Sunday, 23rd September 2018  

Vijayavani

ಜಿಮ್​ ತರಬೇತುದಾರನ ಅಪಹರಣ ಮತ್ತು ಹಲ್ಲೆ ಪ್ರಕರಣದಲ್ಲಿ ನಟ ದುನಿಯಾ ವಿಜಯ್​ ಬಂಧನ.        ವಿಧಾನ ಪರಿಷತ್​​ 3 ಸ್ಥಾನಗಳಿಗೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆ ದಿನ, ಬಿಜೆಪಿ ಪಟ್ಟಿ ಇಂದು ಅಂತಿಮ        ಮೋದಿ ಕಳ್ಳ ಎಂದಿದ್ದ ರಾಹುಲ್​ ವಿರುದ್ಧ ನಿರ್ಮಲಾ ಗುಡುಗು: ರಾಹುಲ್​ ಅವರದ್ದು ಕಳ್ಳರ ಕುಟುಂಬ ಎಂದ ಸಚಿವೆ        ಹಾಸನದಲ್ಲಿ ಇಂದು ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಮುಖ್ಯಮಂತ್ರಿ ಎಚ್​ಡಿಕೆ       
Breaking News

ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮ ಸ್ಥಾಪನೆ ಭರವಸೆ

Friday, 27.07.2018, 9:25 PM       No Comments

ಹಾನಗಲ್ಲ: ಹಡಪದ ಅಪ್ಪಣ್ಣ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಮುಖ್ಯಮಂತ್ರಿಯೊಂದಿಗೆ ರ್ಚಚಿಸುತ್ತೇನೆ ಎಂದು ವಿಧಾನ ಪರಿಷತ್ ಸದಸ್ಯ ಶ್ರೀನಿವಾಸ ಮಾನೆ ಭರವಸೆ ನೀಡಿದರು.

ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಆಡಳಿತ, ತಾ.ಪಂ., ಹಡಪದ ಅಪ್ಪಣ್ಣ ಸಮಾಜ ಸೇವಾ ಸಂಘದ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ಹಡಪದ ಅಪ್ಪಣ್ಣ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ಹಡಪದ ಅಪ್ಪಣ್ಣ ಆದಿಯಾಗಿ ಎಲ್ಲ ಶರಣರು ಸಮಾನತೆಗಾಗಿ ವಚನಕ್ರಾಂತಿ ಮೂಲಕ ಹೋರಾಟ ಕೈಗೊಂಡಿದ್ದಾರೆ. ಶರಣರ ವಚನಗಳ ಅರ್ಥವನ್ನು ನಾವು ಬದುಕಿನಲ್ಲಿ ಅಳವಡಿಸಿಕೊಳ್ಳುತ್ತಿಲ್ಲ. ಹೀಗಾಗಿ ಆಚಾರ-ವಿಚಾರಗಳೂ ಬದಲಾಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ತಹಸೀಲ್ದಾರ್ ಶಕುಂತಲಾ ಚೌಗಲಾ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಹಸೀನಾಬಿ ನಾಯ್ಕನವರ, ಮಾಜಿ ಅಧ್ಯಕ್ಷ ಕಲ್ಯಾಣಕುಮಾರ ಶೆಟ್ಟರ, ಸದಸ್ಯ ಸಂತೋಷ ಸುಣಗಾರ, ಜಿಪಂ ಸದಸ್ಯ ಮಾಲತೇಶ ಸೊಪ್ಪಿನ, ಕೆಪಿಸಿಸಿ ಕಾರ್ಯದರ್ಶಿ ಪ್ರಕಾಶಗೌಡ ಪಾಟೀಲ, ಸದಸ್ಯ ಸತೀಶ ದೇಶಪಾಂಡೆ, ರಾಮು ಯಳ್ಳೂರ, ರಾಜು ಗುಡಿ, ಮಲ್ಲೇಶಪ್ಪ ಕ್ಷೌರದ, ನಿಂಗಪ್ಪ ಕ್ಷೌರದ ಇತರರು ವೇದಿಕೆಯಲ್ಲಿದ್ದರು. ಬಸವರಾಜಪ್ಪ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಕ ಸುಭಾಸ ಹೊಸಮನಿ ಉಪನ್ಯಾಸ ನೀಡಿದರು.

ಮೆರವಣಿಗೆ: ಬೆಳಗ್ಗೆ 10ಕ್ಕೆ ಪಟ್ಟಣದ ಮಹಾತ್ಮ ಗಾಂಧಿ ವೃತ್ತದಿಂದ ಅಂಬೇಡ್ಕರ್ ಭವನದವರೆಗೆ ನಡೆದ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆ ನಡೆಯಿತು. ಪುರಸಭಾಧ್ಯಕ್ಷೆ ಹಸೀನಾಬಿ ನಾಯ್ಕನವರ ಚಾಲನೆ ನೀಡಿದರು.

Leave a Reply

Your email address will not be published. Required fields are marked *

Back To Top