Monday, 11th December 2017  

Vijayavani

1. ಜೈಲಿನ ಆಸ್ಪತ್ರೆಯಲ್ಲಿ ಬೆಳಗೆರೆಗೆ ಚಿಕಿತ್ಸೆ – ಚೇತರಿಸಿಕೊಂಡ್ರೆ ಬ್ಯಾರಕ್‌ಗೆ ರವಾನೆ – ನೆಲದ ಮೇಲೆ ಕೂರಲು ರವಿ ಪರದಾಟ 2. ಕೊತ ಕೊತ ಕುದಿಯುತ್ತಿದೆ ಕುಮಟಾ – ಉಗ್ರ ಸ್ವರೂಪ ಪಡೆದ ಹಿಂದೂ ಸಂಘಟನೆಗಳ ಪ್ರತಿಭಟನೆ – ಆಕ್ರೋಶಕ್ಕೆ ಹೊತ್ತಿ ಉರಿದ ಐಜಿಪಿ ಕಾರು 3. ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ಪ್ರತಿಸ್ಪರ್ಧಿ ಇಲ್ಲದ್ದಕ್ಕೆ ಯುವರಾಜನಿಗೆ ಸಾರಥ್ಯ – ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಾಮಾಚರಣೆ 4. ಮಂಡ್ಯದ ಸಂತೆಬಾಚಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ – ಟ್ಯಾಂಕರ್ ಹರಿದು ಬೈಕ್ ಸವಾರರು ಸಾವು – ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪ್ರಕರಣ 5. ಸ್ಟೀಲ್‌ ಬ್ರಿಡ್ಜ್ ಹೋಯ್ತು ಮೆಟ್ರೋ ಬಂತು – ಏರ್‌ಪೋರ್ಟ್‌ಗೆ ರೈಲು ಬಿಡಲು ಸರ್ಕಾರದ ಒಪ್ಪಿಗೆ – ಮಹತ್ವದ ಯೋಜನೆಗೆ ಕ್ಯಾಬಿನೆಟ್‌ನಲ್ಲಿ ಅಸ್ತು
Breaking News :

ರಸ್ತೆಯಲ್ಲಿ ಮದ್ಯಸೇವನೆ ಮಾಡ್ತಿದ್ದನ್ನು ಪ್ರಶ್ನಿಸಿದಕ್ಕೆ ಪೇದೆಗೆ ಥಳಿಸಿದ ಪರೋಡಿಗಳು

Sunday, 13.08.2017, 7:50 AM       No Comments

ಬೆಂಗಳೂರು: ರಸ್ತೆ ಬದಿಯಲ್ಲಿ ಮದ್ಯಸೇವನೆ ಮಾಡ್ತಿದ್ದ ಪುಂಡಪೋಕರಿಗಳನ್ನು ಪ್ರಶ್ನಿಸಿದ್ದಕ್ಕೆ ಪೊಲೀಸರ ಮೇಲೆಯೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ವಿವೇಕನಗರ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಿನ್ನೆ ಶನಿವಾರ ತಡರಾತ್ರಿ ಶಿವ, ಕುಮಾರ್, ಜಗನ್ ಮತ್ತು ಮುನಿ ಎಂಬ ಲೋಕಲ್​ ರೌಡಿಗಳು ರಸ್ತೆಬದಿಯಲ್ಲಿ ನಿಂತ್ಕೊಂಡು ಮದ್ಯ ಸೇವನೆ ಮಾಡುತ್ತಿದ್ದರು. ಈ ವೇಳೆ ನೈಟ್​ ಬೀಟ್​ನಲ್ಲಿದ್ದ ಪೇದೆಯೊಬ್ಬರು ಅದನ್ನ ಪ್ರಶ್ನಿಸಿದ್ದಕ್ಕೆ ಕುಡಿದ ಅಮಲಿನಲ್ಲಿದ್ದ ನಾಲ್ವರು ಪುಡಿ ರೌಡಿಗಳು ಪೇದೆ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ವಿಷ್ಯ ಗೊತ್ತಾಗ್ತಿದ್ದಂತೆ ಹೊಯ್ಸಳ ಪೊಲೀಸರು ಸ್ಥಳಕ್ಕಾಗಮಿಸಿ ಮೂವರನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಇದು ಗೊತ್ತಾಗಿ ಅವರ ಸ್ನೇಹಿತರೆಲ್ಲ ಸ್ಟೇಷನ್​ ಎದರು ಜಮಾಯಿಸಿ ಗಲಾಟೆ ಮಾಡಿದ್ದಾರೆ.

ಸದ್ಯ ನಾಲ್ವರನ್ನು ಬಂಧಿಸಿರುವ ಪೊಲೀಸರು ಮಾಡಿದ್ದು ಉಣ್ಣೋ ಮಾರಾಯ ಎಂಬಂತೆ ಹಲ್ಲೆ ಮಾಡಿದ ರೌಡಿಗಳನ್ನ ಎಳ್ಕೊಂಡು ಹೋಗಿ ಚೆನ್ನಾಗೇ ಪಂಚ್​ ಕಜ್ಜಾಯ ಕೊಟ್ಟಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top