Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹ ನಿಷೇಧ

Friday, 13.07.2018, 12:06 AM       No Comments

ಬಾಗಲಕೋಟೆ: ಸೆಪ್ಟೆಂಬರ್​ನಲ್ಲಿ ಆಚರಿಸಲಾಗುವ ಗಣೇಶ ಹಬ್ಬದ ಸಂದರ್ಭ ಪ್ಲಾಸ್ಟರ್ ಆಫ್ ಪ್ಯಾರಿಸ್, ಬಣ್ಣ ಲೇಪಿತ ಗಣೇಶ ವಿಗ್ರಹಗಳನ್ನು ಜಲಮೂಲ, ನದಿ, ಕಾಲುವೆ ಹಾಗೂ ಬಾವಿಯಲ್ಲಿ ವಿಸರ್ಜಿಸುವುದನ್ನು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹೊರಡಿಸಿದ ಅಧಿಸೂಚನೆಯನ್ವಯ ನಿಷೇಧಿಸಿದ್ದು, ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದೆಂದು ಶಾಂತಾರಾಮ ಕೆ.ಜಿ. ಹೇಳಿದರು.

ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಬುಧವಾರ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಗಣೇಶ ಮೂರ್ತಿಗಳನ್ನು ತಯಾರಿಸುವ ಕಾರ್ಯ ನಡೆಯುತ್ತಿರುವ ಹಿನ್ನೆಲೆ ಪ್ಲಾಸ್ಟರ್ ಆಫ್ ಪ್ಯಾರಿಸ್ ಗಣೇಶ ವಿಗ್ರಹ ತಯಾರಿಸದಂತೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.

ಪರಿಸರ ಸ್ನೇಹಿ ಗಣೇಶ ಮೂರ್ತಿ ಮಾತ್ರ ತಯಾರಿಸುವಂತೆ ಜಾಗೃತಿ ಮೂಡಿಸಬೇಕು. ಸ್ಥಳೀಯ ಸಂಸ್ಥೆಗಳು ಕ್ರಿಯಾಯೋಜನೆ ರೂಪಿಸಬೇಕು. ಇತರೆ ಇಲಾಖೆಗಳ ಸಹಕಾರ ಪಡೆಯಬೇಕಲ್ಲದೆ, ಕಸ ಸಂಗ್ರಹ ವಾಹನಗಳಲ್ಲಿ ಆಡಿಯೋ ಮೂಲಕ ಜನರಲ್ಲಿ ಅರಿವು ಮೂಡಿಸಬೇಕು ಎಂದರು.

ಬೇರೆ ರಾಜ್ಯಗಳಿಂದ ಪಿಒಪಿ ಗಣೇಶ ವಿಗ್ರಹಗಳ ಮಾರಾಟಕ್ಕೆ ಆಗಮಿಸುವ ವಾಹನಗಳನ್ನು ಪೊಲೀಸ್ ಇಲಾಖೆ ನಿಗಾ ವಹಿಸಿ, ಜಪ್ತಿ ಮಾಡಲು ಸೂಚಿಸಲಾಗುವುದು. ಜಿಲ್ಲೆಯಲ್ಲಿ ಪಿಒಪಿ ಗಣೇಶ ವಿಗ್ರಹಗಳ ಮಾರಾಟ ಹಾಗೂ ವಿಗ್ರಹ ತಯಾರಿಸುತ್ತಿರುವುದು ಕಂಡು ಬಂದಲ್ಲಿ ಜಪ್ತಿ ಮಾಡಲು ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರತಿಯೊಂದು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಗಣೇಶ ವಿಗ್ರಹ ಮಾರಾಟ ಹಾಗೂ ತಯಾರಕರ ಸಭೆ ಕರೆದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶದ ಬಗ್ಗೆ ತಿಳಿಸಬೇಕು. ಆದೇಶ ಉಲ್ಲಂಘಿಸಿದಲ್ಲಿ 10 ಸಾವಿರ ರೂ. ದಂಡ ಮತ್ತು ಜೈಲುವಾಸ ವಿಧಿಸಲು ಅವಕಾಶವಿರುವ ಬಗ್ಗೆ ತಿಳಿಸಬೇಕು. ಅಲ್ಲದೆ, ನಿಗದಿಪಡಿಸಿದ ಸ್ಥಳಗಳಲ್ಲೇ ಗಣೇಶ ಮೂರ್ತಿಗಳನ್ನು ವಿಸರ್ಜಿಸುವಂತೆ ಸೂಚಿಸಬೇಕೆಂದು ತಿಳಿಸಿದರು. ಮೂರ್ತಿ ವಿಸರ್ಜನೆಯಾದ 24 ಗಂಟೆಯೊಳಗೆ ಕೆರೆ, ಬಾವಿ, ಹೊಂಡಗಳು, ನದಿಗಳ ಹತ್ತಿರ ಬಿಟ್ಟು ಹೋದ ಸಾಮಗ್ರಿಗಳನ್ನು ಸ್ಥಳೀಯ ಸಂಸ್ಥೆಗಳು ಸಂಗ್ರಹಿಸಿ ವೈಜ್ಞಾನಿಕ ವಿಲೇವಾರಿ ಮಾಡಬೇಕು. ಅಲ್ಲಿನ ಘನ ತ್ಯಾಜ ವಸ್ತುಗಳನ್ನು ಸುಡುವುದಕ್ಕೆ ಅವಕಾಶ ನೀಡಬಾರದೆಂದು ತಿಳಿಸಿದರು. ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಔದ್ರಾಮ, ಪರಿಸರ ಮಾಲಿನ್ಯ ಅಧಿಕಾರಿ ಇತರರು ಇದ್ದರು.

ಸ್ಥಳೀಯ ಸಂಸ್ಥೆಗಳು ಪ್ಲಾಸ್ಟರ್ ಆಫ್ ಪ್ಯಾರಿಸ್​ನಿಂದ ವಿಗ್ರಹಗಳನ್ನು ತಯಾರಿಸುವ ಮತ್ತು ಮಾರುವ ವ್ಯಕ್ತಿಗಳಿಗೆ, ಸಂಸ್ಥೆಗಳಿಗೆ ವ್ಯಾಪಾರದ ಪರವಾನಗಿ ನೀಡಬಾರದು. ಈಗಾಗಲೆ ನೀಡಿದ್ದಲ್ಲಿ ವಾಪಸ್ ಪಡೆಯಬೇಕು. ಅನಧಿಕೃತವಾಗಿ ಮೂರ್ತಿಗಳ ತಯಾರಿ, ಮಾರುತ್ತಿರುವವರ ಮೇಲೆ ಕಾನೂನು ಕ್ರಮ ಜರುಗಿಸಿ.

| ಶಾಂತಾರಾಮ ಕೆ.ಜಿ. ಜಿಲ್ಲಾಧಿಕಾರಿ

Leave a Reply

Your email address will not be published. Required fields are marked *

Back To Top