Sunday, 19th August 2018  

Vijayavani

ರಣಚಂಡಿ ಮಳೆಗೆ ಕುಸಿಯುತ್ತಿದೆ ಕೊಡಗು - ಮತ್ತೆ ಜೋರಾಯ್ತು ಮಳೆ ಅಬ್ಬರ - ಮುಕ್ಕೋಡ್ಲು ಗ್ರಾಮದಲ್ಲಿ 80 ಜನರ ರಕ್ಷಣೆ        ಕ್ಷಣ ಕ್ಷಣಕ್ಕೂ ಆತಂಕ, ಬಿರುಕು ಬಿಟ್ಟ ಧರೆ - ಪ್ರವಾಹದಲ್ಲಿ ಕೊಚ್ಚಿ ಹೋಗ್ತಿದೆ ಬೆಟ್ಟ,ಗುಡ್ಡ - ಕಣ್ಮುಂದೆಯೇ ನೆಲಸಮ ವಾಗ್ತಿದೆ ಬದುಕು        ಕೊಡಗಲ್ಲಿ ಇಂದು ಸಿಎಂ ಎಚ್​ಡಿಕೆ ಪ್ರವಾಸ - ಸಂತ್ರಸ್ಥರ ನೋವು ಆಲಿಸಲಿರುವ ಬಿಎಸ್​ವೈ - ನಿರಾಶ್ರಿತರಿಗೆ ನೆರವು ಅಂದ್ರು ರೇವಣ್ಣ        ಸಂತ್ರಸ್ಥರಿಗೆ ಸ್ಯಾಂಡಲ್​ವುಡ್​​​​​​​​​ ನೆರವಿನ ಹಸ್ತ - ಅಗತ್ಯವಸ್ತುಗಳ ಪೂರೈಸಿದ ಸ್ಟಾರ್ಸ್​​​​​​​​​​​ - ಕೈಲಾದ ಸಹಾಯ ಮಾಡ್ತಿದ್ದಾರೆ ಕರುನಾಡ ಜನರು        ಕೇರಳದಲ್ಲಿ ಕಡಿಮೆಯಾಗ್ತಿಲ್ಲ ನೆರೆ ಅಬ್ಬರ - ಸಾವಿನ ಸಂಖ್ಯೆ 357ಕ್ಕೇ ಏರಿಕೆ - ದೇವರನಾಡಿಗೆ ಹರಿದು ಬರ್ತಿದೆ ನೆರವಿನ ಮಹಾಪೂರ        ಭಾರತ - ಇಂಗ್ಲೆಂಡ್​ ನಡುವಿನ 3ನೇ ಟೆಸ್ಟ್​​​​ ಪಂದ್ಯ - ಬೃಹತ್ ಮೊತ್ತದತ್ತ ಟೀಂ ಇಂಡಿಯಾ - ಶತಕದ ಗಡಿಯಲ್ಲಿ ಎಡವಿದ ಕೊಹ್ಲಿ       
Breaking News

ತಲೆ ತೆಗೆದರೆ 10 ಲಕ್ಷ ರೂ: ಯುವ ಬಿಜೆಪಿ, ಜೆಡಿಎಸ್ ಘೋಷಣೆ

Monday, 04.12.2017, 5:40 PM       No Comments

ಬಾಗಲಕೋಟೆ : ಮೌಲ್ವಿ ತಲೆ ಕಡಿದು ತಂದವರಿಗೆ 10 ಲಕ್ಷ ರೂ. ಬಹುಮಾನವನ್ನು ಯುವ ಬಿಜೆಪಿ ಘೋಷಿಸಿದರೆ, ಮತ್ತೊಂದೆಡೆ ಸಂಸದ ಪ್ರತಾಪ್​ಸಿಂಹ ತಲೆ ತೆಗೆದವರಿಗೆ ಅಷ್ಟೇ ಮೊತ್ತದ ಬಹುಮಾನ ನೀಡುವುದಾಗಿ ಜೆಡಿಎಸ್ ಘೋಷಿಸಿದೆ.

ಹುಬ್ಬಳ್ಳಿ ಪಾಕಿಸ್ತಾನದಂತಿದೆ ಎಂಬ ವಿವಾದಾತ್ಮಕ ಹೇಳಿಕೆ ನೀಡಿರುವ ಮೌಲ್ವಿ ಅಬ್ದುಲ್ ಹಮೀದ್ ಖೈರಾತಿ ತಲೆ ಕಡಿದು ತಂದವರಿಗೆ ಹತ್ತು ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಯಂಕಂಚಿ ಘೋಷಿಸಿದ್ದಾರೆ.

ಹುಣಸೂರಿನಲ್ಲಿ ಸಂಸದ ಪ್ರತಾಪ್​ಸಿಂಹ ಬಂಧನ ಖಂಡಿಸಿ ಬಾಗಲಕೋಟೆಯಲ್ಲಿ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಅವರು ಈ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಹುಬ್ಬಳ್ಳಿಯನ್ನು ಪಾಕಿಸ್ತಾನವೆಂದ ಮೌಲ್ವಿ ಭಾರತದಲ್ಲಿರಲು ಅನರ್ಹರು. ಮೌಲ್ವಿ ತಲೆ ತುಂಡರಿಸಿದವರಿಗೆ 10 ಲಕ್ಷ ರೂ. ಬಹುಮಾನವನ್ನು ಬಿಜೆಪಿ ಯುವ ಮೋರ್ಚಾ ನೀಡಲಿದೆ ಎಂದರು.  ಮೌಲ್ವಿ ವಿರುದ್ಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಣಿ ಚೆನ್ನಮ್ಮ ವಿವಾದ:
ಕಿತ್ತೂರುರಾಣಿ ಚೆನ್ನಮ್ಮನ ಬಗ್ಗೆ ಫೇಸ್ ಬುಕ್ ಪೇಜ್ ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಾರೆನ್ನಲಾದ ಹಿನ್ನೆಲೆಯಲ್ಲಿ ಸಂಸದ ಪ್ರತಾಪ್​ ಸಿಂಹನ ತಲೆ ತೆಗೆದರೆ 10 ಲಕ್ಷ ರೂ. ಬಹುಮಾನ ನೀಡುವುದಾಗಿ ಬಾಗಲಕೋಟೆ ಜಿಲ್ಲಾ ಜೆಡಿಎಸ್ ಮುಖಂಡ ಶಿವಕುಮಾರ ಗದ್ದಿ ಘೋಷಿಸಿದ್ದಾರೆ.

ಕಿತ್ತೂರು ರಾಣಿ ಚೆನ್ನಮ್ಮನ ಬಗ್ಗೆ ತಮಗೂ ಗೌರವವಿದೆ. ನನ್ನ ಅಭಿಮಾನಿಗಳೆಂದು ಹೇಳಿಕೊಂಡು ಯಾರೋ ಮಾಡಿರುವ ದುಷ್ಕೃತ್ಯವದು. ನನಗೆ ಸಂಬಂಧವಿಲ್ಲ ಎಂದು ಪ್ರತಾಪ ಸಿಂಹ ಸ್ಪಷ್ಟನೆ ನೀಡಿದ್ದಾರೆ.

Leave a Reply

Your email address will not be published. Required fields are marked *

Back To Top