Tuesday, 22nd August 2017  

Vijayavani

1.ಕೇಬಲ್ ವೈರ್ ಕದ್ದಿದ್ದಾರೆ ಅಂತ ಮೂವರಿಗೆ ಥಳಿಸಿದ್ರು- ಒಬ್ಬನಿಗೆ ಶಾಕ್​ ಕೊಟ್ಟು ಕೊಂದೇ ಬಿಟ್ರು- ಬೆಂಗಳೂರಿನ ಕುಂದಹಳ್ಳಿ ಬಳಿ ಬರ್ಬರ ಹತ್ಯೆ 2.ಸುಪ್ರೀಂಕೋರ್ಟ್​ನಲ್ಲಿಂದು ತಲಾಖ್​ ತೀರ್ಪು- ನ್ಯಾಯದ ನೀರಿಕ್ಷೆಯಲ್ಲಿ ಮುಸ್ಲಿಂ ಮಹಿಳೆಯರು- ಎಲ್ಲರ ಚಿತ್ತ ಫೈನಲ್​ ಜಡ್ಜ್​ಮೆಂಟ್​ನತ್ತ 3.ಎರಡೆಲೆ ಒಂದಾದ್ರೂ ನಿಂತಿಲ್ಲ ಹೈಡ್ರಾಮ- ಬಣ ವೀಲಿನಕ್ಕೆ ಚಿನ್ನಮ್ಮನ ಟೀಂ ಗರಂ – ಇಂದು18 ಶಾಸಕರಿಂದ ಗೌರ್ನರ್​ ಭೇಟಿಗೆ ಟೈಂ ಫಿಕ್ಸ್​ 4.ಕೇಂದ್ರದ ವಿರುದ್ದ ಸಿಡಿದೆದ್ದ ಬ್ಯಾಂಕರ್ಸ್- ಇಂದು ದೇಶಾದ್ಯಂತ ಬಹುತೇಕ ಬ್ಯಾಂಕ್​ ವಹಿವಾಟು ಕ್ಲೋಸ್​- ಎಟಿಎಂ ಬಳಸೋರಿಗೆ ರಿಲಾಕ್ಸ್​ 5.ಶತಮಾನದ ಸೂರ್ಯಗ್ರಹಣಕ್ಕೆ ಅಮೆರಿಕ ಸಾಕ್ಷಿ- ಖಗೋಳದಲ್ಲಿ ಬೆಳಕಿನ ವಿಸ್ಮಯ ಸೃಷ್ಟಿ – ವಜ್ರದುಂಗುರ ಕಂಡು ಬೆರಗಾದ್ರು ಟ್ರಂಪ್​
Breaking News :

ರಾಮ್​ ನಾಥ್ ಕೋವಿಂದ್ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ

Monday, 19.06.2017, 2:10 PM       No Comments

ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ಬಿಹಾರ ರಾಜ್ಯಪಾಲರಾದ ರಾಮ್​ ನಾಥ್​ ಕೋವಿಂದ್​ ಅವರನ್ನು ಆಯ್ಕೆ ಮಾಡಲಾಗಿದೆ.

ಸೋಮವಾರ ನಡೆದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ರಾಷ್ಟ್ರಪತಿ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ರಾಮ್​ ನಾಥ್​ ಕೋವಿಂದ್​ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್​ ಷಾ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಸದ್ಯಕ್ಕೆ ರಾಷ್ಟ್ರಪತಿ ಅಭ್ಯರ್ಥಿ ಮಾತ್ರ ಆಯ್ಕೆ ಮಾಡಲಾಗಿದ್ದು, ಉಪರಾಷ್ಟ್ರಪತಿ ಅಭ್ಯರ್ಥಿ ಚರ್ಚೆ ಇನ್ನೂ ನಡೆದಿಲ್ಲವೆಂದು ಅಮಿತ್​ ಷಾ ಹೇಳಿದ್ದಾರೆ.

ಸೋಮವಾರ ನಡೆದ ಬಿಜೆಪಿ ಸಂಸದೀಯ ಮಂಡಳಿ ಸಭೆಯಲ್ಲಿ ಕೇಂದ್ರ ಸಚಿವರಾದ ರಾಜನಾಥ್​ ಸಿಂಗ್​, ಎಂ. ವೆಂಕಯ್ಯ ನಾಯ್ಡು, ಅರುಣ್​ ಜೇಟ್ಲಿ, ಸುಷ್ಮಾ ಸ್ವರಾಜ್​, ನಿತಿನ್​ ಗಡ್ಕರಿ, ಅನಂತ್​ ಕುಮಾರ್​ ಪಾಲ್ಗೊಂಡಿದ್ದರು.

  • ಎರಡು ಬಾರಿ ರಾಜ್ಯಸಭಾ ಸದಸ್ಯರಾಗಿದ್ದ ರಾಮನಾಥ್‌ ಕೋವಿಂದ (1994-2000 ಮತ್ತು 2000-2006)
  • ಬಿಜೆಪಿ ದಲಿತ ಮೋರ್ಚಾದ ಮಾಜಿ ಅಧ್ಯಕ್ಷ (1998 – 2002)
  • ಬಿಜೆಪಿಯ ರಾಷ್ಟ್ರೀಯ ಮಾಜಿ ವಕ್ತಾರ
  • ಅಖಿಲ ಭಾರತ ಕೋಲಿ ಸಮಾಜದ ಮಾಜಿ ಅಧ್ಯಕ್ಷ
  • ಪ್ರಸ್ತುತ ಬಿಹಾರದ ರಾಜ್ಯಪಾಲರಾಗಿರುವ ಕೋವಿಂದ
  • ಉತ್ತರ ಪ್ರದೇಶದ ಕಾನ್ಪುರ ದೆಹತ್​ ಜಿಲ್ಲೆಯ ದೇರಾಪುರ ತಾಲೂಕಿನ ಪರೌಂಖ್​ ಗ್ರಾಮದಲ್ಲಿ 1945 ಅಕ್ಟೋಬರ್​ 1 ರಂದು ಜನನ

ಬಿಜೆಪಿ ಹಿರಿಯ ನಾಯಕರಾದ ಎಲ್​.ಕೆ. ಅಡ್ವಾಣಿ ಮತ್ತು ಮುರಳಿ ಮನೋಹರ ಜೋಷಿ ಅವರಿಗೆ ರಾಮ್​ ನಾಥ್​ ಕೋವಿಂದ್​ ಅವರ ಆಯ್ಕೆಯ ಕುರಿತು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಮಾಹಿತಿ ನೀಡಿದ್ದರು.

ತೆಲಂಗಾಣ ಮುಖ್ಯಮಂತ್ರಿ ಮತ್ತು ಟಿಆರ್​ಎಸ್​ ಮುಖ್ಯಸ್ಥ ಕೆ. ಚಂದ್ರಶೇಖರ್​ ರಾವ್​ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್​ನಾಥ್​ ಕೋವಿಂದ್​ ಅವರಿಗೆ ಬೆಂಬಲ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದಾರೆ.

ರಾಮ್​ ನಾಥ್​ ಕೋವಿಂದ್​ ಅವರಿಗೆ ಬೆಂಬಲ ಪಡೆಯುವ ಸಂಬಂಧ ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​, ಆಂಧ್ರ ಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಮತ್ತು ತಮಿಳುನಾಡು ಸಿಎಂ ಇ ಪಳನಿಸ್ವಾಮಿ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

Back To Top