Sunday, 24th June 2018  

Vijayavani

ಆಪ್ತರ ಜತೆ ಮಾಜಿ ಸಿಎಂ ಸಭೆ ಹಿನ್ನೆಲೆ - ಸಿದ್ದರಾಮಯ್ಯ ಭೇಟಿಗೆ ತೆರಳಿದ ಪರಂ - ರಾಜಕೀಯ ವಿಚಾರಗಳ ಬಗ್ಗೆ ನಾಯಕರ ಚರ್ಚೆ ಸಾಧ್ಯತೆ        ಪ್ರಕೃತಿ ಚಿಕಿತ್ಸಾಲಯದಿಂದ ಹೊರ ಬಂದ ಸಿದ್ದು - ಅಭಿಮಾನಿಗಳ ಜತೆ ಮಾಜಿ ಸಿಎಂ ಚರ್ಚೆ - ಕೈ ಕಾರ್ಯಕರ್ತರ ಜತೆ ಸೆಲ್ಫಿಗೆ ಫೋಸ್​​        ಶಿವಮೊಗ್ಗದಲ್ಲಿ ಮತ್ತೆ ಝಳಪಿಸಿದ ಮಾರಕಾಸ್ತ್ರ - ರೌಡಿ ಶೀಟರ್​​​ ಹಬೀಬ್​ ಬರ್ಬರ ಹತ್ಯೆ - ತುಂಗಾನಗರ ಠಾಣೆಯಲ್ಲಿ ಪ್ರಕರಣ        ಖಾತೆ ಹಂಚಿಕೆಯಾಯ್ತು, ಈಗ ಬಂಗಲೆ ಸರದಿ - ಒಂದೊಂದು ಬಂಗಲೆಗೆ ಮೂವರ ಪೈಪೋಟಿ - ಸಿಎಂ ಕುಮಾರಸ್ವಾಮಿಗೆ ಬಂಗಲೆ ಕೊಡೋದೇ ಚಿಂತೆ        ಹಿಟ್​​ಲಿಸ್ಟ್​​ನಲ್ಲಿದ್ದ 20 ಉಗ್ರರ ಪೈಕಿ ಇಬ್ಬರು ಫಿನಿಶ್ - ಕುಲ್ಗಾಮದಲ್ಲಿ ಇಬ್ಬರು ಎಲ್​​ಇಟಿ ಉಗ್ರರು ಉಡೀಸ್​ - ಶಸ್ತ್ರ ಸಹಿತ ಒಬ್ಬ ಟೆರರ್​ ಸರೆಂಡರ್        ಮನೆಗಾಗಿ ಕಣ್ಣೀರಿಟ್ಟ ವೃದ್ಧೆಗೆ ಶಾಸಕರ ಸಹಾಯ - 20 ಸಾವಿರ ಹಣ ನೀಡಿದ ಡಾ.ರಂಗನಾಥ - ದಿಗ್ವಿಜಯ ನ್ಯೂಸ್​ ವರದಿಗೆ ಸ್ಪಂದಿಸಿದ ಕುಣಿಗಲ್​ ಶಾಸಕ       
Breaking News

ಯಡಿಯೂರಪ್ಪ ಸಿಎಂ ಆದರೆ ರೈತರ ಸಾಲ ಮನ್ನಾ

Wednesday, 13.06.2018, 10:51 AM       No Comments

ಬೀಳಗಿ: ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿ ಸರ್ಕಾರ ಕೆಲವೇ ದಿನಗಳಲ್ಲಿ ಬೀಳಲಿದ್ದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲಿದೆ ಎಂದು ಬೀಳಗಿ ಶಾಸಕ ಮುರುಗೇಶ ನಿರಾಣಿ ಹೇಳಿದರು.

