Sunday, 15th July 2018  

Vijayavani

ಬಾಲಕನ ವಿಡಿಯೋ ಹಿಂದೆ ಬಿಜೆಪಿ ಕೈವಾಡ ಆರೋಪ - ವಿಡಿಯೋ ತನಿಖೆಗೆ ಸದಾನಂದಗೌಡ ಆಗ್ರಹ - ರಾಜಕಾರಣಿಗಳ ಆಟಕ್ಕೆ ಕೊಡವರ ಆಕ್ರೋಶ        26 ವರ್ಷ ಲಿಂಗಾಯತರೇ ರಾಜ್ಯ ಆಳಿದ್ದಾರೆ - ಕುಮಾರಸ್ವಾಮಿ ಸಿಎಂ ಆಗಿ 2 ತಿಂಗಳಾಗಿದೆ - ಉತ್ತರ ಕರ್ನಾಟಕ ನಿರ್ಲಕ್ಷ್ಯ ಆರೋಪಕ್ಕೆ ದೇವೇಗೌಡ ತಿರುಗೇಟು        ಕೊನೆಗೂ ಶಿರಾಡಿ ಘಾಟ್‌ ಲೋಕಾರ್ಪಣೆ - ವಾಸ್ತು ಪ್ರಕಾರ ರೇವಣ್ಣ ಉದ್ಘಾಟನೆ - ರಾಷ್ಟ್ರೀಯ ಹೆದ್ದಾರಿ ಸಂಚಾರಕ್ಕೆ ಮುಕ್ತ        ಮಟನ್ ಬಿರಿಯಾನಿ, ಚಿಕನ್ ಚಾಪ್ಸ್, ಬೋಟಿ ಗೊಜ್ಜು, ಮೊಟ್ಟೆ - 25 ಸಾವಿರ ಮಂದಿಗೆ ಭರ್ಜರಿ ಬಾಡೂಟ - ಚಾಮುಂಡೇಶ್ವರಿ ಕ್ಷೇತ್ರದ ಜನರಿಗೆ ಜಿಟಿಡಿ ಕೃತಜ್ಞತೆ        ಒಂದು ದೇಶ ಒಂದೇ ಚುನಾವಣೆ - ಮೋದಿ ಪರಿಕಲ್ಪನೆಗೆ ಸೂಪರ್‌ಸ್ಟಾರ್‌ ಬೆಂಬಲ - ಹಣ, ಸಮಯ ಉಳಿತಾಯ ಎಂದ ರಜನಿ        ಉಕ್ಕಿಹರಿಯುತ್ತಿರೋ ಕೃಷ್ಣೆ - ಬೆಳಗಾವಿ, ಚಿಕ್ಕೋಡಿ ಭಾಗದಲ್ಲಿ ಪ್ರವಾಹ ಪರಿಸ್ಥಿತಿ - ಇತ್ತ ತಮಿಳುನಾಡಿನಲ್ಲಿ ಕಾವೇರಿ ಭೋರ್ಗರೆತ       
Breaking News

ಕೆಟ್ಟ ಮೇಲೆ ಬುದ್ಧಿ ಬಂತು: BMTC ಅಧ್ಯಕ್ಷರಿಂದ ಡಿಪೋಗೆ ದಿಢೀರ್​ ಭೇಟಿ

Thursday, 14.09.2017, 8:15 AM       No Comments

ಬೆಂಗಳೂರು: ಕೆಟ್ಟ ಮೇಲೆ ಬುದ್ದಿ ಬಂತು ಅನ್ನೋ ಹಾಗೇ ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ಅವರು ನಿನ್ನೆ ದಿಢೀರನೆ ಬಿಎಂಟಿಸಿ ಡಿಪೋಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಳೆದ ಒಂದು ವಾರಗಳ ಕಾಲ ನಗರದಲ್ಲಿ ಮಳೆರಾಯ ಸೃಷ್ಟಿಸಿದ ಅವಾಂತರ ವಿಕ್ಷೀಸಲೆಂದು ನಿನ್ನೆ ಸಿಎಂ ನಗರ ಪ್ರದಕ್ಷಿಣೆ ನಡೆಸಿದರು. ಈ ವೇಳೆ ವೋಲ್ವೋ ಬಸ್​ನಲ್ಲಿ ಸಿಎಂ ಪ್ರಯಾಣಿಸುತ್ತಿದ್ದರು.

ದುರಾದೃಷ್ಟವೋ ಅಥವಾ ಜನರ ಶಾಪವೋ ಸಿಎಂ ಪ್ರಯಾಣಿಸುತ್ತಿದ್ದ ವೋಲ್ವೋ ಬಸ್​ ಕೆಟ್ಟನಿಂತ್ತಿತ್ತು. ನಂತರ ಮತ್ತೊಂದು ಬಸ್​ ಹತ್ತಿದಾಗ ಅದೂ ಕೂಡ ಅದೇ ಕೆಟ್ಟಹೋಯಿತು. ಅದರಿಂದ ಸಿಎಂ ಗರಂ ಆಗಿದ್ದರು.

ಈ ಹಿನ್ನಲೆಯಲ್ಲಿ ಈಗ ಎಚ್ಚೆತ್ತಿರುವ ಬಿಎಂಟಿಸಿ ಅಧ್ಯಕ್ಷ ನಾಗರಾಜ್ ಯಾದವ್ ಅವರು ರಾತ್ರಿ ಡಿಪೋಗಳಿಗೆ ದಿಢೀರ್ ಬೇಟಿ ನೀಡಿ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಪರೀಶಿಲನೆ ನಡೆಸಿದರು. ಅಲ್ಲದೆ ಪ್ರಯಾಣಿಸುತ್ತಿದ್ದ ಬಸ್ ಕೆಟ್ಟು ಹೋಗಿದ್ದಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಎಂಟಿಸಿ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top