Friday, 23rd March 2018  

Vijayavani

ರಾಜ್ಯಸಭೆ ಚುನಾವಣೆಯಲ್ಲಿ ಅಕ್ರಮ ನಡೆದಿಲ್ಲ- ಎಚ್​ಡಿಕೆ ಆರೋಪದಲ್ಲಿ ಹುರುಳಿಲ್ಲ- ಜೆಡಿಎಸ್‌ ನಡೆ ಬಗ್ಗೆ ಸಿಎಂ ಆಕ್ರೋಶ        ಕಾಗೋಡು, ಚಿಂಚನಸೂರು ಅಡ್ಡಾದಿಡ್ಡಿ ಮತದಾನ- ಜೆಡಿಎಸ್​ ರೆಬೆಲ್ಸ್​ನಿಂದ ಮತ್ತೇ ಅಡ್ಡ ಮತದಾನ- ಮತಗಟ್ಟೆಯಲ್ಲಿ ಹಲವು ಹೈಡ್ರಾಮಾ        ಲಿಂಗಾಯತ ಪ್ರತ್ಯೇಕ ಧರ್ಮ ಶಿಫಾರಸು ವಿಚಾರ- ವೀರಶೈವ ಮಹಾಸಭಾದಿಂದ ಮಹತ್ವದ ಸಭೆ- ಶಾಮನೂರು ನೇತೃತ್ವದಲ್ಲಿ ಮೀಟಿಂಗ್‌        ತೋಟದಲ್ಲಿ ಲೀಕಾಯ್ತು SSLC ಪೇಪರ್- ಪ್ರಶ್ನೆಪತ್ರಿಕೆ ವಾಹನದಲ್ಲಿ ವಿದ್ಯಾರ್ಥಿ ಕರೆತಂದಿದ್ದ ಶಿಕ್ಷಕ ಡಿಬಾರ್- ಮೊದಲ ದಿನವೇ ಎಕ್ಸಾಂ ಅವಾಂತರ        ರಾಜಧಾನಿ ಅನತಿ ದೂರದಲ್ಲೇ ಕಳ್ಳಬಟ್ಟಿ ದಂಧೆ- ಅಬಕಾರಿ ಅಧಿಕಾರಿಗಳ ಮಿಂಚಿನ ಕಾರ್ಯಾಚರಣೆ- ಆಪರೇಷನ್ ಸೇಂದಿ​ಗೆ ದಿಗ್ವಿಜಯ ನ್ಯೂಸ್ ಸಾಥ್​       
Breaking News

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, 65 ವರ್ಷದ ‘ಫಾದರ್​’ ಅರೆಸ್ಟ್

Tuesday, 10.10.2017, 11:48 AM       No Comments

ತಿರುವನಂತಪುರ: ಇಲ್ಲಿನ ಚರ್ಚೊಂದರ 65 ವರ್ಷದ ಫಾದರ್​ 10 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅಮಾನವೀಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ಆರೋಪಿ ಫಾದರ್​ನನ್ನು ಬಂಧಿಸಲಾಗಿದ್ದು, ಬಂಧಿತನನ್ನು ದೇವರಾಜ್​ ಎಂದು ಹೇಳಲಾಗಿದೆ. ಈತ ಬೈಬಲ್​ ಅಧ್ಯಯನಕ್ಕೆಂದು ಬಂದಿದ್ದ 10 ವರ್ಷದ ಬಾಲಕಿ ಮೇಲೆ ತನ್ನ ಕಾಮ ಪ್ರವೃತ್ತಿ ಮೆರೆದಿದ್ದಾನೆ.

ಘಟನೆ ಹಿನ್ನೆಲೆ:
ಭಾನುವಾರ ಬೈಬಲ್​ ಅಧ್ಯಯನಕ್ಕೆಂದು ಚರ್ಚಿಗೆ ಹೋದ ಬಾಲಕಿಯನ್ನು ಅಧ್ಯಯನ ಮುಗಿದ ಬಳಿಕ ಮರಳಿ ಕರೆತರಲು ಬಾಲಕಿ ತಂದೆ ಚರ್ಚಿಗೆ ಹೋಗಿದ್ದಾರೆ. ಈ ವೇಳೆ ಅಲ್ಲಿನ ಫಾದರ್​ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದುದ್ದನ್ನು ನೋಡಿ ಗಾಬರಿಗೊಂಡ ತಂದೆ ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ.

ಪೋಕ್ಸೋ ಪ್ರಕರಣದಡಿ ದೂರು ದಾಖಲಿಸಿಕೊಂಡ ಪೊಲೀಸರು ಸೋಮವಾರ ಆರೋಪಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top