Sunday, 23rd September 2018  

Vijayavani

ಯಾರಿಂದಲೂ ದಬ್ಬಿಸಿಕೊಂಡು ಹೋಗಲ್ಲ - ಕೆಲಸ ಮಾಡದಿದ್ರೆ ಗೌರಯುತ ನಿರ್ಗಮನ - ಎಚ್‌ಡಿಕೆಯಿಂದ ರಾಜಕೀಯ ನಿವೃತ್ತಿ ಮಾತು        ಅಕ್ಟೋಬರ್‌ 10 ರೊಳಗೆ ಸಂಪುಟ ವಿಸ್ತರಣೆ - ಅತೃಪ್ತಿ ಶಮನಕ್ಕೆ ಶೀಘ್ರ ಕ್ರಮ - ಬ್ಲ್ಯಾಕ್‌ಮೇಲರ್‌ಗಳಿಗೆ ವೇಣುಗೋಪಾಲ್‌ ವಾರ್ನಿಂಗ್‌        ದುನಿಯಾ ವಿಜಿ ದಾದಾಗಿರಿ - ವಿಕ್ರಂ ಆಸ್ಪತ್ರೆಗೆ ಸಿಸಿಬಿ ಪೊಲೀಸರ ಭೇಟಿ - ಮಾರುತಿ ಬಳಿ ಹೇಳಿಕೆ ಪಡೆಯದೆ ಪೊಲೀಸರು ವಾಪಸ್‌        ಜಿಮ್ ಟ್ರೈನರ್ ಮೇಲೆ ಹಲ್ಲೆ, ಕಿಡ್ನಾಪ್ ಕೇಸ್ - ಫಿಲಂ ಚೇಂಬರ್​ನಿಂದ ನಾಳೆ ಮೀಟಿಂಗ್ - ದುನಿಯಾ ವಿಜಿ ವಿರುದ್ಧ ಕ್ರಮ ಸಾಧ್ಯತೆ        ಆಯುಷ್ಮಾನ್ ಭಾರತ್ ಯೋಜನೆ ಜಾರಿ - 50 ಕೋಟಿ ಜನರಿಗೆ ಲಾಭ, 5 ಲಕ್ಷವರೆಗೆ ವಿಮೆ - ರಾಂಚಿಯಲ್ಲಿ ಪ್ರಧಾನಿಯಿಂದ ಚಾಲನೆ        ಆಂಧ್ರದಲ್ಲಿ ಹಾಡಹಗಲೇ ನಕ್ಸಲರ ಅಟ್ಟಹಾಸ - ಶಾಸಕ, ಮಾಜಿ ಶಾಸಕನ ಭೀಕರ ಹತ್ಯೆ - 50ಕ್ಕೂ ಹೆಚ್ಚು ನಕ್ಸಲರಿಂದ ರಕ್ತದೋಕುಳಿ       
Breaking News

ವಿಷಕಾರಿ ಅನಿಲ ಸೋರಿಕೆಯಿಂದ 6 ಜನ ಕಾರ್ಮಿಕರ ಸಾವು

Thursday, 12.07.2018, 7:50 PM       No Comments

ಹೈದರಾಬಾದ್‌: ಖಾಸಗಿ ಸ್ಟೀಲ್‌ ಮಿಲ್‌ ರೋಲಿಂಗ್‌ ಘಟಕದಲ್ಲಿ ವಿಷಕಾರಿ ಅನಿಲ ಸೋರಿಕೆಯಾಗಿ ಆರು ಜನ ಕಾರ್ಮಿಕರು ಮೃತಪಟ್ಟಿರುವ ಘಟನೆ ಅನಂತಪುರ ಜಿಲ್ಲೆಯಲ್ಲಿ ನಡೆದಿದೆ.

ತಡಿಪತ್ರಿ ಪ್ರದೇಶದಲ್ಲಿದ್ದ ಸ್ಟೀಲ್‌ ಮಿಲ್‌ ಘಟಕದಲ್ಲಿ ನಿರ್ವಹಣೆ ಕಾರ್ಯ ಮುಗಿದ ನಂತರ ಪರೀಕ್ಷೆ ನಡೆಸುತ್ತಿದ್ದ ವೇಳೆ ಅನಿಲ ಸೋರಿಕೆಯಾಗಿ ಅವಗಢ ಸಂಭವಿಸಿದೆ ಎಂದು ಎಸ್‌ಪಿ ಜಿ ಅಶೋಕ್‌ ಕುಮಾರ್‌ ತಿಳಿಸಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರ್ಬನ್‌ ಮಾನಾಕ್ಸೈಡ್‌ ಸೋರಿಕೆಯೇ ಅವಘಡಕ್ಕೆ ಕಾರಣವಾಗಿದೆ.

ಸದ್ಯಕ್ಕೆ ರಕ್ಷಣಾ ಕಾರ್ಯಾಚರಣೆ ಸಾಗಿದ್ದು, ಇನ್ನು ಎಷ್ಟು ಜನ ಗಾಯಗೊಂಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ ಎಂದು ತಿಳಿಸಿದ್ದಾರೆ.

ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಎನ್‌. ಚೀನಾ ರಾಜಪ್ಪ ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. (ಏಜೆನ್ಸೀಸ್)

Leave a Reply

Your email address will not be published. Required fields are marked *

Back To Top