Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಅಂಗನವಾಡಿ ಕಾರ್ಯಕರ್ತೆಯರಿಂದ ಪ್ರತಿಭಟನೆ

Wednesday, 11.07.2018, 3:00 AM       No Comments

ಬೆಳಗಾವಿ: ಕನಿಷ್ಠ ವೇತನ, ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಪ್ರಾರಂಭಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಂಗಳವಾರ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ 14 ತಾಲೂಕುಗಳಿಂದ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದರು.

ರಾಜ್ಯದಲ್ಲಿ ನಗರ, ಪಟ್ಟಣ, ಹೋಬಳಿ ಹಾಗೂ ಗ್ರಾಪಂ ಮಟ್ಟದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಎಲ್‌ಕೆಜಿ ಮತ್ತು ಯುಕೆಜಿ ಆರಂಭಿಸಿದ್ದರಿಂದ ಸರ್ಕಾರಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿದೆ. ಈ ವಿಷಯ ಮುಂದಿಟ್ಟುಕೊಂಡು ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಪ್ರಾರಂಭಿಸಲು ಮುಂದಾಗಿರುವುದನ್ನು ಸರ್ಕಾರ ತಕ್ಷಣ ಕೈಬಿಡಬೇಕು.

ಈಗಾಗಲೇ ಕೆಲ ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿ ಆರಂಭವಾಗಿರುವುದರಿಂದ ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಲ್ಲದೆ ಮುಚ್ಚುವ ಪರಿಸ್ಥಿತಿ ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಅಂಗನವಾಡಿ ಕೇಂದ್ರಗಳನ್ನು ವಿಲೀನ ಮಾಡುವ ಪ್ರಕ್ರಿಯೆ ಕೈಬಿಟ್ಟು ಅಂಗನವಾಡಿ ಬಲವರ್ಧನೆಗೆ ಹೆಚ್ಚು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಕಾರ್ಯಕರ್ತೆಯರು ಎಚ್ಚರಿಕೆ ನೀಡಿದರು.
ಕೇಂದ್ರ ಸರ್ಕಾರದ ಆದೇಶದಂತೆ ಖಾಲಿ ಇರುವ ಮೇಲ್ವಿಚಾರಕಿಯರ ಹುದ್ದೆಗೆ ಅಂಗನವಾಡಿ ನೌಕರರಿಗೆ ಶೇ. 50ರಷ್ಟು ಮುಂಬಡ್ತಿ ಕೊಡಬೇಕು. ಶೇ. 15ರಷ್ಟು ಮೀಸಲಾತಿ ಆಧಾರದ ಮೇಲೆ ಬಡ್ತಿ ಸೌಲಭ್ಯ ಕಲ್ಪಿಸಬೇಕು ವಿನಃ ಕೆಪಿಎಸ್‌ಸಿ ಮುಖಾಂತರ ನೇಮಕಾತಿ ಮಾಡಿಕೊಳ್ಳುವ ನಿರ್ಧಾರ ಕೈಬಿಡಬೇಕು. ರಾಜ್ಯದಲ್ಲಿನ 3,331 ಮಿನಿ ಅಂಗನವಾಡಿ ಕೇಂದ್ರಗಳಿಗೆ ಸೌಲಭ್ಯದ ಜತೆಗೆ ಸಹಾಯಕಿಯರನ್ನು ನೇಮಕ ಮಾಡಬೇಕು ಎಂದು ಮನವಿ ಮಾಡಿದರು.

ಸೇವಾ ಜೇಷ್ಠತೆ ಆಧಾರದ ಮೇಲೆ 18,000 ರೂ. ಕನಿಷ್ಠ ವೇತನ ಜಾರಿ ಮಾಡಬೇಕು. ಹರಿಯಾಣ, ತೆಲಗಾಂಣ, ಆಂಧ್ರಪ್ರದೇಶ, ತಮಿಳುನಾಡು, ಗೋವಾ, ಪಾಂಡಿಚೇರಿ ಮತ್ತು ಕೇರಳ ರಾಜ್ಯಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 11 ರಿಂದ 12 ಸಾವಿರ ರೂ. ವೇತನ ಇದೆ ಇದೆ. ಹಾಗಾಗಿ ಕರ್ನಾಟಕದಲ್ಲಿಯೂ ಆ ವ್ಯವಸ್ಥೆ ಜಾರಿಗೆ ಬರಬೇಕು. ಮಾತೃವಂದನಾ ಕಾರ್ಯಕ್ರಮಕ್ಕೆ 300 ರೂ. ವಿಶೇಷ ಅನುದಾನ ನೀಡಬೇಕು. ಇಲ್ಲದಿದ್ದರೆ ಕೆಲಸ ಮಾಡುವುದಿಲ್ಲ ಎಂದು ಕಾರ್ಯಕರ್ತೆಯರು ಎಚ್ಚರಿಕೆ ನೀಡಿದರು.
ಅಧ್ಯಕ್ಷೆ ದೊಡ್ಡವ್ವ ಪೂಜಾರಿ, ಗೌರವಾಧ್ಯಕ್ಷ ಜೆ.ಎಂ.ಜೈನೆಖಾನ, ಗೋದಾವರಿ ರಾಜಾಪುರೆ, ಸರಸ್ವತಿ ಮಾಳಶೆಟ್ಟಿ, ಪಾರ್ವತಿ ಸಾಲಿಮಠ, ವಿದ್ಯಾ ಕಂಬಾರ, ಗುರವ್ವ ಮಡಿವಾಳರ, ಸುವರ್ಣಾ ಕಮತಗಿ ಇತರರು ಉಪಸ್ಥಿತರಿದ್ದರು.

ಪ್ರಮುಖ ಬೇಡಿಕೆಗಳು

  • ಅಂಗನವಾಡಿ ಕಾರ್ಯಕರ್ತೆಯರಿಗೆ ಸೇವಾ ನಿಯಮಾವಳಿ ರಚಿಸಬೇಕು.
  • ಕೇಂದ್ರ ಸರ್ಕಾರ ಕಡಿತ ಮಾಡಿರುವ ಅನುದಾನ ವಾಪಸ್ ನೀಡಬೇಕು.
  • ನಿವೃತ್ತಿ ಹೊಂದಿದವರಿಗೆ ತಕ್ಷಣ ನಿವೃತ್ತಿ ಸೌಲಭ್ಯ ಸಿಗುವಂತಾಗಬೇಕು.
  • ಅಂಗನವಾಡಿ ಕೇಂದ್ರದ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮಾಡಬೇಕು.
  • ಡಿಡಿ, ಡಿಒ, ಸಿಡಿಪಿಒ, ಮೇಲ್ವಿಚಾರಕಿಯರನ್ನು ಕಾಯಂಗೊಳಿಸಬೇಕು.

Leave a Reply

Your email address will not be published. Required fields are marked *

Back To Top