Wednesday, 24th October 2018  

Vijayavani

ರಂಗೇರಿದ ಉಪ ಚುನಾವಣಾ ಕಣ-ಜಮಖಂಡಿಯಲ್ಲಿಂದು ಬಿಎಸ್ ವೈ ಮತಬೇಟೆ-ಸಕ್ಕರೆ ನಾಡು ಮಂಡ್ಯದಲ್ಲಿಂದು ಸಿದ್ದರಾಮಯ್ಯ ಪ್ರಚಾರ        ದೀಪಾವಳಿಯಿಂದ ಲೋಡ್​ ಶೆಡ್ಡಿಂಗ್-ಇಂಧನ ಇಲಾಖೆ ಅಧಿಕಾರಿಗಳ ಜತೆ ಸಿಎಂ ಸಭೆ-ಕತ್ತಲಲ್ಲಿ ಮುಳುಗುತ್ತಾ ಕರ್ನಾಟಕ..?        ಸಾಲಮನ್ನಾವೂ ಇಲ್ಲ, ಬೆಲೆಯೂ ಇಲ್ಲ-ಬೆವರು ಸುರಿಸಿ ಬೆಳೆದ ಬೆಳೆ ಕೇಳೋರೂ ಇಲ್ಲ-ಅನ್ನದಾತನಿಗೆ ಕಣ್ಣೀರು ತರಿಸುತ್ತಿದೆ ಈರುಳ್ಳಿ        ಬೆಂಗಳೂರಲ್ಲಿ ಅನಧಿಕೃತ ಬಿಟ್ ಕಾಯಿನ್ ATM-ಆರೋಪಿ ಹರೀಶ್ ಬಂಧನ-ಕೆಂಪ್ ಫೋರ್ಟ್​ನಲ್ಲಿದ್ದ ಎಟಿಎಂ ಪೊಲೀಸರ ವಶಕ್ಕೆ        ಕೊಳ್ಳೆಗಾಲದಲ್ಲಿ 17 ವರ್ಷಗಳಿಂದ ಕಾಮಗಾರಿ ಅಪೂರ್ಣ-ಇನ್ನೂ ಆಗಿಲ್ಲ ವಾಲ್ಮೀಕಿ ಭವನ ನಿರ್ಮಾಣ-ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ        ವಿಜಯಪುರದಲ್ಲಿ ಗಂಗಾಕಲ್ಯಾಣ ಗೋಲ್ಮಾಲ್-ಫಲಾನುಭವಿಗಳಿಗೆ ಸಿಗದ ಬೋರ್ ವೇಲ್ ಸೌಲಭ್ಯ-ಯಾರದ್ದೋ ಹೆಸರಲ್ಲಿ ಅನುದಾನ ನೀಡಿದ ಅಧಿಕಾರಿಗಳು       
Breaking News

ಹೈದರಾಬಾದ್​ ಟೆಸ್ಟ್​ಗೆ ಟೀಂ ಇಂಡಿಯಾ ಪ್ರಕಟ: ಮಯಾಂಕ್​ಗೆ ಅವಕಾಶವಿಲ್ಲ

Thursday, 11.10.2018, 1:00 PM       No Comments

ಹೈದರಾಬಾದ್​: ಪ್ರವಾಸಿ ವೆಸ್ಟ್​ ಇಂಡೀಸ್​ ವಿರುದ್ಧದ 2ನೇ ಟೆಸ್ಟ್​ ಪಂದ್ಯಕ್ಕೆ ಟೀಂ ಇಂಡಿಯಾದ 12 ಆಟಗಾರರ ತಂಡವನ್ನು ಬಿಸಿಸಿಐ ಪ್ರಕಟಿಸಿದ್ದು, ರಾಜ್​ಕೋಟ್​ನಲ್ಲಿ ಮೊದಲ ಟೆಸ್ಟ್​ನಲ್ಲಿ ಆಡಿದ್ದ ತಂಡವನ್ನೇ ಉಳಿಸಿಕೊಂಡಿದೆ. ಈ ಮೂಲಕ ಹೈದರಾಬಾದ್​ನಲ್ಲಿ ಟೆಸ್ಟ್​ ಕ್ರಿಕೆಟ್​ಗೆ ಪದಾರ್ಪಣೆ ಮಾಡುವ ಮಯಾಂಕ್​ ಕನಸು ಭಗ್ನವಾಗಿದೆ.

ರಾಜ್​ಕೋಟ್​ನಲ್ಲಿ ತಮ್ಮ ಪದಾರ್ಪಣೆ ಪಂದ್ಯದಲ್ಲೇ ಭರ್ಜರಿ ಶತಕ ಗಳಿಸಿ ಮಿಂಚಿದ್ದ ಪೃಥ್ವಿ ಷಾ ಎರಡನೇ ಟೆಸ್ಟ್​ಗೂ ತಮ್ಮ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಅನುಭವಿ ಕೆ.ಎಲ್​. ರಾಹುಲ್​ ಅವರನ್ನು ಆರಂಭಿಕರಾಗಿ ಉಳಿಸಿಕೊಳ್ಳಲಾಗಿದೆ. ಮಧ್ಯಮ ಕ್ರಮಾಂಕದಲ್ಲೂ ಯಾವುದೇ ಬದಲಾವಣೆ ಮಾಡದಿರುವ ಹಿನ್ನೆಲೆಯಲ್ಲಿ ಆರಂಭಿಕ ಆಟಗಾರ ಮಯಾಂಕ್​ಗೆ ಅವಕಾಶ ಸಿಕ್ಕಿಲ್ಲ.

ತಂಡ: ವಿರಾಟ್​ ಕೊಹ್ಲಿ (ನಾಯಕ), ಕೆ.ಎಲ್​. ರಾಹುಲ್​, ಪೃಥ್ವಿ ಷಾ, ಚೇತೇಶ್ವರ ಪೂಜಾರಾ, ಅಜಿಂಕ್ಯ ರಹಾನೆ, ರಿಷಭ್​ ಪಂತ್​, ರವೀಂದ್ರ ಜಡೇಜಾ, ಆರ್​. ಅಶ್ವಿನ್​, ಕುಲದೀಪ್​ ಯಾದವ್​, ಉಮೇಶ್​ ಯಾದವ್​, ಮೊಹಮ್ಮದ್​ ಶಮಿ, ಶಾರ್ದುಲ್​ ಠಾಕೂರ್​.

Leave a Reply

Your email address will not be published. Required fields are marked *

Back To Top