Saturday, 26th May 2018  

Vijayavani

ನಾಮಪತ್ರ ವಾಪಸ್ ಪಡೆದ ಸುರೇಶ್​ಕುಮಾರ್​- ಅವಿರೋಧವಾಗಿ ರಮೇಶ್​ಕುಮಾರ್​ ಆಯ್ಕೆ- ಎರಡನೇ ಬಾರಿಗೆ ಸ್ಪೀಕರ್​ ಆಗಿ ನೇಮಕ        ಸದನದಲ್ಲಿ ವಿಶ್ವಾಮತ ಪರೀಕ್ಷೆ- ಮೂರು ಪಕ್ಷಗಳ ಎಲ್ಲಾ ಶಾಸಕರು ಹಾಜರ್​- ಪ್ರತಿಪಕ್ಷ ನಾಯಕನ ಸ್ಥಾನದಲ್ಲಿ ಬಿಎಸ್​ವೈ        ಮೈತ್ರಿ ಸರ್ಕಾರದ ಪರ್ವ ಆರಂಭ- ಸಾಲ ಮನ್ನಾ ಮಾಡ್ತಾರಾ ಎಚ್​ಡಿಕೆ- ಕೊಟ್ಟ ಮಾತು ಉಳಿಸಿಕೊಳ್ತಾರಾ ಕಾಂಗ್ರೆಸ್​ ನಾಯಕರು        ಸಚಿವ ಸ್ಥಾನಕ್ಕಾಗಿ ಲಾಬಿ ಶುರು- ಕೆಪಿಸಿಸಿ ಅಧ್ಯಕ್ಷ ಸ್ಥಾನ, ಗೃಹಖಾತೆಗೆ ಡಿಕೆಶಿ ಪಟ್ಟು- ಹೈಕಮಾಂಡ್ ಭೇಟಿಗೆ ತೆರಳಲಿರುವ ಕೈ ನಾಯಕರು        ಮುಗಿದ ಬಹುಮತ ಸಾಬೀತಿನ ಪರೀಕ್ಷೆ- ಶಾಸಕರ ರೆಸಾರ್ಟ್​ ರಾಜಕೀಯ ಅಂತ್ಯ- ಇನ್ನಾದ್ರೂ ಕ್ಷೇತ್ರಗಳತ್ತ ತೆರಳ್ತಾರಾ ಎಂಎಲ್​ಎಗಳು        ಸಿಎಂಗೆ ಹೊಸ ಕಾರು ನೀಡಿದ ಡಿಪಿಎಆರ್- ಜಿಎ 6363 ಕಾರ್​ ನಂಬರ್​- ಹೊಸ ಕಾರು ಬಳಸಲು ಸಿಎಂ ನಿರ್ಧಾರ       
Breaking News

ಕಲ್ಯಾಣ ಯೋಜನೆಗಳಿಗೆ ಆಧಾರ್​​​ ನಂಬರ್​​ ಜೋಡಣೆ​​​​​​​​​ ದಿನಾಂಕ ವಿಸ್ತರಣೆ

Thursday, 07.12.2017, 3:44 PM       No Comments

<< ಸುಪ್ರೀಂಕೋರ್ಟ್ ಗೆ ಹೇಳಿಕೆ ಸಲ್ಲಿಸಿದ ಅಟಾರ್ನಿ ಜನರಲ್ >>

ನವದೆಹಲಿ: ಬ್ಯಾಂಕ್​ ಖಾತೆ ಮತ್ತು ವಿವಿಧ ಕಲ್ಯಾಣ ಯೋಜನೆಗಳಿಗಾಗಿ ಆಧಾರ್​​ ನಂಬರ್ ಜೋಡಣೆ​ ಕಡ್ಡಾಯ ದಿನಾಂಕವನ್ನು ವಿಸ್ತರಣೆ ಮಾಡುವುದಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್​ಗೆ ಗುರುವಾರ ತಿಳಿಸಿದೆ.

ಆಧಾರ್​ ಸಂಬಂಧಿತ ಅರ್ಜಿಗಳ ವಿಚಾರಣೆ ವೇಳೆ ಹೇಳಿಕೆ ಸಲ್ಲಿಸಿದ ಕೇಂದ್ರ ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್, ಮೊಬೈಲ್​ ನಂಬರ್​ಗೆ ಆಧಾರ್​ ಜೋಡನೆಗೆ ಇರುವ ಫೆಬ್ರವರಿ 6, 2018 ರ ಗಡುವಿನಲ್ಲಿ ಬದಲಾವಣೆ ಇಲ್ಲ ಎಂದು ತಿಳಿಸಿದ್ದಾರೆ.

ಆಧಾರ್​ ಜೋಡಣೆ ತಡೆ ಕೋರಿ ಮಧ್ಯಂತರ ಅರ್ಜಿಗಳು ಸಲ್ಲಿಕೆಯಾಗಿರುವ ಕಾರಣ ಈ ಸಂಬಂಧ ಸುಪ್ರೀಂಕೋರ್ಟ್​ ಮುಂದಿನ ವಾರ ಸಾಂವಿಧಾನಿಕ ಪೀಠವೊಂದನ್ನು ರಚಿಸಿ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಜತೆಗೆ ಕೇಂದ್ರ ಸರ್ಕಾರ ಯಾರು ಆಧಾರ್​ ಹೊಂದಿಲ್ಲವೋ ಅವರಿಗೆ ಮಾತ್ರ ಈ ಮಾ.31ರ ಗಡುವನ್ನು ವಿಧಿಸಬಹುದು ಎಂದು ಸುಪ್ರೀಂ ಕೋರ್ಟ್​ ತಿಳಿಸಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top