Saturday, 20th October 2018  

Vijayavani

ಚೀಪ್ ಮೆಂಟಾಲಿಟಿ ನನಗಿಲ್ಲ - ಇದರ ಹಿಂದೆ ಕೈವಾಡ ಇರಬಹುದು - ನಟಿ ಶ್ರುತಿ ಹರಿಹರನ್ ಆರೋಪ ತಳ್ಳಿಹಾಕಿದ ಅರ್ಜುನ್ ಸರ್ಜಾ        ಸ್ಯಾಂಡಲ್​ವುಡ್​​ನಲ್ಲಿ ಮೀ ಟೂ - ನಾಳೆ ಸುದ್ದಿಗೋಷ್ಠಿಯಲ್ಲಿ ಶ್ರುತಿ ಹಾಕ್ತಾರಾ ಬಾಂಬ್ - ನಟಿ ವಿರುದ್ಧ ಗುಡುಗಿದ ಅರ್ಜುನ್ ಸರ್ಜಾ ಅತ್ತೆ        ಧರ್ಮ ವಿಚಾರದಲ್ಲಿ ಡಿಕೆಶಿ ಕ್ಷಮೆಯಾಚನೆಗೆ ಸಿದ್ದು ಸಿಟ್ಟು - ಒಂದೇ ವೇದಿಯಲ್ಲಿದ್ರೂ ಮುಖ ಮುಖ ನೋಡಲಿಲ್ಲ - ಜಂಟಿ ಸುದ್ದಿಗೋಷ್ಠಿಯಲ್ಲಿ ನಾಯಕರ ಮಹಾ ಮುನಿಸು        ಜೆಡಿಎಸ್‌, ಕಾಂಗ್ರೆಸ್‌ನ ಸುದ್ದಿಗೋಷ್ಠಿ - ಕಾಂಗ್ರೆಸ್‌, ಜೆಡಿಎಸ್‌ ಜಂಟಿ ಸಮರಕ್ಕೆ ಬಿಜೆಪಿ ವ್ಯಂಗ್ಯ- ಟ್ವೀಟ್‌ ಮೂಲಕ ಟಾಂಗ್‌        ಒಂದೇ ಮನಸ್ಸು ಎರಡು ದೇಹ ಅಂದ್ರು ಸಿಎಂ - ಈ ಜನ್ಮದಲ್ಲಿ ಗೌಡ್ರು-ಸಿದ್ದು ಒಂದಾಗಲ್ಲ ಅಂದ್ರು ಕಾರಜೋಳ - ದೋಸ್ತಿಗಳಿಗೆ ಬಿಜೆಪಿ ನಾಯಕರ ಟಕ್ಕರ್        ಗದಗಿನ ತೋಂಟದಾರ್ಯ ಶ್ರೀಗಳು ಲಿಂಗೈಕ್ಯ - ಹೃದಯಾಘಾತದಿಂದ ಗದಗ್‌ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶ - ನಾಳೆ ಗದಗದಲ್ಲಿ ಅಂತ್ಯಕ್ರಿಯೆ       
Breaking News

ನಾಳೆಯಿಂದ ಬಿಎಸ್​ವೈ ಪ್ರವಾಸ

Wednesday, 08.08.2018, 3:04 AM       No Comments

ಬೆಂಗಳೂರು: ಮುಂಬರುವ ನಗರ ಸ್ಥಳೀಯ ಸಂಸ್ಥೆಗಳ ಹಾಗೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ರಾಜ್ಯಾದ್ಯಂತ ಮೂರು ತಂಡಗಳಲ್ಲಿ ಪ್ರವಾಸ ಕೈಗೊಳ್ಳಲಿದೆ.

ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ಆ.9ರಿಂದ ರಾಜ್ಯದ ಎಲ್ಲ 30 ಜಿಲ್ಲೆಗಳಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಂಗಳವಾರ ಪಕ್ಷದ ಕಚೇರಿಯಲ್ಲಿ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

