Monday, 23rd July 2018  

Vijayavani

ಬಿಜೆಪಿ ಸಂಪರ್ಕ್ ಸಮರ್ಥನ್ ಅಭಿಯಾನ - ಕಿಚ್ಚ ಸುದೀಪ್ ಭೇಟಿಯಾದ ಶ್ರೀರಾಮುಲು- ಮೋದಿ ಸಾಧನೆ ಪುಸ್ತಕ  ವಿತರಣೆ        ದೆಹಲಿಯಲ್ಲಿ ರಾಹುಲ್-ಸಿದ್ದು ಭೇಟಿ - ದೋಸ್ತಿ ನಡೆಗೆ ಅಸಮಾಧಾನ ಹೊರಹಾಕಿದ್ರಾ ಸಿದ್ದು - ಕುತೂಹಲ ಕೆರಳಿಸಿದ ಕೈ ದಿಗ್ಗಜರ ಭೇಟಿ        ಮತ್ತೆ ವಾಸ್ತು ಮೊರೆ ಮೋದ ರೇವಣ್ಣ - ಸರ್ಕಾರಿ ಬಂಗಲೆ ನವೀಕರಣಕ್ಕೆ 2 ಕೋಟಿ ಖರ್ಚು - ಇದೇನಾ ದುಂದುವೆಚ್ಚಕ್ಕೆ ಕಡಿವಾಣ ?        ದರ್ಶನ್ ಮ್ಯಾನೇಜರ್​​ ಮಲ್ಲಿಕಾರ್ಜುನ್​ನಿಂದ ಮತ್ತೊಂದು ದೋಖಾ - ನಟ ಅರ್ಜುನ್ ಸರ್ಜಾಗೂ ಮಹಾ ಮೋಸ        ಶೀರೂರು ಶ್ರೀ ಸಾವಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ - ಸ್ವಾಮೀಜಿ ಕೊನೆದಿನದ ಡಿವಿಆರ್ ನಾಪತ್ತೆ - ಪೊಲೀಸರಿಂದ ತೀವ್ರ ಶೋಧ       
Breaking News

ಆರ್​ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ: ಐಪಿಎಲ್​ನಲ್ಲಿ ಆಡ್ತೀನಿ ಅಂದ್ರು ಎಬಿಡಿ

Wednesday, 11.07.2018, 9:50 AM       No Comments

ನವದೆಹಲಿ: ಇತ್ತೀಚೆಗೆ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್​ಮನ್​ ಎಬಿ ಡಿವಿಲಿಯರ್ಸ್​ ಮುಂದಿನ ಕೆಲವು ವರ್ಷ ಇಂಡಿಯನ್​ ಪ್ರೀಮಿಯರ್​ ಲೀಗ್​ (ಐಪಿಎಲ್​)ನಲ್ಲಿ ಆಡುತ್ತೇನೆ ಎಂದು ತಿಳಿಸಿದ್ದಾರೆ.

ಎಬಿಡಿ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಸಂದರ್ಭದಲ್ಲಿ ಐಪಿಎಲ್​ನಲ್ಲಿ ಪಾಲ್ಗೊಳ್ಳುವ ಕುರಿತು ಯಾವುದೇ ನಿರ್ಧಾರ ಪ್ರಕಟಿಸಿರಲಿಲ್ಲ. ವೆಬ್​ಸೈಟ್​ ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಕುರಿತು ಸ್ಪಷ್ಟನೆ ನೀಡಿದ್ದು ಮುಂದಿನ ಹಲವು ವರ್ಷಗಳವರೆಗೆ ನಾನು ಐಪಿಎಲ್​ನಲ್ಲಿ ಆಡುತ್ತೇನೆ. ಆ ಮೂಲಕ ಯುವ ಆಟಗಾರರಿಗೆ ಮಾರ್ಗದರ್ಶನ ನೀಡಲು ಬಯಸುತ್ತೇನೆ. ಆದರೆ ಎಷ್ಟು ವರ್ಷಗಳವರೆಗೆ ಆಟ ಆಡುತ್ತೇನೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

2008ರಲ್ಲಿ ಡೆಲ್ಲಿ ಡೇರ್​ಡೆವಿಲ್ಸ್​ ತಂಡದೊಂದಿಗೆ ಎಬಿ ಡಿವಿಲಿಯರ್ಸ್​ ತಮ್ಮ ಐಪಿಎಲ್​ ಅಭಿಯಾನವನ್ನು ಆರಂಭಿಸಿದ್ದರು. ಮೂರು ವರ್ಷ ಅದೇ ತಂಡವನ್ನು ಪ್ರತಿನಿಧಿಸಿದ್ದರು. ಆ ನಂತರ ಅವರು ಆರ್​ಸಿಬಿ ತಂಡಕ್ಕೆ ಸೇರ್ಪಡೆಯಾಗಿದ್ದರು. ಅಂದಿನಿಂದ ಅವರು ಆರ್​ಸಿಬಿ ತಂಡದ ಖಾಯಂ ಆಟಗಾರನಾಗಿ ಮುಂದುವರೆದಿದ್ದಾರೆ.

ಜೊತೆಗೆ ಎಬಿ ಡಿವಿಲಿಯರ್ಸ್​ಗೆ ಬೆಂಗಳೂರು ಮತ್ತು ಆರ್​ಸಿಬಿ ತಂಡದೊಂದಿಗೆ ಭಾವನಾತ್ಮಕ ಸಂಬಂಧವೂ ಇದೆ. ಬೆಂಗಳೂರು ನನಗೆ ಅತ್ಯಂತ ವಿಶೇಷವಾದ ಸ್ಥಳ. ಅದು ನನ್ನ ಎರಡನೇ ಮನೆಯಿದ್ದಂತೆ. 100 ನೇ ಟೆಸ್ಟ್​ ಪಂದ್ಯವನ್ನು ನಾನು ಬೆಂಗಳೂರಿನಲ್ಲೇ ಆಡಿದ್ದೆ. ಭಾರತದಲ್ಲಿ ನನಗೆ ಕೋಟ್ಯಾಂತರ ಅಭಿಮಾನಿಗಳಿದ್ದಾರೆ ಎಂದು ಎಬಿಡಿ ತಿಳಿಸಿದ್ದಾರೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top