Thursday, 19th July 2018  

Vijayavani

ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ - ಕೇರಳ ಸರ್ಕಾರದಿಂದ ಗ್ರೀನ್​ಸಿಗ್ನಲ್        ಕೇಂದ್ರದಿಂದ ನೆರವಿನ ಮಹಾಪೂರ - ಕೃಷಿ ಯೋಜನೆ, ಮೆಗಾ ಡೈರಿ ಆರಂಭಕ್ಕೆ 900 ಕೋಟಿ ನೆರವು        ಸ್ಮಶಾನ ಜಾಗದ ವಿಚಾರವಾಗಿ ಜಟಾಪಟಿ - ಎರಡು ಗುಂಪುಗಳ ಮಧ್ಯೆ ಮಾರಾಮಾರಿ - ಘರ್ಷಣೆಯಲ್ಲಿ 50 ಮಂದಿಗೆ ಗಾಯ        ಕೃಷ್ಣಾ ನದಿಯಲ್ಲಿ ಪ್ರವಾಹದ ನರ್ತನ - ಯಾದಗಿರಿಯ ನೀಲಕಂಠನದೊಡ್ಡಿ ಗ್ರಾಮಕ್ಕೆ ಜಲದಿಗ್ಬಂಧನ - ಗ್ರಾಮಸ್ಥರು ತಲ್ಲಣ        ಮೈಸೂರು ಮಹಾರಾಣಿ ಕಾಲೇಜಿನಲ್ಲಿ ಜಿಟಿಡಿ - ಬಳ್ಳಾರಿಗೆ ಕಳಿಸೋದಾಗಿ ಅಧಿಕಾರಿಗಳಿಗೆ ವಾರ್ನಿಂಗ್- ಚಪ್ಪಾಳೆ ಹೊಡೆದ ಸ್ಟೂಡೆಂಟ್ಸ್        ಎಲ್ಲೆಡೆ ಕೇಳಿಬರ್ತಿದೆ ಧೋನಿ ನಿವೃತ್ತಿ ವಿಷಯ - ಲೀಡ್ಸ್​​ನಲ್ಲಿ ಅಂಪೈರ್ ಬಳಿ ಬಾಲ್ ಪಡೆದಿದ್ದೇಕೆ - ಕ್ರಿಕೆಟಿಗೆ ಗುಡ್​​ಬೈ ಹೇಳ್ತಾರಾ ಮಾಹಿ       
Breaking News

ಬೈಕ್​ ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ-ತಂಗಿ ಸಾವು

Thursday, 12.07.2018, 11:52 AM       No Comments

ಮೈಸೂರು: ಬೈಕ್​ ಅಪಘಾತದಲ್ಲಿ ಗಾಯಗೊಂಡಿದ್ದ ಅಣ್ಣ- ತಂಗಿ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ.

ಪಿರಿಯಾಪಟ್ಟಣದ ಗೊರಳ್ಳಿ ಗ್ರಾಮದ ಅಮೋಘ ವರ್ಷ(18), ಅಮೃತವರ್ಷಿಣಿ (14) ಮೃತ ದುರ್ದೈವಿಗಳು. ಮೃತರ ತಂದೆ ಜಗದೀಶ್ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದು, ನಿನ್ನೆ ಕಸಾಪದಲ್ಲಿ ಸಭೆ ನಡೆಯುತ್ತಿದ್ದಾಗ ಇಬ್ಬರು ತಂದೆಯ ಬೈಕ್​ ತೆಗೆದುಕೊಂಡು ಮನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಬೆಟ್ಟದಪುರದ ಬಳಿ ಅಪಘಾತವಾಯಿತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಬ್ಬರೂ ಇಂದು ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಪಿರಿಯಾಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top