Monday, 11th December 2017  

Vijayavani

1. ಜಮ್ಮುವಿನಲ್ಲಿ ಗುಂಡಿನ ಚಕಮಕಿ- ಯೋಧರ ಗುಂಡೇಟಿಗೆ ಮೂವರು ಉಗ್ರರು ಮಟಾಶ್​​​- ಒಬ್ಬ ಜೀವಂತವಾಗಿ ಸೆರೆ, ವಿಚಾರಣೆ 2. ರವಿ ಬೆಳಗೆರೆ ಕಸ್ಟಡಿ ಅವಧಿ ಇಂದಿಗೆ ಅಂತ್ಯ- ಮಧ್ಯಾಹ್ನ ನ್ಯಾಯಾಲಯಕ್ಕೆ ಪತ್ರಕರ್ತ ಹಾಜರು- ಜಾಮೀನು ಕೊಡ್ತಾರಾ ನ್ಯಾಯಾಧೀಶರು..? 3. ಮಕ್ಕಳ ಮೊಟ್ಟೆ ಗುತ್ತಿಗೆದಾರರ ಹೊಟ್ಟೆಗೆ- ಕೊಪ್ಪಳದಲ್ಲಿ ನಡೆದಿದೆ ಮೊಟ್ಟೆ ಗೋಲ್​​ಮಾಲ್​- ಡಿಸಿ ಸೇರಿ ನಾಲ್ವರ ವಿರುದ್ಧ ಲೋಕಾಯುಕ್ತಕ್ಕೆ ದೂರು 4. ಸರ್ಕಾರಿ ಜಾಗದ ಮೇಲೆ ಬಿಲ್ಡರ್​ ಕಣ್ಣು- ರಾತ್ರೋರಾತ್ರೊ ಮನೆ ಖಾಲಿಗೆ ಆವಾಜ್​​- ಹುಬ್ಬಳ್ಳಿಯಲ್ಲಿ ದಯಾಮರಣಕ್ಕೆ 12 ಕುಟುಂಬದಿಂದ ಅರ್ಜಿ 5. ಗುತ್ತಿಗೆದಾರರ ಬಳಿ ಸರ್ಕಾರಿ ಫೈಲ್​​​​​ ಪ್ರಕರಣ- ಸ್ಪಷ್ಟನೆ ಕೋರಿ ಎಇಇಗೆ ನೋಟಿಸ್​​​- ಇದು ದಿಗ್ವಿಜಯ ನ್ಯೂಸ್​​ ಬಿಗ್​​ ಇಂಪ್ಯಾಕ್ಟ್​​​​
Breaking News :

6 ಗಂಟೆ, 4 ಸಾವಿರ ಜನರಿಂದ ಕೀರ್ತನೆ ಇಂದು

Sunday, 20.08.2017, 3:00 AM       No Comments

ರಾಯಚೂರು:  ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಗಿನ್ನೆಸ್ ದಾಖಲೆಗಾಗಿ ಆ.20 ರಂದು ನಿರಂತರ 6 ಗಂಟೆ ಕಾಲ ಹರಿದಾಸರು ರಚಿಸಿದ ಆಂಜನೇಯ ಸ್ವಾಮಿಯ ಕೀರ್ತನೆಗಳ ಗಾಯನ ಕಾರ್ಯಕ್ರಮ ನಡೆಯಲಿದೆ ಎಂದು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದ್ದಾರೆ.

ಮಂತ್ರಾಲಯದಲ್ಲಿ ಸುದ್ದಿಗಾರ ರೊಂದಿಗೆ ಶನಿವಾರ ಮಾತನಾಡಿದ ಅವರು, ತಮಿಳುನಾಡು, ಒರಿಸ್ಸಾ, ದೆಹಲಿ, ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರ, ಕರ್ನಾಟಕ ಸೇರಿ 7 ರಾಜ್ಯಗಳ ವಿವಿಧ ಭಜನಾ ಮಂಡಳಿಗಳ ಸುಮಾರು 4 ಸಾವಿರ ಜನರು ಏಕಕಾಲಕ್ಕೆ ಕೀರ್ತನೆಗಳನ್ನು ಹಾಡಲಿದ್ದಾರೆ. ಶ್ರೀಮಠದ ಮುಂಭಾಗದಲ್ಲಿರುವ ಸಭಾ ಮಂಟಪದಲ್ಲಿ ಶ್ರೀ ಗುರುಸಾರ್ವಭೌಮ ದಾಸ ಪ್ರಾಜೆಕ್ಟ್ ನೇತೃತ್ವದಲ್ಲಿ ಈ ಕಾರ್ಯಕ್ರಮ ಜರುಗಲಿದೆ ಎಂದು ತಿಳಿಸಿದರು.

