Tuesday, 16th January 2018  

Vijayavani

ಮತ್ತೊಂದು ಟ್ವೀಟ್‌ ಮಾಡಿ ಕೆಣಕಿದ ಪಾಲ್ಯೇಕರ್ - ಕಣಕುಂಬಿ ಕಾಮಗಾರಿ ಪರಿಶೀಲನೆಗೆ ನಾಲ್ವರ ತಂಡ ರಚನೆ - ಗೋವಾ ಸಚಿವನ ವಿರುದ್ಧ ಸಿಎಂ ಆಕ್ರೋಶ        ಪರಮೇಶ್ವರ್‌ಗೂ ಕಂಟಕವಾಯ್ತು ಸದಾಶಿವ ಆಯೋಗ - ವರದಿ ವಿರೋಧಿಸಿದ್ದಕ್ಕೆ ಸ್ವಕ್ಷೇತ್ರದಲ್ಲೇ ಆಕ್ರೋಶ - ಮತ ಹಾಕದಿರಲು ಮಾದಿಗ ಮುಖಂಡರ ನಿರ್ಧಾರ        ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಮತ್ತೆ ಕೀಚಕ ಕೃತ್ಯ - ಇಂದಿರಾನಗರ ಪೊಲೀಸರಿಂದ ಇಬ್ಬರು ಆರೋಪಿಗಳ ಸೆರೆ - ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆಗೆ ಆಕ್ರೋಶ        ಕೊನೆಗೂ ಮೌನ ಮುರಿದ ಸುಪ್ರೀಂಕೋರ್ಟ್‌ ಸಿಜೆ - ಬಂಡಾಯ ನ್ಯಾಯಮೂರ್ತಿಗಳ ಜತೆ ದೀಪಕ್‌ ಮಿಶ್ರ ಚರ್ಚೆ - 15 ನಿಮಿಷಗಳ ಕಾಲ ಸಂಧಾನ ಮಾತುಕತೆ        ಚೆಂಡು ನೆಲಕ್ಕೆ ಎಸೆದ ವಿರಾಟ್‌ಗೆ ಐಸಿಸಿ ತರಾಟೆ - ಟೆಸ್ಟ್‌ ಕ್ರಿಕೆಟ್‌ನಲ್ಲಿ ಸಿಟ್ಟಾದ ಕೊಹ್ಲಿಗೆ ದಂಡ - ಪಂದ್ಯದ 25 ಪರ್ಸೆಂಟ್‌ ಸಂಭಾವನೆ ಕಡಿತ       
Breaking News :

ರಾಜ್ಯದ ಮೂರು ಪ್ರತ್ಯೇಕ ರಸ್ತೆ ಅಫಘಾತಗಳಲ್ಲಿ 6 ಸಾವು

Tuesday, 02.01.2018, 10:13 AM       No Comments

ಬ್ಯಾರಿಕೇಡ್​ಗೆ ಬೈಕ್​ ಡಿಕ್ಕಿ: 2 ಸಾವು

ಮಂಡ್ಯ: ಬ್ಯಾರಿಕೇಡ್​ಗೆ ​ಡಿಕ್ಕಿಹೊಡೆದು ಇಬ್ಬರು ಬೈಕ್​ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ತೊಳಲಿ ಚೆಕ್​ಪೋಸ್ಟ್​ ಬಳಿ ನಡೆದಿದೆ.

ಬೆಳ್ಳೂರು ಕ್ರಾಸ್​ ಕಡೆಯಿಂದ ನಾಗಮಂಗಲಕ್ಕೆ ಬರುತ್ತಿದ್ದಾಗ ತಡರಾತ್ರಿ ಅಪಘಾತ ನಡೆದಿದೆ. ನಾಗಮಂಗಲ ನಿವಾಸಿಗಳಾದ ಪ್ರದೀಪ್​, ಪವನ್, ಮೃತ ದುರ್ದೈವಿಗಳು. ನಾಗಮಂಗಲ ಪಟ್ಟಣ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಘಟನೆ.

ಮರಕ್ಕೆ ಕಾರು ಡಿಕ್ಕಿ: ಮೂವರು ಸಾವು

ನಿಪ್ಪಾಣಿ: ಮರಕ್ಕೆ ಕಾರು ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ಮೂವರು ಮೃತ ಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕ ವಾಗಿದೆ.

ಸಾವಿತ್ತಿ ಗುಪ್ತಾ, ಆರತಿ ಹಾಗೂ ಶೋಭಾ ಗುಪ್ತಾ ಮೃತ ದುರ್ದೈವಿಗಳು. ಗೋವಾದಲ್ಲಿ ಹೊಸ ವರ್ಷಾಚರಣೆ ಮುಗಿಸಿ ಮುಂಬೈಗೆ ಮರಳುವಾಗ ಈ ದುರ್ಘಟನೆ ಸಂಭವಿಸಿದೆ.

ಮೂವರು ಗಾಯಾಳುಗಳನ್ನು ಕೊಲ್ಲಾಪುರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.

ಬನಶಂಕರಿ ಪಾದಯಾತ್ರಿ ಸಾವು

ಬಾಗಲಕೋಟೆ: ಬನಶಂಕರಿ ಜಾತ್ರೆಗೆ ಪಾದಯಾತ್ರೆ ಮೂಲಕ ತೆರಳುತ್ತಿದ್ದ ಭಕ್ತನಿಗೆ ಬೈಕ್​ ಡಿಕ್ಕಿ ಹೊಡೆದು ಮೃತ ಪಟ್ಟಿರುವ ಘಟನೆ ನಡೆದಿದೆ.
ಜಿಲ್ಲೆಯ ಬದಾಮಿಯ ಹಲಕುರ್ಕಿ ಬಳಿ ಈ ಘಟನೆ ನಡೆದಿದ್ದು, ಕೆರೂರ ಪಟ್ಟಣದ ನಿವಾಸಿ ರಾಜು ಡೊಳ್ಳಿ (35) ಎಂಬ ವ್ಯಕ್ತಿ ಮೃತ ದುರ್ದೈವಿ.

Leave a Reply

Your email address will not be published. Required fields are marked *

Back To Top