Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

6 ರೂ. ಚಿಲ್ಲರೆಗಾಗಿ ನಿರ್ವಾಹಕನ ಮೇಲೆ ಹಲ್ಲೆ

Friday, 10.08.2018, 5:11 PM       No Comments

ವಿಜಯಪುರ: ಕೇವಲ 6 ರೂ. ಚಿಲ್ಲರೆ ಹಣಕ್ಕಾಗಿ ವ್ಯಕ್ತಿಯೊಬ್ಬ ಕಂಡಕ್ಟರ್ ಕಮ್ ಡ್ರೈವರ್ ಮೇಲೆ ರಾಡ್​ನಿಂದ ಹಲ್ಲೆ ನಡೆಸಿದ್ದಾನೆ.

ಜಿಲ್ಲೆಯ ಇಂಡಿ ತಾಲೂಕಿನ ತಾಂಬಾದಲ್ಲಿ ಸುಲೇಮಾನ್​ ಎಂಬಾತ ಯೂನೂಸ್​ ಸಾಬ್​ ಉಸ್ಮಾನಸಾಬ್​ ಮೇಲೆ ಹಲ್ಲೆ ನಡೆಸಿದ್ದಾನೆ. ಗಾಯಾಳು ನಿರ್ವಾಹಕನನ್ನು ಇಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಿನ್ನೆ 6 ರೂ. ಚಿಲ್ಲರೆ ಹಣ ನೀಡುವ ವಿಚಾರದಲ್ಲಿ ಸುಲೇಮಾನ್​ ಮತ್ತು ಉಸ್ಮಾನಸಾಬ್​ ನಡುವೆ ಜಗಳ ನಡೆದಿತ್ತು. ಇದರಿಂದ ಆಕ್ರೋಶಿತನಾಗಿದ್ದ ಸುಲೇಮಾನ್​ ಶುಕ್ರವಾರ ನಿರ್ವಾಹಕ ಉಸ್ಮಾನಸಾಬ್​ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆ ಸಂಬಂಧ ಇಂಡಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

Back To Top