Saturday, 22nd September 2018  

Vijayavani

ಸಿಎಂ ಜನತಾ ದರ್ಶನದಲ್ಲಿ ಸಿಗಲಿಲ್ಲ ನ್ಯಾಯ - ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ - ಸಿಎಂಗೆ ಪತ್ರ ಬರೆದು ನಾಲ್ವರು ಸುಸೈಡ್‌        ಬಿಎಸ್‌ವೈ ನಿವಾಸದಲ್ಲಿ ಬಿಗ್‌ ಮೀಟಿಂಗ್‌ - ಮೈತ್ರಿ ಸರ್ಕಾರದ ವಿರುದ್ಧ ಹೋರಾಟಕ್ಕೆ ರಣತಂತ್ರ        ಶೃಂಗೇರಿಯಲ್ಲಿ ಸಿಎಂ ಶತ್ರುಸಂಹಾರ ಯಾಗ - ಕಾರವಾರದಲ್ಲಿ ಡಿಸಿಎಂ ದೇವಿ ದರ್ಶನ - ಸಂಕಷ್ಟ ನಿವಾರಣೆಗೆ ದೇವರ ಮೊರೆ        ಜೆಡಿಎಸ್‌ಗೂ ಕಾಡ್ತಿದೆ ಅಪರೇಷನ್‌ ಭಯ - ಹಾಸನದಲ್ಲಿ ಜೆಡಿಎಲ್‌ಪಿ ಮೀಟಿಂಗ್‌ - ಶಾಸಕರನ್ನ ಹಿಡದಿಟ್ಟುಕೊಳ್ಳ ಗೌಡರ ತಂತ್ರ        ಒಡಿಸ್ಸಾದಲ್ಲಿ ಪ್ರಧಾನಿ ರೌಂಡ್ಸ್‌ - ವಿವಿದ ಅಭಿವೃದ್ಧಿಕಾರ್ಯಗಳಿಗೆ ಮೋದಿ ಚಾಲನೆ - ಹೊಸ ಒಡಿಸ್ಸಾ ಕಟ್ಟೋಣ ಎಂದ ಪ್ರಧಾನಿ        ರಫೇಲ್‌ ಯುದ್ಧ ವಿಮಾನಕ್ಕೆ ಓಕೆ ಎಂದ ಐಎಎಫ್‌- ಮೊದಲ ಪರೀಕ್ಷೆಯಲ್ಲಿ ಯಶಸ್ವಿ ಹಾರಾಟ - ಮೋದಿ ಸರ್ಕಾರಕ್ಕೆ ಬಿಗ್‌ ಬೂಸ್ಟ್‌       
Breaking News

ಕುಮಾರಸ್ವಾಮಿ ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ: ಡಿಸಿಎಂ ಜಿ. ಪರಮೇಶ್ವರ್

Wednesday, 13.06.2018, 3:03 PM       No Comments

ಬೆಂಗಳೂರು: ಭ್ರಷ್ಟಾಚಾರ ನಿರ್ಮೂಲನೆ ದೊಡ್ಡ ಸವಾಲು ಎಂಬ ವಿಚಾರ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂಬುದು ಗೊತ್ತಿಲ್ಲ. ಆದರೆ, ಸರ್ಕಾರದಲ್ಲಿ ಭ್ರಷ್ಟಾಚಾರ ಇಲ್ಲ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದರು.​

ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಅತೃಪ್ತ ಶಾಸಕರ ಮನವೊಲಿಸುವ ಕೆಲಸ ಮಾಡುತ್ತಿದ್ದೇವೆ. ಎಚ್.ಕೆ. ಪಾಟೀಲ್ ಮನೆಗೆ ಡಿ.ಕೆ. ಶಿವಕುಮಾರ್ ಹೋಗಿ ಬಂದಿದ್ದಾರೆ. ನಾನು ಸಹ ಹೋಗುತ್ತೇನೆ. ಸಿಎಲ್​ಪಿ ಲೀಡರ್ ಮೌನವಾಗಿದ್ದಾರೆ ಎನ್ನುವುದು ಸರಿಯಲ್ಲ ಎಂದರು.

ನಾವೇನು ಟೆನ್ಷನ್​ ಮಾಡಿಕೊಳ್ಳೊಲ್ಲ
ಇಲ್ಲಿ ನಮ್ಮ ಕೆಲಸ ನಾವು ಮಾಡುತ್ತಿದ್ದೇವೆ. ಅವರು ಅವರ ಕ್ಷೇತ್ರಕ್ಕೆ ಹೋಗಿ ಕೃತಜ್ಞತೆ ಹೇಳುವ ಕೆಲಸ ಮಾಡುತ್ತಿದ್ದಾರೆ. ನಾವೇನು ಟೆನ್ಷನ್​ ಮಾಡಿಕೊಳ್ಳೊಲ್ಲ. ನಾವು ಕೂಲ್ ಆಗಿದ್ದೇವೆ ಎಂದು ಪರೋಕ್ಷವಾಗಿ ಮಾಜಿ ಸಿಎಂ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆ ನೀಡಿದರು.

ನನ್ನನ್ನು ಕೇಳಿ ದೆಹಲಿಗೆ ಹೋಗಿಲ್ಲ
ಎಂ.ಬಿ.ಪಾಟೀಲ್ ಹಾಗೂ ದಿನೇಶ್ ಗುಂಡೂರಾವ್ ದೆಹಲಿಗೆ ಹೋಗಿದ್ದು ನನಗೆ ಗೊತ್ತಿಲ್ಲ. ಅವರು ನನ್ನನ್ನು ಕೇಳಿ ದೆಹಲಿಗೆ ಹೋಗಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಇನ್ನೂ ಯಾರ ಹೆಸರು ಅಂತಿಮವಾಗಿಲ್ಲ ಎಂದು ತಿಳಿಸಿದರು.

ಸೌಮ್ಯಾ ರೆಡ್ಡಿಗೆ ಅಭಿನಂದನೆ
ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಸೌಮ್ಯಾ ರೆಡ್ಡಿ ಜಯ ಗಳಿಸಿದ್ದಾರೆ. ಅವರಿಗೆ ನನ್ನ ಅಭಿನಂದನೆ ಸಲ್ಲಿಸುತ್ತೇನೆ. ಕ್ಷೇತ್ರದ ಮತದಾರರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಜಯನಗರ ಬಿಜೆಪಿ ಕ್ಷೇತ್ರವಾಗಿತ್ತು, ಈಗ ಕಾಂಗ್ರೆಸ್ ಪಾಲಾಗಿದೆ. ಇದರಿಂದ ಕಾಂಗ್ರೆಸ್ ಕ್ಷೇತ್ರಗಳ ಸಂಖ್ಯೆ ಹೆಚ್ಚಾಗಿದೆ ಎಂದು ಹೇಳಿದರು. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top