Monday, 20th August 2018  

Vijayavani

ಕೊಡಗಿನ ಸಂತ್ರಸ್ತರಿಗೆ ಗಾಯದ ಮೇಲೆ ಬರೆ - ಫೈನಾನ್ಸ್​ ಕಂಪನಿಗಳಿಂದ ಕಿರುಕುಳ - ಕೊಟ್ಟ ಸಾಲ ವಾಪಸ್​ ಕೊಡುವಂತೆ ಪಟ್ಟು        ಮಣಿಪಾಲ್ ಆಸ್ಪತ್ರೆ ವೈದ್ಯನ ಹುಚ್ಚಾಟ - ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಕಾರು ಚಾಲನೆ - ಪಾದಾಚಾರಿ ಬಲಿ ಪಡೆದ ಡಾಕ್ಟರ್        ಹೋಪ್ ಫಾರಂ ಬಳಿ ಕುಸಿದ ಲೈಟ್ ಕಂಬ - ಸ್ಥಳದಲ್ಲೇ ವಿದ್ಯಾರ್ಥಿನಿ ದುರ್ಮರಣ - ಬಿಬಿಎಂಪಿ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ        ವೈಮಾನಿಕ ಸಮೀಕ್ಷೆಯಲ್ಲಿ ಸಿಎಂ ಪೇಪರ್ ರೀಡಿಂಗ್ - ಸಂತ್ರಸ್ತರಿಗೆ ಬಿಎಸ್ಕೆಟ್ ಎಸೆದ ರೇವಣ್ಣ - ಸಾರ್ವಜನಿಕರಿಂದ ಆಕ್ರೋಶ        ಮಹಾರಾಷ್ಟ್ರದಲ್ಲಿ ಮಹಾ ಮಳೆಯ ಅಬ್ಬರ - ಚಿಕ್ಕೋಡಿಯಲ್ಲಿ 6 ಸೇತುವೆಗಳು ಮತ್ತೆ ಮುಳುಗಡೆ - ಜನರಿಗೆ ಸಂಕಷ್ಟ        ಮರಿಗೆ ತೊಂದರೆ ನೀಡ್ತಿದ್ದಾರೆಂದು ರೊಚ್ಚಿಗೆದ್ದ ಆನೆ - ಫೋಟೋ ತೆಗೆದ ಪ್ರವಾಸಿರ ಮೇಲೆ ಅಟ್ಯಾಕ್       
Breaking News

ಪುತ್ರಿ ಆರುಷಿ ಕೊಲೆ ಪ್ರಕರಣದಲ್ಲಿ ತಲ್ವಾರ್​ ದಂಪತಿಗೆ ಮತ್ತೊಮ್ಮೆ ಸಂಕಷ್ಟ

Friday, 10.08.2018, 1:45 PM       No Comments

ದೆಹಲಿ: ಇಡೀ ದೇಶವನ್ನೇ ತಲ್ಲಣಗೊಳಿಸಿದ್ದ ಅರುಷಿ ಮತ್ತು ಹೇಮ್​ರಾಜ್​ ಜೋಡಿ ಕೊಲೆ ಪ್ರಕರಣದಲ್ಲಿ ದಂತವೈದ್ಯ ದಂಪತಿ ರಾಜೇಶ್​ ತಲ್ವಾರ್​ ಮತ್ತು ನೂಪುರ್​ ತಲ್ವಾರ್​ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.

ಪುತ್ರಿ ಆರುಷಿ ಮತ್ತು ಮನೆಗೆಲಸಗಾರ ಹೇಮರಾಜ್​ನ ಹತ್ಯೆ ಪ್ರಕರಣದಲ್ಲಿ ತಲ್ವಾರ್​ ದಂಪತಿ ನಿರ್ದೋಷಿಗಳು ಎಂದು ಅಲಹಾಬಾದ್​ ಹೈಕೋರ್ಟ್​ ನೀಡಿದ್ದ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್​ ಶುಕ್ರವಾರ ಸಮ್ಮತಿಸಿದೆ.

ಸಿಬಿಐ ಸಲ್ಲಿಸಿರುವ ಮನವಿಯ ಜತೆಗೇ ಮೃತ ಹೇಮರಾಜ್​ ಪತ್ನಿ ಕಮಲಾ ಬಂಜದೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮಾಡುವುದಾಗಿ ಸುಪ್ರೀಂ ಕೋರ್ಟ್​ ತಿಳಿಸಿದೆ. ಈ ಹಿನ್ನೆಲೆಯಲ್ಲಿ ತಲ್ವಾರ್​ ದಂಪತಿಗೆ ಸುಪ್ರೀಂ ಕೋರ್ಟ್​ ನೋಟಿಸ್​ ಜಾರಿಗೊಳಿಸಿದೆ.

ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ 2013ರಲ್ಲಿ ದಂಪತಿಯನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ಪ್ರಕಟಿಸಿತ್ತು.

ಆದರೆ, ಕಳೆದ ವರ್ಷ ಅಕ್ಟೋಬರ್​ನಲ್ಲಿ ದಂಪತಿಯನ್ನು ನಿರ್ದೋಷಿಗಳು ಎಂದು ಘೋಷಿಸಿದ್ದ ಅಲಹಾಬಾದ್​ ಹೈಕೋರ್ಟ್​, ದಂಪತಿ ವಿರುದ್ಧದ ಆರೋಪಗಳನ್ನು ಸಾಬೀತು ಮಾಡುವ ಸೂಕ್ತ ಸಾಕ್ಷ್ಯಾಧಾರಗಳು ಲಭ್ಯವಿಲ್ಲ ಎಂದು ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ದಂಪತಿ ಜೈಲಿನಿಂದ ಬಿಡುಗಡೆಗೊಂಡಿದ್ದರು.

ತಲ್ವಾರ್​ ದಂಪತಿಯ ಪುತ್ರಿ 13 ವರ್ಷದ ಆರುಷಿ 2008ರಲ್ಲಿ ನೋಯ್ಡಾದ ತನ್ನ ಮನೆಯ ಕೊಠಡಿಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ಮರುದಿನ ಮನೆಯ ಮಹಡಿ ಮೇಲೆ ಮನೆಗೆಲಸಗಾರ ನೇಪಾಳ ಮೂಲದ ಹೇಮರಾಜ್​ನ ದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ನೋಯ್ಡಾದಲ್ಲಿ 2008ರಲ್ಲಿ ನಡೆದಿದ್ದ ಈ ಜೋಡಿ ಕೊಲೆ ದೇಶವನ್ನು ನಿಬ್ಬೆರಗುಗೊಳಿಸಿತ್ತು. ಈ ಪ್ರಕರಣವನ್ನು ಹಲವು ಆಯಾಮಗಳಿಂದ ವ್ಯಾಖ್ಯಾನಿಸಲಾಗಿದೆ. ಹಲವು ವಾದಗಳು ಇನ್ನೂ ಜೀವಂತವಾಗಿಯೇ ಇವೆ.

Leave a Reply

Your email address will not be published. Required fields are marked *

Back To Top