Monday, 23rd July 2018  

Vijayavani

ಬಿಜೆಪಿ ಸಂಪರ್ಕ್ ಸಮರ್ಥನ್ ಅಭಿಯಾನ - ಕಿಚ್ಚ ಸುದೀಪ್ ಭೇಟಿಯಾದ ಶ್ರೀರಾಮುಲು- ಮೋದಿ ಸಾಧನೆ ಪುಸ್ತಕ  ವಿತರಣೆ        ದೆಹಲಿಯಲ್ಲಿ ರಾಹುಲ್-ಸಿದ್ದು ಭೇಟಿ - ದೋಸ್ತಿ ನಡೆಗೆ ಅಸಮಾಧಾನ ಹೊರಹಾಕಿದ್ರಾ ಸಿದ್ದು - ಕುತೂಹಲ ಕೆರಳಿಸಿದ ಕೈ ದಿಗ್ಗಜರ ಭೇಟಿ        ಮತ್ತೆ ವಾಸ್ತು ಮೊರೆ ಮೋದ ರೇವಣ್ಣ - ಸರ್ಕಾರಿ ಬಂಗಲೆ ನವೀಕರಣಕ್ಕೆ 2 ಕೋಟಿ ಖರ್ಚು - ಇದೇನಾ ದುಂದುವೆಚ್ಚಕ್ಕೆ ಕಡಿವಾಣ ?        ದರ್ಶನ್ ಮ್ಯಾನೇಜರ್​​ ಮಲ್ಲಿಕಾರ್ಜುನ್​ನಿಂದ ಮತ್ತೊಂದು ದೋಖಾ - ನಟ ಅರ್ಜುನ್ ಸರ್ಜಾಗೂ ಮಹಾ ಮೋಸ        ಶೀರೂರು ಶ್ರೀ ಸಾವಿಗೆ ಟ್ವಿಸ್ಟ್ ಮೇಲೆ ಟ್ವಿಸ್ಟ್ - ಸ್ವಾಮೀಜಿ ಕೊನೆದಿನದ ಡಿವಿಆರ್ ನಾಪತ್ತೆ - ಪೊಲೀಸರಿಂದ ತೀವ್ರ ಶೋಧ       
Breaking News

ಚಲುವರಾಯಸ್ವಾಮಿ, ರಮೇಶ್​ ಬಾಬು ಬಂಡಿಸಿದ್ದೇಗೌಡಗೆ ಬಿಜೆಪಿ ಗಾಳ?

Thursday, 12.07.2018, 9:35 AM       No Comments

ಮಂಡ್ಯ: ಜಿಲ್ಲೆಯ ಪ್ರಭಾವಿ ಒಕ್ಕಲಿಗ ನಾಯಕ ಹಾಗೂ ಮಾಜಿ ಶಾಸಕರಾದ ಎನ್​. ಚಲುವರಾಯಸ್ವಾಮಿ ಮತ್ತು ರಮೇಶ್​ ಬಾಬು ಬಂಡಿಸಿದ್ದೇಗೌಡ ಅವರನ್ನು ಪಕ್ಷಕ್ಕೆ ಸೆಳೆಯಲು ಬಿಜೆಪಿ ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಪ್ರಭಾವವಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್​ ಮತ್ತು ಕಾಂಗ್ರೆಸ್​ ಒಟ್ಟಿಗೆ ಮೈತ್ರಿ ಅಭ್ಯರ್ಥಿಯನ್ನು ನಿಲ್ಲಿಸಿದರೆ ಆ ಅಭ್ಯರ್ಥಿಯ ಎದುರು ಪ್ರಬಲ ಅಭ್ಯರ್ಥಿಯನ್ನು ಬಿಜೆಪಿಯಿಂದ ನಿಲ್ಲಿಸಲು ಪ್ಲ್ಯಾನ್​ ರೂಪಿಸಲಾಗುತ್ತಿದೆ.

ಜೆಡಿಎಸ್​ನ ರೆಬೆಲ್​ ನಾಯಕರಾದ ಚಲುವರಾಯಸ್ವಾಮಿ ಮತ್ತು ರಮೇಶ್​ ಬಾಬು ಬಂಡಿಸಿದ್ದೇಗೌಡ ಅಡ್ಡಮತದಾನ ಮಾಡಿ ಕಾಂಗ್ರೆಸ್​ಗೆ ಸೇರಿದ್ದರು. ಆದರೆ ವಿಧಾನಸಭೆ ಚುನಾವಣೆಯಲ್ಲಿ ಈ ಇಬ್ಬರೂ ಕಾಂಗ್ರೆಸ್​ನಿಂದ ಸ್ಪರ್ಧಿಸಿ ಸೋತಿದ್ದರು. ಜತೆಗೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರಿಗೆ ಸಚಿವ ಜಮೀರ್​ ಅಹಮದ್​ ಹತ್ತಿರವಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಮೀರ್​ ಅವರಿಂದಲೂ ಇಬ್ಬರೂ ನಾಯಕರು ಅಂತರ ಕಾಯ್ದುಕೊಂಡಿದ್ದಾರೆ.

ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಇಬ್ಬರು ನಾಯಕರನ್ನು ಬಿಜೆಪಿಗೆ ಸೆಳೆಯಲು ಪ್ರಯತ್ನಿಸಲಾಗುತ್ತಿದೆ. ಪಕ್ಷಕ್ಕೆ ಬಂದರೆ ಒಬ್ಬರಿಗೆ ಸಂಸತ್​ ಟಿಕೆಟ್​ ನೀಡುವುದಾಗಿ ಮತ್ತು ಮತ್ತೊಬ್ಬರಿಗೆ ಎಂಎಲ್​ಸಿ ಮಾಡುವುದಾಗಿ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

Back To Top