Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಬಜೆಟ್ನಲ್ಲಿ ರೈತರ ಸಾಲ ಮನ್ನಾ ಪಕ್ಕಾ

Sunday, 01.07.2018, 8:22 PM       No Comments

ಬೀದರ್: ಜುಲೈ 5ರಂದು ಮಂಡನೆಯಾಗಲಿರುವ ಬಜೆಟ್ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಘೋಷಿಸಲಿದ್ದಾರೆ. ನಮ್ಮದು ರೈತಪರ ಸಕರ್ಾರ. ಸಾಲ ಮನ್ನಾ ವಿಷಯದಲ್ಲಿ ರೈತರು ಯಾವುದೇ ಅನುಮಾನ, ಆತಂಕಪಡುವ ಅಗತ್ಯವಿಲ್ಲ ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ ಹೇಳಿದರು.

ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕ, ಎಸ್ಸಿ, ಎಸ್ಟಿ ನೌಕರರ ಸಮನ್ವಯ ಸಮಿತಿ ಹಾಗೂ ಲಕ್ಷ್ಮೀಲಾಲ ಫೌಂಡೇಷನ್ ವತಿಯಿಂದ ನಗರದ ರಂಗಮಂದಿರದಲ್ಲಿ ಭಾನುವಾರ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಅವರು, ಸಾಲ ಮನ್ನಾಕ್ಕೆ ಮೈತ್ರಿ ಸಕರ್ಾರ ಬದ್ಧವಾಗಿದೆ. ಈ ಬಗ್ಗೆ ಎರಡೂ ಪಕ್ಷಗಳಲ್ಲಿ ಒಮ್ಮತವಿದೆ. ಕೊಟ್ಟ ಮಾತಿನಂತೆ ಕುಮಾರಣ್ಣ ನಡೆಯುತ್ತಾರೆ ಎಂದು ಸ್ಪಷ್ಟಪಡಿಸಿದರು.

ಕೃಷಿ ಪತ್ತಿನ ಸಹಕಾರ ಸಂಘಗಳಿಂದ ಹಿಡಿದು ಅಪೆಕ್ಸ್ ಬ್ಯಾಂಕ್ ವಲಯದವರೆಗೆ ಕ್ಷೇತ್ರ ಹರಡಿಕೊಂಡಿದೆ. ರಾಜ್ಯ ಉಗ್ರಾಣ ನಿಗಮ ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಹ ನನ್ನ ಖಾತೆ ವ್ಯಾಪ್ತಿಯಲ್ಲಿದೆ. ಹೀಗಾಗಿ ಸಹಕಾರ ಕ್ಷೇತ್ರ ಇನ್ನಷ್ಟು ಬಲಪಡಿಸಲು ವಿಶೇಷ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಪ್ರತಿ 5 ಕಿಲೋಮೀಟರ್ಗೊಂದು ಗೋದಾಮು, ಪ್ರತಿ ಉಗ್ರಾಣದಲ್ಲಿ ಸಂಗ್ರಹಣಾ ವ್ಯವಸ್ಥೆ ಸುಧಾರಣೆ ಮತ್ತು ಮಾರುಕಟ್ಟೆಯಲ್ಲಿ ಕೃಷಿ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗುವವರೆಗೆ ಉಗ್ರಾಣಗಳಲ್ಲಿ ಸಂಗ್ರಹಿಸಿಟ್ಟು ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ನೀಡುವ ಬಗ್ಗೆ ಸಕರ್ಾರ ಚಿಂತನೆ ನಡೆಸಿದೆ. ರೈತರು ಆಥರ್ಿಕವಾಗಿ ಸದೃಢವಾಗಲು ಇಸ್ರೇಲ್ ಮಾದರಿ ಕೃಷಿ ಪದ್ಧತಿ ಸಹ ಜಾರಿಗೆ ತರಲಾಗುತ್ತಿದೆ ಎಂದರು.

Leave a Reply

Your email address will not be published. Required fields are marked *

Back To Top