Friday, 21st September 2018  

Vijayavani

ಸಿಎಂ ‘ದಂಗೆ’ ಹೇಳಿಕೆ ವಿರುದ್ಧ ಕೇಸರಿ ಗುಟುರು - ಡಿಜಿಪಿ ನೀಲಮಣಿ ರಾಜುಗೆ ಬಿಜೆಪಿ ದೂರು - ಸಂಜೆ 4.30ಕ್ಕೆ ಗವರ್ನರ್ ಭೇಟಿ​​​​        ರಾಜ್ಯಾದ್ಯಂತ ಭುಗಿಲೆದ್ದ ‘ದಂಗೆ’ ಉರಿ - ಕಲಬುರಗಿ, ಮಂಡ್ಯ, ಧಾರವಾಡ, ಕೊಡಗಿನಲ್ಲಿ ದಳ್ಳುರಿ        ಬ್ರದರ್ಸ್​​ ತಂಟೆಗೆ ಹೋಗ್ಬೇಡಿ, ವಿವಾದಾತ್ಮಕ ಹೇಳಿಕೆ ಕೊಡ್ಬೇಡಿ - ಸಾಫ್ಟ್​ ಪಾಲಿಟಿಕ್ಸ್ ಬಗ್ಗೆ ಡಿಕೆಶಿಗೆ ಸಿದ್ದು ಕ್ಲಾಸ್        ಕರ್ನಾಟಕದಲ್ಲಿ ನಮಗೆ ಅಧಿಕಾರ ಬೇಕು - ಇಲ್ದಿದ್ರೆ ಲೋಕಸಭೆ ಚುನಾವಣೆಯಲ್ಲಿ ಕಷ್ಟ ಕಷ್ಟ - ಪರಿಸ್ಥಿತಿ ನಿಭಾಯಿಸಲು ಸಿದ್ದುಗೆ ಸೂಚನೆ        ಜಮ್ಮು-ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ - ಅಪಹರಿಸಿದ್ದ ಮೂವರು ಪೊಲೀಸರ ಹತ್ಯೆಗೈದ ಕಿರಾತಕರು        ಓಡಿಶಾದಲ್ಲಿ ಡೆಯ್ ಚಂಡಮಾರುತದ ಅಬ್ಬರ - ಕಾಲಾಪುರಕ್ಕೆ ನುಗ್ಗಿದ ಡ್ಯಾಮ್ ನೀರು ನುಗ್ಗಿ ಪ್ರವಾಹ - ಬಿರುಗಾಳಿಗೆ ಜನರು ಕಂಗಾಲ್       
Breaking News

ಕಾವೇರಿ ಅಂತಿಮ ತೀರ್ಪು: ತಮಿಳುನಾಡು ಬಸ್​ ಸಂಚಾರ ಸ್ಥಗಿತ, ವ್ಯಾಪಕ ಭದ್ರತೆ

Friday, 16.02.2018, 9:45 AM       No Comments

ಬೆಂಗಳೂರು: ಇಂದು ಕಾವೇರಿ ವಿವಾದದ ಸಂಬಂಧ ಸುಪ್ರೀಂ ಕೋರ್ಟ್​ನಿಂದ ಅಂತಿಮ ತೀರ್ಪು ಪ್ರಕಟವಾಗುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ತಮಿಳುನಾಡಿನಿಂದ ರಾಜ್ಯಕ್ಕೆ ಬರುವ ಎಲ್ಲಾ ಬಸ್​ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ರಾಜ್ಯದಿಂದ ತಮಿಳುನಾಡಿಗೆ ನಿತ್ಯ 450 ಬಸ್​ಗಳು ಸಂಚರಿಸುತ್ತವೆ. ಇಂದು ಕೆಎಸ್​ಆರ್​ಟಿಸಿ ಬಸ್​ಗಳು ತಮಿಳುನಾಡಿಗೆ ಎಂದಿನಂತೆ ಸಂಚರಿಸುತ್ತಿವೆ. ತೀರ್ಪಿನ ನಂತರದ ಪರಿಸ್ಥಿತಿಗನುಗುಣವಾಗಿ ಬಸ್​ ಸಂಚಾರದ ಕುರಿತು ಮುಂದಿನ ತೀರ್ಮಾನ ತೆಗೆದುಕೊಳ್ಳಲು ಕೆಎಸ್​ಆರ್​ಟಿಸಿ ನಿರ್ಧರಿಸಿದೆ.

ಇದೇ ಸಂದರ್ಭದಲ್ಲಿ ಮಂಡ್ಯ, ಮೈಸೂರು ಮತ್ತು ಬೆಂಗಳೂರಿನಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. ಮಂಡ್ಯ ಜಿಲ್ಲಾದ್ಯಂತ 8 DYSP, 25 CPI, 60 PSI, 150 ASI, 20 DAR, 25 KSRP ತುಕಡಿ, 1300 ಪೊಲೀಸ್​ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ಬೆಂಗಳೂರಿನಲ್ಲಿ 15 ಸಾವಿರ ಪೊಲೀಸ್​ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಜತೆಗೆ ಹೆಚ್ಚುವರಿಯಾಗಿ 70 ಕೆಎಸ್​ಆರ್​ಪಿ, 30 ಸಿಎಆರ್​ ತುಕಡಿ ನಿಯೋಜಿಸಲಾಗಿದೆ. ನಗರದಲ್ಲಿ ಕೆಲವು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಟಿ.ಸುನೀಲ್‌ಕುಮಾರ್ ಭದ್ರತಾ ವ್ಯವಸ್ಥೆ ಕುರಿತು ಮಾಹಿತಿ ನೀಡಿದ್ದಾರೆ.

Leave a Reply

Your email address will not be published. Required fields are marked *

Back To Top