Monday, 18th June 2018  

Vijayavani

ಕಾವೇರಿ ನಿರ್ವಹಣಾ ಮಂಡಳಿ ರಚನೆ ವಿಚಾರ - ಕೆಲವೇ ಕ್ಷಣಗಳಲ್ಲಿ ಮೋದಿ, ಎಚ್​ಡಿಕೆ ಭೇಟಿ - ಕುತೂಹಲ ಕೆರಳಿಸಿದ ಮಾತುಕತೆ        ಸಮುದ್ರ ತೀರದಲ್ಲಿ ವಿಹಾರಕ್ಕೆ ಹೋದಾಗ ಅನಾಹುತ - ಅಲೆಗಳ ಅಬ್ಬರಕ್ಕೆ ಸಿಲುಕಿ ಇಬ್ಬರು ನೀರುಪಾಲು - ಗೋವಾದಲ್ಲಿ ದುರಂತ        ಶಾಸಕಿ, ಸಚಿವೆ ಮಧ್ಯೆ ಸೇವೆಯ ಸಮರ - ಅಪಾರ್ಥ ಬೇಡವೆಂದ ಲಕ್ಷ್ಮಿ ಹೆಬ್ಬಾಳ್ಕರ್ - ಜಯಮಾಲಾಗೆ ಹೊಗಳಿಕೆ        ಅಧಿಕಾರಕ್ಕೆ ಬಂದು ತಿಂಗಳಾದ್ರೂ ಭರವಸೆ ಈಡೇರಿಲ್ಲ - ಅಪ್ಪ-ಮಗ ರೈತರಿಗೆ ಕೊಟ್ಟ ಭರವಸೆ ಈಡೇರಿಸಿಲ್ಲ - ಬಿಎಸ್​ವೈ ಕಿಡಿ        ರಾಜ್ಯಕ್ಕೆ ಎಚ್​​ಡಿಕೆ ಸಿಎಂ, ನನಗೆ ಸಿದ್ದು ಸಿಎಂ - ಸಚಿವನಾಗಲು ಸಿದ್ದರಾಮಯ್ಯರೇ ಕಾರಣ - ಸಚಿವ ಪುಟ್ಟರಂಗಶೆಟ್ಟಿ        ಪೋಷಕರ ಡಾಟಾ ಲೀಕ್​ ಆರೋಪ - ಬಾಲ್ಡ್​​​ವಿನ್​ ಶಾಲೆ ಮಾನ್ಯತೆ ರದ್ದಿಗೆ ಶಿಫಾರಸು       
Breaking News

ದೀಪಕ್​ ಹತ್ಯೆಯಲ್ಲಿ ಬಿಜೆಪಿ ಕೈವಾಡ: ನನ್ನ ಬಳಿ ಇರುವ ಮಾಹಿತಿ ಸುಳ್ಳೂ ಇರಬಹುದು ಎಂದ ಎಚ್​ಡಿಕೆ

Monday, 08.01.2018, 5:08 PM       No Comments

ಮೈಸೂರು: ದೀಪಕ್​ ರಾವ್​ ಹತ್ಯೆ ಹಿಂದೆ ಬಿಜೆಪಿ ಸ್ಥಳೀಯ ನಾಯಕರ ಕೈವಾಡವಿದೆ ಎಂಬ ಮಾಹಿತಿ ತಮ್ಮ ಬಳಿ ಇದೆ ಎಂದು ಹೇಳಿದ್ದ ಎಚ್​​​.ಡಿ ಕುಮಾರಸ್ವಾಮಿ ಉಲ್ಟಾ ಹೊಡೆದಿದ್ದಾರೆ.

ದೀಪಕ್​ ರಾವ್​ ಹತ್ಯೆ ಹಿಂದೆ ಸ್ಥಳೀಯ ಬಿಜೆಪಿ ನಾಯಕರ ಕೈವಾಡವಿದೆ: ಎಚ್​ಡಿಕೆ

ಸೋಮವಾರ ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಅವರು, ದೀಪಕ್​ ರಾವ್​ ಹತ್ಯೆ ಹಿಂದೆ ಬಿಜೆಪಿ ಸ್ಥಳೀಯ ನಾಯಕರ ಕೈವಾಡವಿದೆ ಎಂದು ಹೇಳಿದ್ದರು. ಆದರೆ, ಈ ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ಉಲ್ಟಾ ಹೊಡೆದಿರುವ ಅವರು, ನನ್ನ ಬಳಿ ಇರುವ ಮಾಹಿತಿ ಸುಳ್ಳೂ ಇರಬಹುದು ಎಂದಿದ್ದಾರೆ. ಯಾರೇ ಒಬ್ಬ ವ್ಯಕ್ತಿಯ ಮೇಲೆ ನಾನು ಆರೋಪ ಮಾಡಿಲ್ಲ.

ಕೊಲೆ ಪ್ರಕರಣಗಳಲ್ಲಿ ರಾಷ್ಟ್ರೀಯ ಪಕ್ಷಗಳು ರಾಜಕಾರಣ ಮಾಡುವುದು ಬೇಡ ಎಂಬುದಷ್ಟೆ ನನ್ನ ಮಾತಿನ ಅರ್ಥವಾಗಿತ್ತು. ಸುಪಾರಿ ಪದವನ್ನು ನಾನು ಈ ಮೊದಲು ಬಳಸಿಲ್ಲ. ಮಾಧ್ಯಮಗಳೇ ದುಬೈನಿಂದ ಸುಪಾರಿ ಕೊಟ್ಟಿರುವ ಬಗ್ಗೆ ವರದಿ ಮಾಡಿದ್ದವು‌. ಅದನ್ನು ನಾನು ಹೇಳಿದ್ದೇನೆ ಎಂದರು.

Leave a Reply

Your email address will not be published. Required fields are marked *

Back To Top