ಕಾರು: ಮಗು ಸೇರಿ ಐವರ ಸಾವು

Monday, 21.08.2017, 2:31 PM       No Comments

ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಐವರು ಮೃತಪಟ್ಟ ಘಟನೆ ಹಾವೇರಿಯ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದಿದೆ.

ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಂಕಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಮಾರ್ಗವಾಗಿ ದಾವಣಗೆರೆಗೆ ತೆರಳುತ್ತಿದ್ದ ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ ಒಬ್ಬರು ಶಿಗ್ಗಾಂವಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಗಾಯ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ದಾವಣಗೆರೆ ಜಿಲ್ಲೆಯ ಹರಿಹರ ಮೂಲದವರು ಎನ್ನಲಾಗಿದೆ. ಬಂಕಾಪುರ ಪೊಲಿಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top