Wednesday, 17th October 2018  

Vijayavani

ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ -  ಸಂಜೆ 6.15ರಿಂದ 6.45ರೊಳಗೆ ಉಕ್ಕಿಹರಿಯಲಿದೆ ಜೀವನದಿ ಕಾವೇರಿ        ಪವಿತ್ರ ತೀರ್ಥಕ್ಕಾಗಿ ಹರಿದು ಬಂದಿದೆ ಭಕ್ತರ ದಂಡು - ತಲಕಾವೇರಿಯಲ್ಲಿ ಬಿಗಿ ಬಂದೋಬಸ್ತ್​ - ಸಿಎಂ ಕುಮಾರಸ್ವಾಮಿ ಉಪಸ್ಥಿತಿ        ನಿಗದಿಯಂತೆ ಬಾಗಿಲು ತೆರೆದ ಅಯ್ಯಪ್ಪ ದೇಗುಲ - ಮಹಿಳಾ ಭಕ್ತರಿಗೆ ಸಿಗಲೇ ಇಲ್ಲ ಮಣಿಕಂಠನ ದರ್ಶನ        ಶಬರಿಮಲೆಯಲ್ಲಿ ಭಾರೀ ಹಿಂಸಾಚಾರ ಹಿನ್ನೆಲೆ - ಪಂಪಾ, ನೀಲಕ್ಕಲ್ ಸೇರಿ 4 ಕಡೆ ನಿಷೇಧಾಜ್ಞೆ ಜಾರಿ - 144 ಸೆಕ್ಷನ್ ಆದೇಶ        ಮೀಟೂ ಅಭಿಯಾನಕ್ಕೆ ಮೊದಲ ವಿಕೆಟ್‌ ಪತನ - ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್‌ ರಾಜೀನಾಮೆ       
Breaking News

ನೀಟ್​ ಪರೀಕ್ಷಾ ಒತ್ತಡ: 60 ದಿನದಲ್ಲಿ 50 ವಿದ್ಯಾರ್ಥಿಗಳ ಆತ್ಮಹತ್ಯೆ

Friday, 20.10.2017, 7:52 AM       No Comments

ಹೈದರಾಬಾದ್​: ಈ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಹೆಚ್ಚು ಸ್ಕೋರ್​ ಮಾಡುವ ಒತ್ತಡಕ್ಕೆ ಸಿಲುಕಿದ್ದಾರೆ. ಅದಕ್ಕೆ ತಕ್ಕಂತೆ ಮನೆ, ಶಾಲೆ-ಕಾಲೇಜು ಮತ್ತು ಕೋಚಿಂಗ್​ ಸೆಂಟರ್​ಗಳಲ್ಲಿ ವಿದ್ಯಾರ್ಥಿಗಳ ಮೇಲೆ ಚೆನ್ನಾಗಿ ಓದುವಂತೆ ಅತಿಯಾದ ಒತ್ತಡ ಹೇರಲಾಗುತ್ತದೆ. ಆದರೆ ಈ ಒತ್ತಡವೇ ವಿದ್ಯಾರ್ಥಿಗಳ ಬದುಕಿಗೆ ಉರುಳಾಗುತ್ತಿದ್ದು, ಅತಿಯಾದ ಒತ್ತಡ ತಡೆಯಲಾರದೆ ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಕಳೆದ 60 ದಿನಗಳಲ್ಲಿ 50 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ.

ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ದೇಶಾದ್ಯಂತ ಏಕರೂಪದ ನೀಟ್​ ಪರೀಕ್ಷೆ ಜಾರಿಗೊಳಿಸಲಾಗಿದೆ. ಆದರೆ ಇದು ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಕಂಟಕವಾಗಿ ಪರಿಣಮಿಸಿದೆ. ಹೀಗಾಗಿ ಕಾಲೇಜು, ಕೋಚಿಂಗ್ ಸೆಂಟರ್‌ಗಳಲ್ಲಿ ವಿದ್ಯಾರ್ಥಿಗಳ ಓದಿಗೆ ಹೆಚ್ಚಿನ ಪ್ರೆಶರ್ ಹಾಕಲಾಗುತ್ತಿದೆ. ಇದರಿಂದಾಗಿ ಆಂಧ್ರಪ್ರದೇಶ ಹಾಗೂ ತೆಲಂಗಾಣದಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಾಗುತ್ತಿದೆ.

ಇದಕ್ಕೆ ತಾಜಾ ಉದಾಹರಣೆಯೆಂದರೆ ಕಳೆದ ಸೋಮವಾರ ಹೈದರಾಬಾದ್​ನ ಪ್ರತಿಭಾವಂತ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಆಕೆ ನೀಟ್​ ಪರೀಕ್ಷೆಗಾಗಿ ತಯಾರಿ ನಡೆಸುತ್ತಿದ್ದಳು, ಆದರೆ ಆಕೆ ಇದ್ದಕ್ಕಿದ್ದಂತೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಮಿಳುನಾಡಿನಲ್ಲಿ ನೀಟ್​ ಪರೀಕ್ಷೆ ವಿರುದ್ಧ ಕಾನೂನು ಹೋರಾಟ ಮಾಡಿದ್ದ ಅನಿತಾ ಸಹ ಆತ್ಮಹತ್ಯೆ ಮಾಡಿಕೊಂಡಿದ್ದರು. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top