Friday, 21st September 2018  

Vijayavani

ಮತ್ತೆ ದೇವಸ್ಥಾನಕ್ಕೆ ಹೊರಟ ಸಿಎಂ - ಇಂದು ಸಂಜೆ ಶೃಂಗೇರಿ ಶಾರದಾಂಬೆಯ ದರ್ಶನ - ನಂತರ ಜಗದ್ಗುರಗಳ ಭೇಟಿ        ಕೊಡಗಿನಲ್ಲಿ ತಹಸೀಲ್ದಾರ್ ಮೇಲೆ‌ ಹಲ್ಲೆ ಪ್ರಕರಣ - ಪ್ರಕರಣ ಸಂಬಂಧ 12 ಆರೋಪಿಗಳ ಬಂಧನ        ಸಿಎಂ ದಂಗೆ ಹೇಳಿಕೆಗೆ ಆಕ್ರೋಶ - ಇಂದು ರಾಜ್ಯಪಾಲರಿಗೆ ಬಿಜೆಪಿ ನಿಯೋಗದ ದೂರು - ಬಿಎಸ್​​ವೈ ನಿವಾಸಕ್ಕೆ ಬಿಗಿ ಭದ್ರತೆ        ಸಂಪುಟ ಸಭೆಯಲ್ಲಿ ಸಿಎಂ ದಂಗೆ ಹೇಳಿಕೆ ಪ್ರಸ್ತಾಪ - ಎಚ್​ಡಿಕೆ ಮಾತಿಗೆ ಹಿರಿಯ ಸಚಿವರಿಂದಲೇ ಆಕ್ಷೇಪ        ಎಸ್. ಗಿರೀಶ್​​ರಿಂದ ಆಪರೇಷನ್ ಕ್ಲೀನ್ - ಸಿಸಿಬಿ ಎಸ್ಪಿಯಾಗಿ ಬಂದ 24 ಗಂಟೆಯಲ್ಲೇ 5 ಸಿಬ್ಬಂದಿ ಎತ್ತಂಗಡಿ        ಬಾಗಲಕೋಟೆಯ ಬನಹಟ್ಟಿಯಲ್ಲೊಬ್ಬ ಪೋಲಿ ಶಿಕ್ಷಕ - ವಿದ್ಯಾರ್ಥಿನಿ ಮೊಬೈಲ್​​​ಗೆ ಐ ಲವ್ ಯೂ ಮೆಸೇಜ್       
Breaking News

ರಾಷ್ಟ್ರೀಯ ಹೆದ್ದಾರಿ ಬಳಿ ವಾಮಾಚಾರ, ಗ್ರಾಮಸ್ಥರಲ್ಲಿ ಆತಂಕ

Thursday, 14.06.2018, 12:28 PM       No Comments

ನೆಲಮಂಗಲ: ನೆಲಮಂಗಲದ ಅರಿಶಿನಕುಂಟೆ ಗ್ರಾಮದ ಮುಖ್ಯದ್ವಾರದ ರಸ್ತೆಯಲ್ಲಿ ದುಷ್ಕರ್ಮಿಗಳು ವಾಮಾಚಾರ ಮಾಡಿರುವುದು ಕಂಡುಬಂದಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅರಿಶಿನಕುಂಟೆ ಗ್ರಾಮದ ತುಮಕೂರು ರಸ್ತೆಯಲ್ಲಿರುವ ರಾಷ್ಟ್ರೀಯ ಹೆದ್ದಾರಿ 4ರ ಬಳಿ ಈ ಘಟನೆ ಕಂಡುಬಂದಿದೆ. ನಿನ್ನೆ ತಡರಾತ್ರಿ ಅಮಾವಾಸ್ಯೆ ನಿಮಿತ್ತ ಅಪರಿಚಿತ ದುಷ್ಕರ್ಮಿಗಳು ಗ್ರಾಮಕ್ಕೆ ಹಾಗೂ ಗ್ರಾಮಸ್ಥರಿಗೆ ಕೆಡುಕು ಮಾಡುವ ದೃಷ್ಟಿಯಿಂದ ಇಂಥ ವಾಮಾಚಾರಕ್ಕೆ ಕೈಹಾಕಿದ್ದಾರೆ ಎನ್ನಲಾಗಿದೆ.

ವಾಮಾಚಾರ ನಡೆದಿರುವ ರಸ್ತೆಯಲ್ಲೇ ಗ್ರಾಮ ಪಂಚಾಯಿತಿ ಕಚೇರಿಯೂ ಇದ್ದು, ಇದರಲ್ಲಿ ಗ್ರಾಮಸ್ಥರ ಕೈವಾಡವಿರಬಹುದೆಂಬುದು ಗ್ರಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top