Monday, 23rd October 2017  

Vijayavani

1. ಲಿಂಗಾಯತರು ಹಿಂದೂಗಳಲ್ಲ ಹೇಳಿಕೆ – ಜಾಮದಾರ್​ಗೆ ಕನೇರಿ ಮಠದ ಶ್ರೀ ತಿರುಗೇಟು – ಬಹಿರಂಗ ಚರ್ಚೆಗೆ ಕಾಡಸಿದ್ದೇಶ್ವರ ಸ್ವಾಮಿಗಳ ಆಹ್ವಾನ 2. ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಭಿನ್ನಾಭಿಪ್ರಾಯ – ಸಿದ್ದು, ಪರಂ, ಡಿಕೆಶಿ ದೂರ ದೂರ – ಹೈಕಮಾಂಡ್​ ಸಾಮೂಹಿಕ ಜಪ, ನಾಯಕರು ಸಪರೇಟ್​ ರೂಪ 3. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಜನರ ತೆರಿಗೆ ದುಡ್ಡಲ್ಲಿ ಕಾಂಗ್ರೆಸ್‌ ಪಕ್ಷಕ್ಕೂ ಪ್ರಚಾರ – ಬೆನ್ನುತಟ್ಟಿಕೊಳ್ಳೋ ಸಮಾವೇಶಕ್ಕೆ ಪಿಡಿಓಗಳೂ ದುರ್ಬಳಕೆ 4. ನಟ ವಿಜಯ್ ಬೆಂಬಲಕ್ಕೆ ನಿಂತ ತಲೈವಾ – ಮೆರ್ಸಲ್‌ ಸಿನಿಮಾದ ಬಗ್ಗೆ ಮೆಚ್ಚುಗೆಯ ಟ್ವೀಟ್ – ವಿವಾದಾತ್ಮಕ ವಿಷಯಗಳಿಗೂ ರಜನಿಕಾಂತ್ ಪರೋಕ್ಷ ಶ್ಲಾಘನೆ 5. ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್​ ಶಾಕ್​ – ಬಿಜೆಪಿಗೆ ಸೇರಲು 1 ಕೋಟಿ ರೂ ಆಮೀಷ – ಹಾರ್ದಿಕ್​ ಪಟೇಲ್​ ಸಂಗಡಿಗನ ಗಂಭೀರ ಆರೋಪ
Breaking News :

ಮನೆಮಂದಿಗೆಲ್ಲಾ ಬೆಂಕಿ ಹಚ್ಚಿ ತಾನೇ ಸತ್ತ!

Thursday, 07.09.2017, 9:53 AM       No Comments

ಬಾಗಲಕೋಟೆ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನೆಯ ಯಜಮಾನ ತಾನೂ ಸೀಮೆಎಣ್ಣೆ ಸುರಿದುಕೊಂಡು ಮನೆಮಂದಿಗೂ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ, ಹತ್ಯೆಗೆ ಯತ್ನಿಸಿದ್ದಾನೆ.

ಘಟನೆಯಲ್ಲಿ ಕುಕೃತ್ಯವೆಸಗಿದ ವ್ಯಕ್ತಿ ಸಾವಿಗೀಡಾಗಿದ್ದು, ಉಳಿದವರು ಸಾವು ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ.

ಬಾದಾಮಿ ತಾಲೂಕಿ ನಿಲುವಿಗಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಕಿ ಹಚ್ಚಿದ ಪತಿ ಬಸಪ್ಪ ಮೊಕಾಸಿ (40) ಸಾವನ್ನಪ್ಪಿದ್ದಾನೆ. ಪತ್ನಿ ನಿರ್ಮಲಾ (32), ಮಕ್ಕಳಾದ ಸವಿತಾ (12) ರಾಘು (9) ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಸ್ಥಳೀಯರ ನೆರವಿನಿಂದ ಬಾಗಲಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top