Monday, 20th August 2018  

Vijayavani

ಕೊಡಗಿನ ಸಂತ್ರಸ್ತರಿಗೆ ಗಾಯದ ಮೇಲೆ ಬರೆ - ಫೈನಾನ್ಸ್​ ಕಂಪನಿಗಳಿಂದ ಕಿರುಕುಳ - ಕೊಟ್ಟ ಸಾಲ ವಾಪಸ್​ ಕೊಡುವಂತೆ ಪಟ್ಟು        ಮಣಿಪಾಲ್ ಆಸ್ಪತ್ರೆ ವೈದ್ಯನ ಹುಚ್ಚಾಟ - ಕುಡಿದ ಮತ್ತಿನಲ್ಲಿ ಬಿಎಂಡಬ್ಲ್ಯೂ ಕಾರು ಚಾಲನೆ - ಪಾದಾಚಾರಿ ಬಲಿ ಪಡೆದ ಡಾಕ್ಟರ್        ಹೋಪ್ ಫಾರಂ ಬಳಿ ಕುಸಿದ ಲೈಟ್ ಕಂಬ - ಸ್ಥಳದಲ್ಲೇ ವಿದ್ಯಾರ್ಥಿನಿ ದುರ್ಮರಣ - ಬಿಬಿಎಂಪಿ, ಬೆಸ್ಕಾಂ ನಿರ್ಲಕ್ಷ್ಯಕ್ಕೆ ಮತ್ತೊಂದು ಬಲಿ        ವೈಮಾನಿಕ ಸಮೀಕ್ಷೆಯಲ್ಲಿ ಸಿಎಂ ಪೇಪರ್ ರೀಡಿಂಗ್ - ಸಂತ್ರಸ್ತರಿಗೆ ಬಿಎಸ್ಕೆಟ್ ಎಸೆದ ರೇವಣ್ಣ - ಸಾರ್ವಜನಿಕರಿಂದ ಆಕ್ರೋಶ        ಮಹಾರಾಷ್ಟ್ರದಲ್ಲಿ ಮಹಾ ಮಳೆಯ ಅಬ್ಬರ - ಚಿಕ್ಕೋಡಿಯಲ್ಲಿ 6 ಸೇತುವೆಗಳು ಮತ್ತೆ ಮುಳುಗಡೆ - ಜನರಿಗೆ ಸಂಕಷ್ಟ        ಮರಿಗೆ ತೊಂದರೆ ನೀಡ್ತಿದ್ದಾರೆಂದು ರೊಚ್ಚಿಗೆದ್ದ ಆನೆ - ಫೋಟೋ ತೆಗೆದ ಪ್ರವಾಸಿರ ಮೇಲೆ ಅಟ್ಯಾಕ್       
Breaking News

ಮೋದಿ ಪಿಎಂ ಆಗಲಿ ಎಂದು ಬಿಎಸ್‌ವೈ ಪುತ್ರನಿಂದ ಪಾದಯಾತ್ರೆ

Friday, 10.08.2018, 10:47 AM       No Comments

ಮೈಸೂರು: ಮತ್ತೆ ನರೇಂದ್ರ ಮೋದಿ ಭಾರತದ ಪ್ರಧಾನಿಯಾಗಬೇಕು ಎಂದು ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬರಿಗಾಲಲ್ಲಿ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ ಕೈಗೊಂಡಿದ್ದಾರೆ.

ಇಂದು ಆಷಾಢ ಮಾಸದ ನಾಲ್ಕನೇ ಶುಕ್ರವಾರ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿರುವ ಬಿಜೆಪಿ ರಾಜ್ಯ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ವಿಜಯೇಂದ್ರ, 1001 ಮೆಟ್ಟಿಲು ಹತ್ತಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಮತ್ತು ದೇಶಕ್ಕೆ ಒಳ್ಳೆಯದಾಗಲಿ ಎಂದು ಬೆಟ್ಟ ಹತ್ತುತ್ತಿದ್ದೇನೆ. ಇದರಲ್ಲಿ ವೈಯಕ್ತಿಕ ರಾಜಕೀಯ ಅಥವಾ ಇನ್ಯಾವುದೇ ಇಚ್ಛಾಶಕ್ತಿ ಇಲ್ಲ. ಯಾವುದೇ ರಾಜಕೀಯ ವಿಚಾರದ ಬಗ್ಗೆ ನಾನು ಈಗ ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top