Wednesday, 18th July 2018  

Vijayavani

ಬಜೆಟ್​​ನಲ್ಲಿ ಅನ್ನಭಾಗ್ಯ ಅಕ್ಕಿ ಕಡಿತ ವಿಚಾರ - 5 ಕೆಜಿ ಅಲ್ಲ, ನಾವು 7 ಕೆಜಿ ಕೊಡುತ್ತೇವೆ - ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ        ಲೋಕಸಭೆ ಅಧಿವೇಶನ, ಬಿಜೆಪಿ ಸಭೆ ಹಿನ್ನೆಲೆ- ಜುಲೈ 28ರಂದು ರಾಜ್ಯಕ್ಕೆ ಅಮಿತ್ ಷಾ ಬರೋದು ಡೌಟ್- ದಿಲ್ಲಿಯಲ್ಲೇ ಉಳೀತಾರಾ ಬಿಜೆಪಿ ರಾಷ್ಟ್ರಾಧ್ಯಕ್ಷ?        ಸಚಿವ ಡಿಕೆಶಿ ಒಬ್ಬ ಹುಚ್ಚು ದೊರೆ - ಮೊಹಮ್ಮದ್ ಬಿನ್ ತುಘಲಕ್ ರೀತಿ ಆಡ್ತಿದ್ದಾರೆ - ಮಿನಿಸ್ಟರ್ ವಿರುದ್ಧ ಗುಡುಗಿದ ಮಾಜಿ ಸಂಸದ ಬಸವರಾಜು        ಮಡಿಕೇರಿಯಲ್ಲಿ ಮುಂದುವರಿದ ವರುಣನ ಆರ್ಭಟ - ಹಾರಂಗಿಯಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು - ಶಾಲಾ ಕಾಲೇಜ್‌ಗಳಿಗೆ ರಜೆ ಮುಂದುವರಿಕೆ        ನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ - ಪಾರ್ಲಿಮೆಂಟ್​ನಲ್ಲಿ ಪ್ರಧಾನಿ ಸರ್ವ ಪಕ್ಷ ಸಭೆ - ಸುಗಮ ಕಲಾಪಕ್ಕೆ ಸಹಕರಿಸುವಂತೆ ಮನವಿ        ಯುವತಿಗೆ ಕಿರುಕುಳ ನೀಡಿದ ಹೋಮ್‌ಗಾರ್ಡ್‌ - ಆರೋಪಿಯನ್ನ ಕಂಬಕ್ಕೆ ಕಟ್ಟಿಹಾಕಿ ಹಿಗ್ಗಾಮುಗ್ಗಾ ಥಳಿತ - ಯುವತಿ ಹೊಡಿತಕ್ಕೆ ಹೋಮ್‌ಗಾರ್ಡ್‌ ಹಣ್ಣುಗಾಯಿ ನೀರ್‌ಗಾಯಿ       
Breaking News

ಸ್ವಾಮೀ, ಆಲ್ಕೊಹಾಲು ಬೇಡ ಶಾಲೆ ಮಂಜೂರು ಮಾಡಿ: ಸರಕಾರದ ಮುಂದೆ ಖೇಣಿ ಕಣಿ

Tuesday, 08.08.2017, 10:29 AM       No Comments

ಬೀದರ್: ರಾಜ್ಯದಲ್ಲಿ ಊಟ, ವಸತಿ ಹಾಗೂ ಬಟ್ಟೆಗೆ ಕೊರತೆಯಿದೆ. ಅದರಲ್ಲೂ ಕುಡಿಯುವ ನೀರಿಗಂತೂ ಹಾಹಾಕಾರವೇ ಉಂಟಾಗಿದೆ. ಆದರೆ, ನಮ್ಮ ರಾಜ್ಯದಲ್ಲಿ ಮದ್ಯದಂಗಡಿಗಳಿಗೆ ಮಾತ್ರ ಬರವಿಲ್ಲ. ಹೆಚ್ಚಾಗಿರುವ ಮದ್ಯದ ಹಾವಳಿಯಿಂದ ಮುಕ್ತಿ ನೀಡಿ ನಮಗೆ ಶಾಲೆ ಹಾಗೂ ಆಸ್ಪತ್ರೆಯನ್ನು ನೀಡಿ ಎಂದು ಶಾಸಕ ಅಶೋಕ್​ ಖೇಣಿ ಸಿಎಂ ಸಿದ್ದರಾಮಯ್ಯರವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಬೀದರ್​ ಕ್ಷೇತ್ರದ ಶಾಸಕರಾಗಿರುವ ಅಶೋಕ್ ಖೇಣಿ ಅವರು ಜೂನ್​ 23ರಂದು ಸಿಎಂ ಸಿದ್ದರಾಮಯ್ಯರಿಗೆ ಪತ್ರ ಬರೆದಿದ್ದಾರೆ. ಈ ಕುರಿತು ದಿಗ್ವಿಜಯ ನ್ಯೂಸ್​ಗೆ ಮಾಹಿತಿ ಲಭಿಸಿದೆ.

ಕ್ಷೇತ್ರದಲ್ಲಿ ಮದ್ಯದಂಗಡಿಗಳ ಹಾವಳಿ ವಿಪರೀತವಾಗಿದೆ. ಹೀಗಾಗಿ ದಯವಿಟ್ಟು ಹೊಸ ಮದ್ಯದ ಅಂಗಡಿಗೆ ಅನುಮತಿ ನೀಡ ಬೇಡಿ ಅಂತ ಪತ್ರದಲ್ಲಿ ಮನವಿ ಮಾಡಿದ್ದಾರೆ. ಮದ್ಯದ ಅಂಗಡಿಗೆ ಪರವಾನಗಿ ನೀಡೋ ಬದಲಾಗಿ ಕ್ಷೇತ್ರಕ್ಕೆ ಶಾಲೆ ಅಥವಾ ಆಸ್ಪತ್ರೆಯನ್ನ ಮಂಜೂರು ಮಾಡುವಂತೆ ವಿನಂತಿಸಿಕೊಂಡಿದ್ದಾರೆ.

ತಮ್ಮ ಕ್ಷೇತ್ರದಲ್ಲಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಮದ್ಯವ್ಯಸನಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಇದರಿಂದ ಅಪರಾಧ ಚಟುವಟಿಕೆಗಳು ಜಾಸ್ತಿಯಾಗ್ತಿದೆ. ಆದ್ದರಿಂದ ಮದ್ಯದಂಗಡಿಗಳನ್ನ ನಿಷೇಧ ಹೇರುವಂತೆ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಇನ್ನು ಶಾಸಕ ಅಶೋಕ್ ಖೇಣಿ ಜತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸಹ ಇದನ್ನೇ ಪ್ರತಿಪಾದಿಸಿದ್ದು, ಬೀದರ್ ನಲ್ಲಿ ಮದ್ಯ ನಿಷೇಧ ಮಾಡುವಂತೆ ಸಿಎಂ ಸಿದ್ದರಾಮಯ್ಯರನ್ನ ಒತ್ತಾಯಿಸಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top