Monday, 16th July 2018  

Vijayavani

ಕಾಂಗ್ರೆಸ್‌ ಕಿರುಕುಳದಿಂದಲೇ ಸಿಎಂ ಕಣ್ಣೀರು - ಕಾಂಗ್ರೆಸ್‌ ನೆಚ್ಚಿಕೊಂಡು ಹೋದ್ರೆ ಇದೇ ಸ್ಥಿತಿ - ಎಚ್​ಡಿಕೆ  ಕಣ್ಣೀರಿಗೆ ಜೇಟ್ಲಿ ಟಾಂಗ್‌        ವಾಣಿಜ್ಯ ಬ್ಯಾಂಕ್‌ನಲ್ಲಿನ ಚಾಲ್ತಿ ಸಾಲವೂ ಮನ್ನಾ - ಸಿಎಂ ನಿರ್ಧಾರ - ರೈತರಿಗೆ ಮತ್ತೊಂದು ಕೊಡುಗೆ ನೀಡಿದ ಮುಖ್ಯಮಂತ್ರಿ        ಟ್ರಾಫಿಕ್ ನಿಯಮ ಉಲ್ಲಂಘಿಸಿದ್ದ ಶಾಸಕರ ಪುತ್ರ - ಪ್ರಶ್ನಿಸಿದ ಪೇದೆಗೆ ಅವಾಚ್ಯ ಶಬ್ದಗಳಿಂದ ನಿಂದನೆ        ಬಂಗಾಳದಲ್ಲಿ ಮೋದಿ ರ್ಯಾಲಿ ವೇಳೆ ಅವಗಢ - ಪೆಂಡಾಲ್ ಕುಸಿದು 22 ಜನರಿಗೆ ಗಾಯ - ಆರೋಗ್ಯ ವಿಚಾರಿಸಿದ ಪ್ರಧಾನಿ ನಮೋ        ಕರಾವಳಿಯಲ್ಲಿ ಭಾರಿ ಮಳೆಯ ಅವಾಂತರ - ಕುಸಿದುಬಿತ್ತು ಭಟ್ಕಳದ ಬಸ್ ನಿಲ್ದಾಣ - ಹೊರ ಓಡಿದ ಪ್ರಯಾಣಿಕರು        ಕೆಆರ್​​ಎಸ್​​​ನಿಂದ ಭಾರಿ ಪ್ರಮಾಣದ ನೀರು - ರಂಗನತಿಟ್ಟು ಪಕ್ಷಿಧಾಮ ಸಂಪೂರ್ಣ ಮುಳುಗಡೆ - ಧುಮ್ಮಿಕ್ಕುತ್ತಿದೆ ಹೊಗೇನಕಲ್ ಫಾಲ್ಸ್       
Breaking News

ರಜನಿಕಾಂತ್ ಆಯ್ತು, ಈಗ ಕಮಲ್​ ರಾಜಕೀಯ ಎಂಟ್ರಿ ಮಾತು ಚಾಲ್ತಿಗೆ!

Wednesday, 13.09.2017, 5:08 PM       No Comments

ಚೆನ್ನೈ: ತಮಿಳುನಾಡು ರಾಜಕೀಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಅತ್ತ ಪ್ರಮುಖ ರಾಜಕೀಯ ಪಕ್ಷಗಳಾದ ಎಐಎಡಿಎಂಕೆ ಮತ್ತು ಡಿಎಂಕೆ ಹಗ್ಗಾಜಗ್ಗಾಟದಲ್ಲಿ ತೊಡಗಿವೆ. ಇದರ ಜತೆಯಲ್ಲೇ ಸೂಪರ್ ಸ್ಟಾರ್ ರಜನೀಕಾಂತ್ ರಾಜಕೀಯಕ್ಕೆ ಬರಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ಸುದ್ದಿಯಿದೆ. ಇದರ ಬೆನ್ನಲ್ಲೇ ಈಗ ತಮಿಳುನಾಡು ರಾಜಕೀಯ ವಲಯದಿಂದ ಹೊಸ ಸುದ್ದಿ ಬಂದಿದ್ದು, ಮತ್ತೋರ್ವ ಹಿರಿಯ ನಟ ಕಮಲ್​ಹಾಸನ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಮಾತು ಕೇಳಿ ಬರುತ್ತಿದೆ.

ಕಮಲ್​ ಹಾಸನ್​ ಹೊಸ ಪಕ್ಷವೊಂದನ್ನು ಹುಟ್ಟು ಹಾಕಲಿದ್ದಾರೆ. ಈ ಸಂಬಂಧ ಈಗಾಗಲೇ ಸಿದ್ಧತೆಗಳು ನಡೆಯುತ್ತಿವೆ. ವಿಜಯ ದಶಮಿ ಅಥವಾ ಗಾಂಧಿ ಜಯಂತಿಯಂದು ಹೊಸ ಪಕ್ಷದ ಕುರಿತು ಕಮಲ್ ಹಾಸನ್ ಅವರಿಂದ ಅಧಿಕೃತ ಪ್ರಕಟಣೆ ಹೊರಬೀಳಲಿದೆ ಎಂದು ಅವರ ನಿಕಟವರ್ತಿಯೊಬ್ಬರು ಮಾಹಿತಿ ನೀಡಿದ್ದಾರೆ.

ಕಮಲ್ ಹಾಸನ್ ಅವರು ರಾಜಕೀಯಕ್ಕೆ ಪ್ರವೇಶಿಸಲು ಇದು ಸೂಕ್ತವಾದ ಸಮಯ. ಈಗ ತಮಿಳುನಾಡು ರಾಜಕೀಯ ವಲಯದಲ್ಲಿ ಹೊಸ ರಾಜಕೀಯ ಪಕ್ಷ ಸ್ಥಾಪನೆಗೆ ಸೂಕ್ತ ವೇದಿಕೆ ಸಿದ್ಧವಾಗಿದೆ. ಕಮಲ್ ಹಾಸನ್ ಅವರು ತಮ್ಮ ಅಭಿಮಾನಿ ಸಂಘಟನೆಗಳ ನಾಯಕರೊಂದಿಗೆ ಈ ಸಂಬಂಧ ಮಾತುಕತೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಮಿಳುನಾಡಿನ ಸ್ಥಳೀಯ ಸಂಸ್ಥೆಗಳಿಗೆ ನವೆಂಬರ್ ನಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಮಲ್ ಈ ತಿಂಗಳ ಅಂತ್ಯಕ್ಕೆ ಹೊಸ ಪಕ್ಷದ ಘೋಷಣೆ ಮಾಡುವ ಸಾಧ್ಯತೆ ಹೆಚ್ಚಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top