Monday, 22nd October 2018  

Vijayavani

ರಾಮನಗರ ಅಖಾಡ ಜಯಿಸಲು ರಣತಂತ್ರ - ದೋಸ್ತಿಗಳ ಮಿಡ್​​​ನೈಟ್​​​ ಮೀಟಿಂಗ್​ - ಸಿಎಂ ಎಚ್​ಡಿಕೆ, ಡಿಕೆಶಿ ನೇತೃತ್ವದಲ್ಲಿ ರಣತಂತ್ರ        ಮಲೆನಾಡ ರಣಕಣದಲ್ಲಿ ಬಿಜೆಪಿ ಅಬ್ಬರ-ಮಧು ಬಂಗಾರಪ್ಪ ಪರ ದಿಗ್ಗಜರ ಪ್ರಚಾರ - ಮಂಡ್ಯದಲ್ಲಿ ಕೈಗೆ ತಲ್ಲಣ ತಂದಿಟ್ಟ ಪರಾಜಿತರು        ಗಣಿನಾಡಿನಲ್ಲಿಂದು ‘ಕೈ’ ದಿಗ್ಗಜರ ದಂಡು - ಸಿದ್ದು, ಡಿಕೆಶಿ, ಜಾರಕಿಹೊಳಿ ಬ್ರದರ್ಸ್​​​​​​ ಕ್ಯಾಂಪೇನ್​ - ಮಾತನಾಡ್ತಾರಾ ನಾಯಕರು..?        ಆದೇಶವಿದ್ರೂ ಮುಚ್ಚಲಿಲ್ಲ ಘಟಕಗಳು - ಹೈಕೋರ್ಟ್​​​​ ಆದೇಶ ಮೀರಿ ನಡೆಯುತ್ತಿವೆ  ಶುದ್ಧ ನೀರಿನ ಘಟಕದ ಹೆಸರಲ್ಲಿ ದಂಧೆ        ವಾಣಿವಿಲಾಸ್​ ಆಸ್ಪತ್ರೆಯಲ್ಲಿ ಲೇಡಿ ಡಾನ್ಸ್​ - ಹಣ ಕೊಟ್ರೆ ಮಾತ್ರ ಒಳಗೆ ಪರ್ಮಿಷನ್​ - ಲಂಚ ಕೊಡದಿದ್ರೆ ಇಲ್ಲಿ ಏನೂ ನಡಿಯಲ್ಲ..!        20 ಜನರ ಉಳಿಸಿ, ಜೀವ ತೊರೆದ ಯೋಧ - ಹುತಾತ್ಮ ಉಮೇಶ್​ ದೇಹ ಇಂದು ರಾಜ್ಯಕ್ಕೆ - ಗೋಕಾಕ್​ ಪಟ್ಟಣದಲ್ಲಿ ಅಂತ್ಯಕ್ರಿಯೆ       
Breaking News

ಬಿಎಂಟಿಸಿ, ಕೆಎಸ್​ಆರ್​ಟಿಸಿ ನೌಕರರಿಗಿಲ್ಲ ಗುರುತಿನ ಚೀಟಿ!

Friday, 08.12.2017, 10:43 AM       No Comments

ಬೆಂಗಳೂರು: ದೇಶದಲ್ಲಿಯೇ ಅತ್ಯುತ್ತಮ ಸಾರಿಗೆ ಎಂದು ಕರೆಸಿಕೊಳ್ಳುವ ಬಿಎಂಟಿಸಿ ಹಾಗೂ ಕೆಎಸ್​ಆರ್​ಟಿಸಿ ತನ್ನ ಸಿಬ್ಬಂದಿಗೆ ಗುರುತಿನ ಚೀಟಿಯನ್ನೇ ಕೊಟ್ಟಿಲ್ಲ.

ಇದರಿಂದ ಸಿಬ್ಬಂದಿಗೆ ಸಾಕಷ್ಟು ತೊಂದರೆ ಆಗುತ್ತಿದ್ದು, ಸಾಲ ಪಡೆಯೋದಿಕ್ಕೆ ; ಅಷ್ಟೇ ಯಾಕೆ ಮೊಬೈಲ್ ಸಿಮ್ ಕಾರ್ಡ್ ಪಡೆಯೋದಕ್ಕೂ ಪರಿತಪಿಸುವಂತಾಗಿದೆ.

ಸಾಮಾನ್ಯವಾಗಿ ಯಾವುದೇ ಸಣ್ಣಪುಟ್ಟ ಕಂಪನಿಗೆ ಕೆಲಸಕ್ಕೆ ಸೇರಿದರೆ ಐಡಿ ಕಾರ್ಡ್ ನೀಡುವುದು ಕಾಮನ್. ಆದರೆ, ಪ್ರಯಾಣಿಕರ ಹಾಗೂ ಸಿಬ್ಬಂದಿ ಹಿತಾಸಕ್ತಿ ಕಾಪಾಡುವುದೇ ನಮ್ಮ ಧ್ಯೇಯ ಎನ್ನುವ ನಿಗಮ, ತನ್ನ ಸಂಸ್ಥೆಗಳಲ್ಲಿ ಉಚಿತವಾಗಿ ಓಡಾಡೋಕೆ ಪಾಸ್ ನೀಡಿರುವುದು ಬಿಟ್ಟರೆ ಮತ್ಯಾವ ರೀತಿಯ ಗುರುತಿನ ಚೀಟಿಯನ್ನೂ ನೀಡಿಲ್ಲ.

ಇನ್ನು, ಸಾಲ ಪಡೆಯಬೇಕು ಡಿಪೋಗಳಲ್ಲಿ ಅಧಿಕೃತ ಸೀಲ್ ಹಾಕಿರುವ ಪತ್ರ ನೀಡಿ ಎಂದರೂ ಅಧಿಕಾರಿಗಳು ನೀಡುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ಸಾರಿಗೆ ಸಚಿವ ರೇವಣ್ಣರನ್ನು ಕೇಳಿದರೆ ಇದೆಲ್ಲಾ ದೊಡ್ಡ ವಿಚಾರ ಅಲ್ಲ ಬಿಡಿ ಎಂದು ಉಡಾಫೆ ಉತ್ತರ ನೀಡುತ್ತಾರೆ ಎನ್ನುವುದು ಸಿಬ್ಬಂದಿ ಅಳಲು. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top