Wednesday, 18th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಕೊಡವರ ನೆರವಿಗೆ ಬರುವಂತೆ ಸಿಎಂಗೆ ಮೊರೆ: ವಿಡಿಯೋದಲ್ಲಿ ವಿದ್ಯಾರ್ಥಿಯ ಆರ್ತನಾದ

Saturday, 14.07.2018, 12:39 PM       No Comments

ಮಡಿಕೇರಿ: ಕಳೆದ ಹಲವು ದಿನಗಳಿಂದ ಕೊಡಗಿನಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮಳೆಯಿಂದಾಗಿ ಕೊಡವರು ಕಂಗಾಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಮ್ಮ ನೆರವಿಗೆ ಬರಬೇಕು ಎಂದು ಬಾಲಕನೊಬ್ಬ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ವಿಡಿಯೋ ಮೂಲಕ ಮನವಿ ಮಾಡಿದ್ದಾನೆ.

ಕೊಡಗಿನ 8ನೇ ತರಗತಿಯ ವಿದ್ಯಾರ್ಥಿ ಫತಹ್​ ಎಂಬಾತ ಕೊಡವರ ಸಂಕಷ್ಟದ ಕುರಿತು 5 ನಿಮಿಷಗಳ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಟ್ಟಿದ್ದಾನೆ. ಈಗ ಈ ವಿಡಿಯೋ ವೈರಲ್​ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ.

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಎಮ್ಮೆಮಾಡು ಗ್ರಾಮದ ಕಾವೇರಿ ನದಿತಟದಲ್ಲಿ ನಿಂತು ಸತತ ಮಳೆಯಿಂದಾಗಿ ರೈತರಿಗೆ ಹೆಚ್ಚಿನ ನಷ್ಟವಾಗುತ್ತಿದೆ. ಉಕ್ಕಿ ಹರಿಯುತ್ತಿರುವ ನದಿಯಿಂದಾಗಿ ಭತ್ತದ ಗದ್ದೆಗಳು ಜಲಾವೃತವಾಗಿವೆ. ಇತರ ಬೆಳೆಗಳಿಗೆ ಕೊಳೆ ರೋಗದ ಸಮಸ್ಯೆ ಕಾಡುತ್ತಿದೆ.

ಕೊಡಗಿನ ಜನತೆ ಇಷ್ಟೆಲ್ಲಾ ಕಷ್ಟಗಳನ್ನು ಅನುಭವಿಸುತ್ತಿದ್ದರೂ ಸರ್ಕಾರ ಮಾತ್ರ ನಮ್ಮ ಸಮಸ್ಯೆಗೆ ಸ್ಪಂದಿಸಿಲ್ಲ. ಬಜೆಟ್​ನಲ್ಲೂ ಸಹ ಕೊಡಗಿಗೆ ಸೂಕ್ತ ಅನುದಾನ ನೀಡಿಲ್ಲ. ನಮ್ಮ ಜಿಲ್ಲೆಯನ್ನು ಅನಾಥ ಮಾಡಬೇಡಿ ಎಂದು ಬಾಲಕ ಮನವಿ ಮಾಡಿದ್ದಾನೆ.

ಮುಂಗಾರಿನ ಅವಾಂತರ ಕೊಡಗಿನ ವಿದ್ಯಾರ್ಥಿಯ ಅಳಲೇನು?

ಸತತವಾಗಿ ಸುರಿಯುತ್ತಿರುವ ಮಳೆಯಿಂದ ಕೊಡಗಿನ ಜನತೆ ಕಂಗಾಲಾಗಿದ್ದರೂ ಸರಕಾರದ ಯಾವುದೇ ಸ್ಪಂದನೆ ಇಲ್ಲ. ಜಿಲ್ಲೆಯನ್ನು ಅನಾಥ ಮಾಡಬೇಡಿ ಎಂದು ಬಾಲಕನೊಬ್ಬ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿಗೆ ಮನವಿ ಮಾಡಿದ್ದಾನೆ.#Kodagu #HeavyRain #Boy #HDKumaraswamy #Monsoon

Vijayavani ಅವರಿಂದ ಈ ದಿನದಂದು ಪೋಸ್ಟ್ ಮಾಡಲಾಗಿದೆ ಶನಿವಾರ, ಜುಲೈ 14, 2018

Leave a Reply

Your email address will not be published. Required fields are marked *

Back To Top