Saturday, 16th December 2017  

Vijayavani

1. ಧಾರಾವಾಹಿ ನೋಡಿ ಹಂತಕನಾದ- ವೃದ್ಧನ ಕೊಲೆ ಮಾಡಿ 2 ಲಕ್ಷ ದೋಚಿದ- ಹತ್ಯೆಯಾದ ಎರಡನೇ ದಿನದಲ್ಲಿ ಆರೋಪಿ ಅಂದರ್ 2. ಎಂ.ಎಸ್. ಬಿಲ್ಡಿಂಗ್ ನವೀಕರಣ ವೇಳೆ ಅವಘಡ- ಗೋಡೆ ಕುಸಿದು ಕಾರ್ಮಿಕ ಸಾವು- ಕೂಲಿಗಾಗಿ ಬಂದು ಪ್ರಾಣ ಕಳೆದುಕೊಂಡ ಬಡಪಾಯಿ 3. ಮೊದಲ ಪತ್ನಿ ಇರೋವಾಗ್ಲೇ ಎರಡನೇ ಮದುವೆ- ಅಪ್ರಾಪ್ತೆಯೊಂದಿಗೆ ನಿರ್ವಾಹಕ ವಿವಾಹ- ಗುಂಡ್ಲುಪೇಟೆ ಕಂಡಕ್ಟರ್ ವಿರುದ್ಧ ಮೊದಲ ಪತ್ನಿ ದೂರು 4. ರವಿ ಬೆಳಗೆರೆಗೆ ಕೋರ್ಟ್ನಿಂದ ಮತ್ತೇ ರಿಲೀಫ್- ಮಧ್ಯಂತರ ಜಾಮೀನು ವಿಸ್ತರಣೆ- ಸೋಮವಾರದವರೆಗೆ ಬೆಳಗೆರೆ ಬಂಧಮುಕ್ತ 5. ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಬಿಜೆಪಿ ನಾಯಕರ ವಿರುದ್ಧವೇ ತಿರುಗಿಬಿದ್ದ ಮಲ್ಲಮ್ಮ- ರಕ್ಷಣೆ ಕೋರಿ ಮಹಿಳಾ ಆಯೋಗಕ್ಕೆ ದೂರು
Breaking News :

ಆಲೂರು ಬಳಿ ಅಪಘಾತದಲ್ಲಿ ಮೂವರು ಸಾವು: 25 ಕ್ಕೂ ಹೆಚ್ಚು ಮಂದಿಗೆ ಗಾಯ

Tuesday, 05.12.2017, 8:04 AM       No Comments

 

>>ಕೆಎಸ್​ಆರ್​ಟಿಸಿ-ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ<<

ಆಲೂರು: ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಎಸ್​ಆರ್​ಟಿಸಿ ಬಸ್ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಮಂಗಳವಾರ ಮುಂಜಾನೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ.

ಖಾಸಗಿ ಟ್ರಾವಲ್ಸ್​ನ ಬಸ್​ನಲ್ಲಿ ಪ್ರಯಾಣಿಸುತ್ತಿದ್ದ ಉಡುಪಿಯ ಯಶೋದಾ(42), ಬೆಂಗಳೂರಿನ ಕಾರ್ತಿಕರೆಡ್ಡಿ(30) ಹಾಗೂ ಕೆಎಸ್​ಆರ್​ಟಿಸಿ ಬಸ್​ನಲ್ಲಿ ಪ್ರಯಾಣ ಮಾಡುತ್ತಿದ್ದ ಕಾಸರಗೋಡಿನ ಫಾತೀಮಾ ಸುನೆರ್(27) ಮೃತಪಟ್ಟವರು.

ಮಂಗಳವಾರ ಮುಂಜಾನೆ 2.45 ಗಂಟೆ ಸಮಯದಲ್ಲಿ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣ ಮಾಡುತ್ತಿದ್ದ ದುರ್ಗಾಂಬಾ ಬಸ್ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ನಡುವೆ ತಾಲೂಕಿನ ಹೆದುರ್ಗಾ ಕ್ರಾಸ್ ಬಳಿ ಮುಖಾಮುಖಿ ಡಿಕ್ಕಿ ಸಂಭವಿಸಿ ಈ ಅವಘಡ ಸಂಭವಿಸಿತು.

ಯಾಶೋದಾ, ಫಾತೀಮಾ ಸುನೆರ್ ಸ್ಥಳದಲ್ಲೇ ಮೃತಪಟ್ಟರೆ, ತೀವ್ರವಾಗಿ ಗಾಯಗೊಂಡಿದ್ದ ಕಾರ್ತಿಕ್ ರೆಡ್ಡಿ ಅವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಎರಡೂ ಬಸ್​ಗಳ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

Back To Top