Thursday, 19th July 2018  

Vijayavani

ತೆರೆದ ವಾಹನದಲ್ಲಿ ಶೀರೂರು ಶ್ರೀ ಮೆರವಣಿಗೆ - ಉಡುಪಿ ತಲುಪಿದ ಶ್ರೀಗಳ ಪಾರ್ಥಿವ ಶರೀರ - ಭಕ್ತರಲ್ಲಿ ಮಡುಗಟ್ಟಿದ ಶೋಕ        ಶೀರೂರು ಶ್ರೀ ಅಸಹಜ ಸಾವು - ರಥಬೀದಿಯಲ್ಲಿ 45 ನಿಮಿಷ ಸಾರ್ವಜನಿಕ ದರ್ಶನ - ಶೀರೂರಿಗೆ ಡಿಸಿ, ಜಿಪಂ ಸಿಇಓ ಆಗಮನ        ಶೀರೂರು ಶ್ರೀ ಅಹಸಜ ಸಾವು ಹಿನ್ನೆಲೆ - ಶೀರೂರು ಮಠಕ್ಕೆ ಫೋರೆನ್ಸಿಕ್ ತಜ್ಞರ ಭೇಟಿ - ಶ್ರೀಗಳ ಲ್ಯಾಪ್​ಟಾಪ್ ಪರಿಶೀಲನೆ        ರಾಜ್ಯದಲ್ಲಿ ಮಹಾ ಮಳೆಯ ಅಬ್ಬರ - ಮಡಿಕೇರಿಯ ಹಾರಂಗಿ ಜಲಾಶಯ ಭರ್ತಿ - ವಿಶೇಷ ಪೂಜೆ ಸಮರ್ಪಿಸಿದ ಸಿಎಂ        ನಾಳೆ ಕೇಂದ್ರ ಸರ್ಕಾರಕ್ಕೆ ಅವಿಶ್ವಾಸ ಪರೀಕ್ಷೆ - ಮೋದಿ ಸರ್ಕಾರದ ಬೆಂಬಲಕ್ಕೆ ನಿಂತ ಶಿವಸೇನೆ -ನಡೆಯೋದಿಲ್ವಾ ಸೋನಿಯಾ ಆಟ?        ಐನೂರಾಯ್ತು, 2 ಸಾವಿರ ಆಯ್ತು - ಆರ್​ಬಿಐನಿಂದ ಈಗ 100ರ ಹೊಸ ನೋಟು ಬಿಡುಗಡೆ - ನೇರಳೆ ಬಣ್ಣದಲ್ಲಿ ಬರಲಿದೆ ನೂರು ರೂ.       
Breaking News

ಭೀಕರ ಭೂಕುಸಿತ: 6 ಜನರ ಸಾವು, ಹಲವರು ಕಣ್ಮರೆ

Sunday, 13.08.2017, 10:49 AM       No Comments

ಶಿಮ್ಲಾ: ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಶನಿವಾರ ತಡ ರಾತ್ರಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 6 ಜನರು ಮೃತಪಟ್ಟಿದ್ದು, ಹಲವರು ಕಣ್ಮರೆಯಾಗಿದ್ದಾರೆ.

ಮಂಡಿ-ಪಠಾಣ್​ಕೋಟ್​ ರಾಷ್ಟ್ರೀಯ ಹೆದ್ದಾರಿಯ ಕೋತ್ರೂಪಿ ಗ್ರಾಮದ ಬಳಿ ಶನಿವಾರ ತಡ ರಾತ್ರಿ 2 ಗಂಟೆ ಸುಮಾರಿಗೆ ಭೂಕುಸಿತ ಸಂಭವಿಸಿದೆ. ಭೂಕುಸಿತಕ್ಕೆ ಸಿಲುಕಿ ಹಿಮಾಚಲ ಪ್ರದೇಶ ರಸ್ತೆ ಸಾರಿಗೆ ಸಂಸ್ಥೆಯ 2 ಬಸ್​ಗಳು ರಸ್ತೆ ಬದಿಯ ಸುಮಾರು 800 ಮೀ. ಆಳದ ಕಣಿವೆಗೆ ಉರುಳಿ ಬಿದ್ದಿವೆ. ಘಟನೆಯಲ್ಲಿ ಇದುವರೆಗೆ 6 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 6 ಜನರು ಗಾಯಗೊಂಡಿದ್ದಾರೆ.

ಎರಡು ಬಸ್​ಗಳಲ್ಲಿ 50 ಕ್ಕೂ ಹೆಚ್ಚು ಜನರಿದ್ದರು, ಅವರಲ್ಲಿ ಹಲವರು ಕಣ್ಮರೆಯಾಗಿದ್ದು, ಅವರನ್ನು ಸುರಕ್ಷಿತವಾಗಿ ರಕ್ಷಿಸಲು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರವನ್ನು ಬಂದ್ ಮಾಡಲಾಗಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *

Back To Top