Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಉಚಿತ ಬಸ್ ಪಾಸ್ ನೀಡಲು ಆಗ್ರಹ

Thursday, 14.06.2018, 7:30 PM       No Comments

ಚಿಕ್ಕಮಗಳೂರು: ಶಾಲಾಕಾಲೇಜಿಗೆ ಹೋಗುವ ಎಲ್ಲ ವಿದ್ಯಾರ್ಥಿಗಳಿಗೆ ಕೆಎಸ್​ಆರ್​ಟಿಸಿ ಉಚಿತ ಬಸ್ ಪಾಸ್ ನೀಡುವಂತೆ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಆಜಾದ್ ಪಾಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ರಾಜ್ಯ ಸರ್ಕಾರದ ವಿರುದ್ಧ ವಿವಿಧ ಘೊಷಣೆ ಕೂಗಿದ ವಿದ್ಯಾರ್ಥಿಗಳು, ಕೂಡಲೆ ಬೇಡಿಕೆ ಈಡೇರಿಸಲು ರಾಜ್ಯದ ಎಲ್ಲ ಶಾಸಕರು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರ 2018-19ನೇ ಸಾಲಿನ ವಾರ್ಷಿಕ ಬಜೆಟ್​ನಲ್ಲಿ ಎಸ್ಸಿ, ಎಸ್ಟಿ ಸೇರಿದಂತೆ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಘೊಷಿಸಿತ್ತು. ಆದರೆ ಈಗಿನ ಸಮ್ಮಿಶ್ರ ಸರ್ಕಾರ ಕೇವಲ ಎಸ್ಸಿ, ಎಸ್ಟಿಗೆ ಮಾತ್ರ ಉಚಿತ ಬಸ್ ಪಾಸ್ ನೀಡಿ ಉಳಿದ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಿದೆ ಎಂದು ದೂರಿದರು.

ರಾಜ್ಯದಲ್ಲಿ 22 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಬಸ್ ಪಾಸ್​ಗಾಗಿ ಅರ್ಜಿ ಹಾಕಿ ಕಾಯುತ್ತಿದ್ದಾರೆ. ಈಗಾಗಲೆ ಶಾಲಾಕಾಲೇಜು ಆರಂಭವಾಗಿವೆ. ಗ್ರಾಮೀಣ ಭಾಗದ ಬಡ ವಿದ್ಯಾರ್ಥಿಗಳು ಪಾಸ್ ಇಲ್ಲದೆ ಹಣ ಕೊಟ್ಟು ಶಾಲಾಕಾಲೇಜಿಗೆ ಹೋಗಲು ತೊಂದರೆಯಾಗಿದೆ. ಎಷ್ಟೋ ವಿದ್ಯಾರ್ಥಿಗಳು ಪಾಸ್ ಇಲ್ಲದೆ ಶಾಲಾಕಾಲೇಜಿಗೆ ಹೋಗುತ್ತಿಲ್ಲ. ಅದರಲ್ಲೂ ಬಡ ವಿದ್ಯಾರ್ಥಿಗಳು ಶೈಕ್ಷಣಿಕ ಹಕ್ಕಿನಿಂದ ವಂಚಿತರಾಗುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೆ ಪರಿಶಿಷ್ಟ ವಿದ್ಯಾರ್ಥಿಗಳಿಗೆ ಬಸ್ ಪಾಸ್ ನೀಡಲಾಗುತ್ತಿದೆ. ಕಳೆದ ಸರ್ಕಾರ ತೆಗೆದುಕೊಂಡ ತೀರ್ವನದಂತೆ ಈಗಿನ ಸಮ್ಮಿಶ್ರ ಸರ್ಕಾರ ಕೂಡ ಉಚಿತ ಪಾಸ್ ನೀಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಎಬಿವಿಪಿ ಜಿಲ್ಲಾ ಸಹ ಸಂಚಾಲಕ ಶಶಿ ಆಲ್ದೂರು, ಸೂರ್ಯ, ಸಿದ್ದರಾಜು, ಸಂಜು ಬೆಳವಾಡಿ, ಹರ್ಷ ಮರ್ಲೆ, ಸಿಂಧು, ನಾಗವೇಣಿ, ಪ್ರೀತಿ, ಸಂಜನಾ ಇತರರು ಇದ್ದರು.

Leave a Reply

Your email address will not be published. Required fields are marked *

Back To Top