Sunday, 24th September 2017  

Vijayavani

1. 3ನೇ ಮ್ಯಾಚ್‌ನಲ್ಲೂ ಆಸೀಸ್‌ ಉಡೀಸ್‌- ರೋಹಿತ್,ರಹಾನೆ,ಪಾಂಡ್ಯ ಬೊಂಬಾಟ್‌ ಆಟ- ಭಾರತಕ್ಕೆ ಸರಣಿ ವಶ 2. ದೆಹಲಿಯಲ್ಲಿ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ- ಜಾವ್ಡೇಕರ್ ನೇತೃತ್ವದಲ್ಲಿ ಮೀಟಿಂಗ್‌- ತಡವಾಗಿ ದೆಹಲಿ ವಿಮಾನ ಏರಿದ ಈಶ್ವರಪ್ಪ 3. ಸಿದ್ದಾರ್ಥ್​ ಮನೆ ಮೇಲೆ ಐಟಿ ದಾಳಿ ಪ್ರಕರಣ- 650 ಕೋಟಿ ಮೌಲ್ಯದ ಅಕ್ರಮ ಆದಾಯ ಪತ್ತೆ- ದಿಗ್ವಿಜಯ ನ್ಯೂಸ್​ಗೆ ಐಟಿ‌ ಮೂಲಗಳ ಮಾಹಿತಿ 4. ವಿಶ್ವಸಂಸ್ಥೆಯಲ್ಲಿ ಮತ್ತೆ ಬಾಲ ಬಿಚ್ಚಿದ ಪಾಕಿಸ್ತಾನ- ಮಡಿಲಲ್ಲಿ ಕೆಂಡ ಇಟ್ಕೊಂಡು ಭಾರತದತ್ತ ವಾಗ್ಬಾಣ- ಇಂಡಿಯಾ ಉಗ್ರವಾದದ ತಾಯಿ ಅಂತಾ ಪಾಕ್ ಉದ್ಧಟತನ 5. ಕೋಕ್ ಸ್ಟುಡಿಯೋದಿಂದ ಸಂಗೀತ ಸಂಜೆ- ಪೆಪೋನ್ ಗಾಯನಕ್ಕೆ ಮನಸೋತ ಯುವಜನ- ಹುಚ್ಚಿದ್ದು ಕುಣಿಸಿದ ಯುವದಸರಾ
Breaking News :

ಭೀಕರ ರಸ್ತೆ ಅಪಘಾತ: ಇಬ್ಬರ ಸಾವು, ನಾಲ್ವರ ಸ್ಥಿತಿ ಚಿಂತಾಜನಕ

Thursday, 14.09.2017, 7:32 AM       No Comments

ಚಿತ್ರದುರ್ಗ: ಖಾಸಗಿ ಬಸ್​ವೊಂದು ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಹಿರಿಯೂರು ತಾಲ್ಲೂಕಿನ ಐಮಂಗಲ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಳಗಿನ ಜಾವ ನಡೆದಿದೆ.

ಸೂರತ್ ಮೂಲದ ಅರುಣ್ ಭವರ್​ಲಾಲ್​ (30), ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ಪ್ರಶಾಂತ (30) ಮೃತರು. ಬಸ್​ ಗೋವಾದಿಂದ ಬೆಂಗಳೂರಿಗೆ ಹೋಗುತ್ತಿತ್ತು ಎನ್ನಲಾಗಿದೆ.

ಗಾಯಾಳುಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top