Monday, 20th August 2018  

Vijayavani

ಕೊಡಗಿನ ಸಂತ್ರಸ್ತರಿಗೆ ಗಾಯದ ಮೇಲೆ ಬರೆ - ಫೈನಾನ್ಸ್​ ಕಂಪನಿಗಳಿಂದ ಕಿರುಕುಳ - ಕೊಟ್ಟ ಸಾಲ ವಾಪಸ್​ ಕೊಡುವಂತೆ ಪಟ್ಟು        ಮಣಿಪಾಲ್ ಆಸ್ಪತ್ರೆ ವೈದ್ಯನ ಹುಚ್ಚಾಟ - ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಕಾರು ಚಾಲನೆ - ಪಾದಾಚಾರಿ ಬಲಿ ಪಡೆದ ಡಾಕ್ಟರ್        ಹೋಪ್ ಫಾರಂ ಬಳಿ ಕುಸಿದ ಲೈಟ್ ಕಂಬ - ಸ್ಥಳದಲ್ಲೇ ವಿದ್ಯಾರ್ಥಿನಿ ದುರ್ಮರಣ - ಬಿಬಿಎಂಪಿ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ        ವೈಮಾನಿಕ ಸಮೀಕ್ಷೆಯಲ್ಲಿ ಸಿಎಂ ಪೇಪರ್ ರೀಡಿಂಗ್ - ಸಂತ್ರಸ್ತರಿಗೆ ಬಿಎಸ್ಕೆಟ್ ಎಸೆದ ರೇವಣ್ಣ - ಸಾರ್ವಜನಿಕರಿಂದ ಆಕ್ರೋಶ        ಮಹಾರಾಷ್ಟ್ರದಲ್ಲಿ ಮಹಾ ಮಳೆಯ ಅಬ್ಬರ - ಚಿಕ್ಕೋಡಿಯಲ್ಲಿ 6 ಸೇತುವೆಗಳು ಮತ್ತೆ ಮುಳುಗಡೆ - ಜನರಿಗೆ ಸಂಕಷ್ಟ        ಮರಿಗೆ ತೊಂದರೆ ನೀಡ್ತಿದ್ದಾರೆಂದು ರೊಚ್ಚಿಗೆದ್ದ ಆನೆ - ಫೋಟೋ ತೆಗೆದ ಪ್ರವಾಸಿರ ಮೇಲೆ ಅಟ್ಯಾಕ್       
Breaking News

ಸಚಿವರ ಕಾರನ್ನು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ರೈತರು

Friday, 10.08.2018, 3:06 PM       No Comments

ರಾಯಚೂರು: ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ತೆರಳುತ್ತಿದ್ದ ವಾಹನ ರೈತರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿರವಾರ ಪಟ್ಟಣದ ಟಿಎಎಲ್‌ಬಿಸಿ, ಎನ್‌ಆರ್‌ಬಿಸಿ ಕಾಲುವೆ ಕೆಳಭಾಗದ ರೈತರಿಗೆ ಸಮರ್ಪಕ ನೀರು ಒದಗಿಸುವಂತೆ ಒತ್ತಾಯಿಸಿ ರೈತ ಸಂಘ, ಹಸಿರು ಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆ ನಡೆಸುತ್ತಿದ್ದ ಮಾರ್ಗದ ಮೂಲಕ ಮಸ್ಕಿ ತಾಲೂಕಿನ ವಟಗಲ್ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಸಚಿವರ ಕಾರನ್ನು ಅಡ್ಡಗಟ್ಟಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಚಿವರ ಕಾರು ತಡೆದು ಕಾಲುವೆ ಕೆಳಭಾಗದ ರೈತರಿಗೆ ನೀರು ಒದಗಿಸುವಂತೆ ಪಟ್ಟು ಹಿಡಿದರು.

ನಾಳೆ ಮುದ್ರಾಬಾದ್‌ನಲ್ಲಿ ತುಂಗಭದ್ರಾ ನಿರಾವರಿ ಸಲಹಾ ಮಂಡಳಿ ಸಭೆ ಕರೆದು ನೀರು ಬಿಡಿಸುವೆ ಎಂದು ಸಚಿವರು ಭರವಸೆ ನೀಡಿದ ನಂತರ ರೈತರು ತಣ್ಣಗಾಗಿದ್ದಾರೆ.

ನೀರು ಬಿಡದಿದ್ದರೆ ಸಚಿವರ ಮನೆ ಮುಂದೆ ಧರಣಿಯ ಎಚ್ಚರಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Back To Top