Monday, 11th December 2017  

Vijayavani

1. ಜೈಲಿನ ಆಸ್ಪತ್ರೆಯಲ್ಲಿ ಬೆಳಗೆರೆಗೆ ಚಿಕಿತ್ಸೆ – ಚೇತರಿಸಿಕೊಂಡ್ರೆ ಬ್ಯಾರಕ್‌ಗೆ ರವಾನೆ – ನೆಲದ ಮೇಲೆ ಕೂರಲು ರವಿ ಪರದಾಟ 2. ಕೊತ ಕೊತ ಕುದಿಯುತ್ತಿದೆ ಕುಮಟಾ – ಉಗ್ರ ಸ್ವರೂಪ ಪಡೆದ ಹಿಂದೂ ಸಂಘಟನೆಗಳ ಪ್ರತಿಭಟನೆ – ಆಕ್ರೋಶಕ್ಕೆ ಹೊತ್ತಿ ಉರಿದ ಐಜಿಪಿ ಕಾರು 3. ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ಪ್ರತಿಸ್ಪರ್ಧಿ ಇಲ್ಲದ್ದಕ್ಕೆ ಯುವರಾಜನಿಗೆ ಸಾರಥ್ಯ – ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಾಮಾಚರಣೆ 4. ಮಂಡ್ಯದ ಸಂತೆಬಾಚಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ – ಟ್ಯಾಂಕರ್ ಹರಿದು ಬೈಕ್ ಸವಾರರು ಸಾವು – ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪ್ರಕರಣ 5. ಸ್ಟೀಲ್‌ ಬ್ರಿಡ್ಜ್ ಹೋಯ್ತು ಮೆಟ್ರೋ ಬಂತು – ಏರ್‌ಪೋರ್ಟ್‌ಗೆ ರೈಲು ಬಿಡಲು ಸರ್ಕಾರದ ಒಪ್ಪಿಗೆ – ಮಹತ್ವದ ಯೋಜನೆಗೆ ಕ್ಯಾಬಿನೆಟ್‌ನಲ್ಲಿ ಅಸ್ತು
Breaking News :

ಶೂ ಎಸೆತ, ಪಂಜಾಬ್ ಮುಖ್ಯಮಂತ್ರಿ ಬಾದಲ್​ಗೆ ಗಾಯ

Wednesday, 11.01.2017, 6:59 PM       No Comments

ಚಂಡೀಗಢ: ಮುಕ್ತಸರ್ ಜಿಲ್ಲೆಯ ತಮ್ಮ ಕ್ಷೇತ್ರವಾದ ಲಂಬಿಯ ರಟ್ಟ ಖೇರಾ ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡಿದ್ದಾಗ ನಡೆದ ಶೂ ಎಸೆತದ ಘಟನೆಯಲ್ಲಿ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ ಸಿಂಗ್ ಬಾದಲ್ (89) ಅವರು ಗಾಯಗೊಂಡಿದ್ದಾರೆ.

ಈದಿನ ಮಧ್ಯಾಹ್ನ ಘಟಿಸಿದ ಈ ಘಟನೆಯಲ್ಲಿ ಕನ್ನಡಕದ ಗಾಜುಗಳು ತಾಗಿ ಬಾದಲ್ ಅವರ ಕಣ್ಣಿಗೆ ಗಾಯವಾಗಿದೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದು, ಅವರನ್ನು ತತ್ ಕ್ಷಣ ಸಭಾ ಸ್ಥಾನದಿಂದ ಹೊರಕ್ಕೆ ಕರೆದೊಯ್ಯಲಾಯಿತು.

ಶೂ ಎಸೆದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಈತ ಉಗ್ರವಾದಿ ಸಿಖ್ ನಾಯಕ ಅಮ್ರಿಕ್ ಸಿಂಗ್ ಅಂಜಾಲಾನ ಸಂಬಂಧಿ ಗುರುಬಚನ್ ಸಿಂಗ್ ಎಂಬುದಾಗಿ ಗುರುತಿಸಲಾಗಿದೆ.

-ಏಜೆನ್ಸೀಸ್.

(ವೈವಿಧ್ಯಮಯ ಸುದ್ದಿಗಳಿಗೆ ವಿಜಯವಾಣಿ ಪತ್ರಿಕೆ ಓದಿರಿ)

Leave a Reply

Your email address will not be published. Required fields are marked *

Back To Top