Saturday, 16th December 2017  

Vijayavani

1. ಧಾರಾವಾಹಿ ನೋಡಿ ಹಂತಕನಾದ- ವೃದ್ಧನ ಕೊಲೆ ಮಾಡಿ 2 ಲಕ್ಷ ದೋಚಿದ- ಹತ್ಯೆಯಾದ ಎರಡನೇ ದಿನದಲ್ಲಿ ಆರೋಪಿ ಅಂದರ್ 2. ಎಂ.ಎಸ್. ಬಿಲ್ಡಿಂಗ್ ನವೀಕರಣ ವೇಳೆ ಅವಘಡ- ಗೋಡೆ ಕುಸಿದು ಕಾರ್ಮಿಕ ಸಾವು- ಕೂಲಿಗಾಗಿ ಬಂದು ಪ್ರಾಣ ಕಳೆದುಕೊಂಡ ಬಡಪಾಯಿ 3. ಮೊದಲ ಪತ್ನಿ ಇರೋವಾಗ್ಲೇ ಎರಡನೇ ಮದುವೆ- ಅಪ್ರಾಪ್ತೆಯೊಂದಿಗೆ ನಿರ್ವಾಹಕ ವಿವಾಹ- ಗುಂಡ್ಲುಪೇಟೆ ಕಂಡಕ್ಟರ್ ವಿರುದ್ಧ ಮೊದಲ ಪತ್ನಿ ದೂರು 4. ರವಿ ಬೆಳಗೆರೆಗೆ ಕೋರ್ಟ್ನಿಂದ ಮತ್ತೇ ರಿಲೀಫ್- ಮಧ್ಯಂತರ ಜಾಮೀನು ವಿಸ್ತರಣೆ- ಸೋಮವಾರದವರೆಗೆ ಬೆಳಗೆರೆ ಬಂಧಮುಕ್ತ 5. ಯೋಗೇಶ್ಗೌಡ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಬಿಜೆಪಿ ನಾಯಕರ ವಿರುದ್ಧವೇ ತಿರುಗಿಬಿದ್ದ ಮಲ್ಲಮ್ಮ- ರಕ್ಷಣೆ ಕೋರಿ ಮಹಿಳಾ ಆಯೋಗಕ್ಕೆ ದೂರು
Breaking News :

ಅರಣ್ಯ ಸಚಿವರ ವಿರುದ್ಧ ಕುಟುಕು ಕಾರ್ಯಾಚರಣೆ

Friday, 24.11.2017, 12:47 PM       No Comments

ಬೆಳಗಾವಿ: ಯಾವುದೇ ಸುದ್ದಿ ವಾಹಿನಿಗಳನ್ನೂ ಮೀರಿಸುವ ಕುಟುಕು ಕಾರ್ಯಾಚರಣೆಯೊಂದು ಇಲ್ಲಿ ನಡೆದಿದ್ದು, ಸದಾ ಚರ್ಚೆಯಲ್ಲಿರುವ ರಾಜ್ಯದ ಅರಣ್ಯ ಸಚಿವರನ್ನೇ ಟಾರ್ಗೆಟ್ ಮಾಡಲಾಗಿದೆ.

ಪಾರ್ಕ್​ವೊಂದರ ಉದ್ಘಾಟನೆ ವೇಳೆ ಈ ಸ್ಟಿಂಗ್ ಆಪರೇಷನ್ ನಡೆದಿದ್ದು, ಕಾರ್ಯಕ್ರಮವನ್ನು ಅರ್ಧಕ್ಕೇ ಮೊಟಕುಗೊಳಿಸಿ ಸಚಿವರು ಕಾಲಿಗೆ ಬುದ್ಧಿ ಹೇಳಿದ್ದಾರೆ. ಅಂದಹಾಗೆ, ಸ್ಟಿಂಗ್​ ಆಪರೇಷನ್​ ಮಾಡಿದ್ದು ಮನುಷ್ಯರಲ್ಲ ಜೇನುಗಳು.

ಇಂದು ಶುಕ್ರವಾರ ಬೆಳಗಾವಿಯಲ್ಲಿ ನಡೆದ ಉದ್ಯಾನವನ ಉದ್ಘಾಟನೆ ವೇಳೆ ಈ ಘಟನೆ ನಡೆದಿದ್ದು, ಪರಿಣಾಮವಾಗಿ ಕಾರ್ಯಕ್ರಮವನ್ನು ಆಯೋಜಕರು ತಕ್ಷಣವೇ ರದ್ದುಗೊಳಿಸಿದ್ದಾರೆ.

ಅಲ್ಲದೆ, ಸಂಸದ ಸುರೇಶ ಅಂಗಡಿ ಕೂಡ ಎದ್ನೋಬಿದ್ನೋ ಅಂತಾ ಓಡಿ ಹೋದ ಪ್ರಸಂಗ ಜರುಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top