ಪ್ರತಿ ಜಿಲ್ಲೆಯಲ್ಲಿ ಮುಂಬರುವ ಚುನಾವಣೆಗಳ ಕುರಿತಂತೆ ಕಾರ್ಯತಂತ್ರ ಹಾಗೂ ಆಯಾ ಜಿಲ್ಲೆಗಳ ಸಮಸ್ಯೆಗಳನ್ನು ಸರ್ಕಾರದ ಗಮನ ತರಲು ಹೋರಾಟ ರೂಪಿಸುವುದರ ಜತೆಗೆ ಪಕ್ಷ ಸಂಘಟನೆಯ ಸ್ಥಿತಿಗತಿಗಳ ಕುರಿತೂ ಚರ್ಚೆಗಳು ನಡೆಯಲಿವೆ ಎಂದರು. ಆಯಾ ಜಿಲ್ಲೆಗಳಲ್ಲಿ ಸಂಸದರು, ಶಾಸಕರು, ಜಿಪಂ, ತಾಪಂ ಚುನಾಯಿತ ಸದಸ್ಯರು ಸೇರಿ ಜಿಲ್ಲಾ ಕೋರ್ ಕಮಿಟಿ ಹಾಗೂ ಎಲ್ಲ ಶಕ್ತಿಕೇಂದ್ರಗಳ ಪ್ರಮುಖರ ಮೇಲ್ಪಟ್ಟ ಪದಾಧಿಕಾರಿಗಳ ಸಭೆ ನಡೆಸುವುದು ಪ್ರವಾಸದ ಭಾಗವಾಗಿದೆ ಎಂದರು.

ಪ್ರವಾಸ ತಂಡಗಳ ವಿವರ

# ತಂಡ-1: ಆ.9ರಿಂದ ಆ.16ರವರೆಗಿನ ಪ್ರವಾಸದಲ್ಲಿ ಬಿ.ಎಸ್. ಯಡಿಯೂರಪ್ಪ, ಗೋವಿಂದ ಕಾರಜೋಳ, ಶೋಭಾ ಕರಂದ್ಲಾಜೆ, ಎನ್.ರವಿಕುಮಾರ್ ಇರಲಿದ್ದಾರೆ.

ಜಿಲ್ಲೆಗಳು: ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ, ಬೆಂಗಳೂರು ಮಹಾನಗರ, ಬೆಂಗಳೂರು ನಗರ ಜಿಲ್ಲೆ, ಗದಗ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಬೆಳಗಾವಿ (ಚಿಕ್ಕೋಡಿ), ವಿಜಯಪುರ, ಬಾಗಲಕೋಟೆ.

# ತಂಡ-2: ಆ.9ರಿಂದ ಆ.13ವರೆಗಿನ ಪ್ರವಾಸದಲ್ಲಿ ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ, ಆರ್.ಅಶೋಕ್ ಇರಲಿದ್ದಾರೆ.

ಜಿಲ್ಲೆಗಳು: ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮಹಾನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ.

# ತಂಡ-3: ಆ.9ರಿಂದ ಆ.12ವರೆಗಿನ ಪ್ರವಾಸದಲ್ಲಿ ಕೆ.ಎಸ್.ಈಶ್ವರಪ್ಪ, ಸಿ.ಟಿ.ರವಿ, ಲಕ್ಷ್ಮಣ ಸವದಿ, ಎ.ನಾರಾಯಣಸ್ವಾಮಿ ಇರಲಿದ್ದಾರೆ.

ಜಿಲ್ಲೆಗಳು: ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು.

ಸರ್ಕಾರಿ ಶಾಲೆ ಮುಚ್ಚಲು ಹುನ್ನಾರ

ರಾಜ್ಯದಲ್ಲಿ 14,712 ಕಿರಿಯ ಪ್ರಾಥಮಿಕ ಶಾಲೆಗಳನ್ನು ವಿಲೀನಗೊಳಿಸಲು ರಾಜ್ಯ ಸರ್ಕಾರ ಹುನ್ನಾರ ನಡೆಸಿದ್ದು, ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಉದ್ಯಮಿ ಗಳೊಂದಿಗೆ ಶಾಮೀಲಾಗಿದೆ ಎಂದು ಎನ್.ರವಿಕುಮಾರ್ ಆರೋಪಿಸಿದ್ದಾರೆ.