ತಾಲೂಕಿನ ಯಡಹಳ್ಳಿ, ಅಮಲಝುರಿ, ಗಲಗಲಿ ಗ್ರಾಮದಲ್ಲಿ ಗಲಗಲಿ ಜಿಪಂ ಉಪ ಚುನಾವಣೆ ಬಿಜೆಪಿ ಅಭ್ಯರ್ಥಿ ಚನ್ನಪ್ಪ ಜಮಖಂಡಿ ಪರ ತಮ್ಮ ಬೆಂಬಲಿಗರೊಂದಿಗೆ ಮನೆ ಮನೆಗೆ ತೆರಳಿ ಮತಯಾಚಿಸಿ ಮಾತನಾಡಿ, ಯಡಿಯೂರಪ್ಪ ಮುಖ್ಯಮಂತ್ರಿಯಾದ ತಕ್ಷಣ 1 ಲಕ್ಷದವರೆಗೆ ರಾಷ್ಟ್ರೀಕೃತ ಹಾಗೂ ಸಹಕಾರಿ ಸಂಘಗಳಲ್ಲಿನ ರೈತರ ಸಾಲ ಮನ್ನಾ ಮಾಡಲಿದ್ದಾರೆ. ಅಲ್ಲದೆ ಮುಳುಗಡೆ ಸಂತ್ರಸ್ತರ ಜಮೀನುಗಳಿಗೆ ಸೂಕ್ತ ಪರಿಹಾರ ದೊರೆಯಲಿದೆ. ಗ್ರಾಮದ ಯಾವುದೇ ಸಮಸ್ಯೆ ಇದ್ದರೂ ಪಕ್ಷಪಾತ ಮಾಡದೆ ಅಭಿವೃದ್ಧಿ ಮಾಡುವುದಾಗಿ ಹೇಳಿದರು.

ಮುಳುಗಡೆ ಸಂತ್ರಸ್ತರ ಸಮೀತಿ ಅಧ್ಯಕ್ಷ ಮುತ್ತು ದೇಸಾಯಿ ಮಾತನಾಡಿ, ಮುಳುಗಡೆ ಸಂತ್ರಸ್ತರ ಹಾಗೂ ಮತಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ದೊರೆಯಬೇಕಿದ್ದರೆ ಅದು ಶಾಸಕ ಮುರುಗೇಶ ನಿರಾಣಿ ಅವರಿಂದ ಮಾತ್ರ ಸಾಧ್ಯ. ಜಿಪಂ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಚನ್ನಪ್ಪ ಜಮಖಂಡಿ ಅವರನ್ನು ಗೆಲ್ಲಿಸುವ ಮೂಲಕ ಶಾಸಕರ ಕೈ ಬಲ ಪಡಿಸಬೇಕು ಎಂದರು.

ಅಭ್ಯರ್ಥಿ ಚನ್ನಪ್ಪ ಜಮಖಂಡಿ, ಜಿಪಂ ಸದಸ್ಯ ಬೆನ್ನಪ್ಪ ಬೀಳಗಿ, ತಾಲೂಕು ಅಧ್ಯಕ್ಷ ಸಂಗಣ್ಣ ಕಟಗೇರಿ, ಜಿ.ಡಿ. ದೇಸಾಯಿ, ಲಕ್ಷ್ಮಣ ದೊಡಮನಿ, ಹನಮಂತ ಲಿಂಗರಡ್ಡಿ, ಗೌಡಪ್ಪ ಕುಳಲಿ, ಅಶೋಕ ಗುರಡ್ಡಿ, ಮೋಹನ ಜಾಧವ, ಆನಂದ ಇಂಗಳಗಾಂವಿ, ಹೊಳಬಸು ಬಾಳಶೆಟ್ಟಿ, ಯಂಕಪ್ಪ ಹೊನ್ನಳಿ, ಎಂ.ಎಂ. ಶಂಭೋಜಿ, ಸಾಬು ದೇಸಾಯಿ, ಡಾ. ಹರೀಶ, ಸತೀಶ ಲಿಂಗರಡ್ಡಿ ಅಪಯ್ಯ ಅಂಗಡಿ ಎಸ್.ಜಿ. ಗೋಳಿಪಲ್ಲೆ ಹಾಗೂ ಇನ್ನೂ ಅನೇಕರು ಇದ್ದರು.

Leave a Reply

Your email address will not be published. Required fields are marked *

Back To Top