ಕನ್ನಡ ಬಾರದ ಬೇರೆ ರಾಜ್ಯಗಳ ಭಜನಾ ಮಂಡಳಿಗಳ ಸದಸ್ಯರೂ ಕನ್ನಡದ ಕೀರ್ತನೆಗಳನ್ನು ಕಂಠಪಾಠ ಮಾಡಿ ಹಾಡುವುದು ವಿಶೇಷವಾಗಿದೆ. ದಾಸ ಸಾಹಿತ್ಯ ಪ್ರಾಜೆಕ್ಟ್ ವತಿಯಿಂದ ದಾಸ ಸಾಹಿತ್ಯದ ಪ್ರಚಾರ, ಪ್ರಕಾಶನದ ಜತೆ ಭಜನಾ ಮಂಡಳಿಗಳ ಸದಸ್ಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು. ಶ್ರೀಮಠದ ಸಹಾಯಕ ವ್ಯವಸ್ಥಾಪಕ ಐ.ಪಿ.ನರಸಿಂಹಮೂರ್ತಿ ಉಪಸ್ಥಿತರಿದ್ದರು.

100 ಎಕರೆ ಪ್ರದೇಶದಲ್ಲಿ ಕೆರೆ ನಿರ್ಮಾಣ

ಬೇಸಿಗೆಯಲ್ಲಿ ತುಂಗಭದ್ರಾ ನದಿಯಲ್ಲಿ ನೀರಿನ ಸಮಸ್ಯೆಯಿಂದಾಗಿ ಕುಡಿವ ನೀರಿಗಾಗಿ 100 ಎಕರೆ ಪ್ರದೇಶದಲ್ಲಿ ಕೆರೆ ನಿರ್ವಣಕ್ಕೆ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಗೋಶಾಲೆ ಮುಂಭಾಗದಲ್ಲಿರುವ ಸ್ಥಳ ಗುರುತಿಸಲಾಗಿದೆ. ನದಿಯಿಂದ ಪೈಪ್​ಲೈನ್ ಮೂಲಕ ಕೆರೆ ತುಂಬಿಸುವ ಚಿಂತನೆಯಿದೆ. ತುಂಗಭದ್ರಾ ಮತ್ತು ಚಿಲಕನಡೋಣಿ ಗ್ರಾಮಕ್ಕೆ ಶ್ರೀಮಠದ ವತಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಮಂತ್ರಾಲಯದಲ್ಲಿ ಒಳಚರಂಡಿ, ಸ್ನಾನಘಟ್ಟ ನಿರ್ವಣಕ್ಕೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಅಲ್ಲಿಂದ ತೆಲಂಗಾಣ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ರಂಗಭವನದಲ್ಲಿ ಮ್ಯೂಜಿಯಂ, ಗಜ ಶಾಲೆ ಪಕ್ಕದ 3.45 ಎಕರೆ ಪ್ರದೇಶದಲ್ಲಿ ಅಕ್ಷರ ಧಾಮ ಮಾದರಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಯೋಜನೆ ಶೀಘ್ರದಲ್ಲಿ ಆರಂಭಿಸಲಾಗುವುದು ಎಂದು ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದರು. ವಿದ್ವಾಂಸರ ಸಮಾವೇಶ 21ಕ್ಕೆ

ಶ್ರೀಮಠದಲ್ಲಿ ಆ.21ರಂದು ವಿದ್ವಾಂಸರ ಸಮಾವೇಶ ನಡೆಯಲಿದ್ದು, ರಾಯರ ಮಠಕ್ಕೆ ಸೇರಿದ ದೇಶದ ವಿವಿಧ ರಾಜ್ಯಗಳ 300ಕ್ಕೂ ಹೆಚ್ಚು ವಿದ್ವಾಂಸರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮಾವೇಶದಲ್ಲಿ ಧರ್ಮ ಪ್ರಚಾರಕ್ಕೆ ಎದುರಾಗುತ್ತಿರುವ ಸಮಸ್ಯೆಗಳು ಹಾಗೂ ಶ್ರೀಮಠದ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುವುದು ಎಂದು ಮಂತ್ರಾಲಯ ಶ್ರೀಗಳು ತಿಳಿಸಿದ್ದಾರೆ.

 

Leave a Reply

Your email address will not be published. Required fields are marked *

Back To Top