ಮಾತೃ ಭಾಷೆ ಉಳಿಸಿ ಬೆಳೆಸಬೇಕಾದ ರಾಜ್ಯ ಸರ್ಕಾರವೇ ಕನ್ನಡ ಮಾಧ್ಯಮದ ಸರ್ಕಾರಿ ಶಾಲೆಗಳಿಗೆ ಬೀಗ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ನಿರ್ಧಾರ. ರಾಜ್ಯದ 14,712 ಶಾಲೆಗಳಲ್ಲಿ 25,712 ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, 3.5 ಲಕ್ಷ ವಿದ್ಯಾರ್ಥಿಗಳು ಓದುತ್ತಿದ್ದಾರೆ. ಒಂದು ಕಿಮೀ ವ್ಯಾಪ್ತಿಯಲ್ಲಿರುವ ಶಾಲೆಯಲ್ಲಿ ಕನಿಷ್ಠ 30 ಮಕ್ಕಳು ಇರಲೇಬೇಕು ಎನ್ನುವ ಷರತ್ತಿನಿಂದ ಮಲೆನಾಡು ಮತ್ತು ಅರೆ ಮಲೆನಾಡಿನಲ್ಲಿರುವ ಶಾಲೆಗಳಿಗೆ ಮುಚ್ಚುವ ಭೀತಿ ಎದುರಾಗಿದೆ. ಇದರಿಂದ ಬಡವರು, ರೈತರು ಹಾಗೂ ಕಾರ್ವಿುಕರು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಇನ್ನು ರಾಜ್ಯದ ಸರ್ಕಾರಿ ಪದವಿಪೂರ್ವ ಹಾಗೂ ಪದವಿ ಕಾಲೇಜುಗಳ ಪರಿಸ್ಥಿತಿಯೂ ಶೋಚನೀಯವಾಗಿದೆ. ರಾಜ್ಯದಲ್ಲಿ ಒಟ್ಟು 1229 ಸಕಾರಿ ಪದವಿ ಪೂರ್ವ ಕಾಲೇಜುಗಳಿದ್ದು, ಮೂಲ ಸೌಕರ್ಯಗಳಿಲ್ಲದೆ ಪರದಾಡುವ ಸ್ಥಿತಿ ಇದೆ. ಸುಮಾರು 3,090 ಕೊಠಡಿಗಳ ಕೊರತೆ ಇದ್ದು, 1229 ಪ್ರಯೋಗಾಲಯ, 3354 ಶೌಚಗೃಹಗಳ ಕೊರತೆ ಇದೆ. ರಾಜ್ಯ ಶಿಕ್ಷಣ ವಲಯದ ವಸ್ತುಸ್ಥಿತಿ ತಿಳಿಸಲು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.

ರಾಷ್ಟ್ರೀಯ ಹಿಂದುಳಿದ ವರ್ಗಕ್ಕೆ ಕೇಂದ್ರ ಸರ್ಕಾರದಿಂದ ನ್ಯಾಯ

ಬೆಂಗಳೂರು: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಸಾಂವಿಧಾನಿಕ ಸ್ಥಾನ ನೀಡಲು ಮಸೂದೆ ಅಂಗೀಕರಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಹರ್ಷ ವ್ಯಕ್ತಪಡಿಸಿದೆ. ಸಮಾಜದಲ್ಲಿ ಧ್ವನಿ ಇಲ್ಲದ ರಾಜ್ಯದ ಸುಮಾರು 120 ಹಿಂದುಳಿದ ಜಾತಿಗಳಿಗೂ ಕೂಡ ನ್ಯಾಯಯುತ ವಾಗಿ ಸಿಗಬೇಕಾದ ಮೀಸಲಾತಿಯನ್ನು ನಿರ್ಧರಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಕ ಕ್ರಮವಾಗಿದೆ. ಮುಂಬರುವ ದಿನಗಳಲ್ಲಿ ಹಿಂದುಳಿದ ವರ್ಗಗಳಿಗೆ ನ್ಯಾಯಬದ್ಧವಾಗಿ ಸಿಗಬೇಕಾದ ಹಕ್ಕು ಸಿಗಲಿದೆ ಎಂದು ರಾಜ್ಯ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರಧಾನ ಕಾರ್ಯದರ್ಶಿ ವರ್ತರು ಶ್ರೀಧರ್ ಸುದ್ದಿಗಾರರಿಗೆ ತಿಳಿಸಿದರು.

ಮೂರು ವರ್ಷಕ್ಕೊಮ್ಮೆ ರಾಜ್ಯಾಧ್ಯಕ್ಷ ಬದಲಾಗಲಿ

ಚಿಕ್ಕಮಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಪಕ್ಷದ ನಿಯಮದಂತೆ ಮೂರು ವರ್ಷಕ್ಕೊಮ್ಮೆ ಬದಲಾಗಲೇಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದು, ಸಂಚಲನಕ್ಕೆ ಕಾರಣವಾಗಿದೆ. ಸದ್ಯ ಬಿ.ಎಸ್.ಯಡಿಯೂರಪ್ಪ ರಾಜ್ಯಾಧ್ಯಕ್ಷ ಸ್ಥಾನದಲ್ಲಿದ್ದು, ಅವರು ಮರುಆಯ್ಕೆಯಾಗಿ ಮುಂದುವರಿಯಬಹುದು ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

Leave a Reply

Your email address will not be published. Required fields are marked *

Back To Top