Tuesday, 21st November 2017  

Vijayavani

1. ಇಂಧನ ಇಲಾಖೆಯಲ್ಲಿ ಅವ್ಯವಹಾರ ಆರೋಪ – ವಿಧಾನಸಭೆಯಲ್ಲಿ ಸದನ ಸಮಿತಿ ವರದಿ ಮಂಡನೆ – ಸಂಸದೆ ಶೋಭಾ ವಿರುದ್ಧ ಡಿಕೆಶಿ ಅಸ್ತ್ರ 2. ಮದ್ಯಪಾನ ನಿಷೇಧಕ್ಕೆ ಸದನದಲ್ಲಿ ಗುದ್ದಾಟ – ಮದ್ಯ ವಿರೋಧಿ ಹೋರಾಟಕ್ಕೆ ಶೆಟ್ಟರ್​ ಸಾಥ್​​​​​ – ಸಿಎಂ ವಿರುದ್ಧ ಸಂಜಯ್​​ ಪಾಟೀಲ್​​ ಕಟು ಟೀಕೆ 3. 63ರಲ್ಲಿ ಬಿಡುಗಡೆಯಾಗಿತ್ತು ಪದ್ಮಾವತಿ ಚಿತ್ರ – ಆಗಿಲ್ಲದ ವಿವಾದ ಈಗ ಸೃಷ್ಟಿ – ವಿರೋಧಿ ಪಡೆಗೆ ಪ್ರಶ್ನೆ ಮುಂದಿಟ್ಟ ಚಿತ್ರತಂಡ 4. ತ್ರಿವಳಿ ತಲಾಖ್​ಗೆ ಸದ್ಯದಲ್ಲೇ ಬ್ರೇಕ್​ – ಚಳಿಗಾಲದ ಅಧಿವೇಶನದಲ್ಲಿ ವಿಧೇಯಕ ಮಂಡನೆ – ಕೇಂದ್ರ ಸರ್ಕಾರದ ಮಹತ್ವದ ನಡೆ 5. ಐಶ್ವರ್ಯ ಫೋಟೋ ತೆಗೆಯಲು ನೂಕುನುಗ್ಗಲು – ಮಾಧ್ಯಮದವರ ನಡೆಗೆ ಬಚ್ಚನ್​​​​​​​ ಸೊಸೆ ಕಣ್ಣೀರು – ಕೈಮುಗಿದು ಕಣ್ಣೀರಿಟ್ಟ ಐಶ್ವರ್ಯ
Breaking News :

ವಿವಾದದ ಕಿಡಿ ಹೊತ್ತಿಸಿರುವ ಅನಂತ ಕುಮಾರ್ ಹೆಗಡೆ ಟ್ವೀಟ್​

Saturday, 21.10.2017, 9:36 AM       No Comments

ಬೆಂಗಳೂರು: ಟಿಪ್ಪು ಒಬ್ಬ ಮತಾಂಧ ಕ್ರೂರಿ, ಸಾಮೂಹಿಕ ಅತ್ಯಾಚಾರಿ. ಟಿಪ್ಪು ದಿನಾಚರಣೆಗೆ ನಾನು ಹೋಗುವುದಿಲ್ಲ ಎಂದು ಕೇಂದ್ರ ಕೌಶಲಾಭಿವೃದ್ಧಿ ಸಚಿವ ಅನಂತ ಕುಮಾರ ಹೆಗಡೆ ಅವರು ವಿವಾದಾತ್ಮಕ ಟ್ವೀಟ್​ ಮಾಡಿದ್ದಾರೆ.

ವಿಡಿಯೋ ನೋಡಿ

ಅನಂತ್​ ಕುಮಾರ್​ ಹೆಗಡೆ ಅವರು ತಮ್ಮ ಟ್ವೀಟ್​ನಲ್ಲಿ ಕರ್ನಾಟಕ ಸರ್ಕಾರವನ್ನು ಹ್ಯಾಷ್​ ಟ್ಯಾಗ್​ ಮಾಡಿದ್ದಾರೆ. ಜತೆಗೆ ಟಿಪ್ಪು ಜಯಂತಿಯನ್ನು ವೈಭವೀಕರಣ ಮಾಡುವುದು ನಾಚಿಕೆಗೇಡಿನ ಸಂಗತಿ. ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ನನ್ನ ಹೆಸರು ಹಾಕದಂತೆ ನಾನು ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದ್ದೇನೆ ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಅನಂತ ಕುಮಾರ್​ ಹೆಗಡೆ ಅವರ ಟ್ವೀಟ್​ ವಿಚಾರವಾಗಿ ಪ್ರತಿಕ್ರಿಯಿಸಿದ ಕಾಂಗ್ರೆಸ್​ ಮುಖಂಡ ಐವಾನ್​ ಡಿಸೋಜಾ, ದೇಶದಲ್ಲಿ ಶಾಂತಿ, ಸುವ್ಯವಸ್ಥೆ ಕೆಡಿಸುವುದೇ ಅವರ ಉದ್ದೇಶ ಎಂದು ತಿಳಿಸಿದರು. ಜತೆಗೆ ರಾಜಕೀಯಕ್ಕಾಗಿ ಈ ರೀತಿ ಹೇಳುವುದು ಸರಿಯಲ್ಲ. ಇಂಥಹ ಟ್ವೀಟ್​ ಸಮಾಜಕ್ಕೆ ಕೆಟ್ಟ ಸಂದೇಶ ರವಾನಿಸುತ್ತದೆ. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ತೆಗೆಯಬೇಕು ಎಂದು ಒತ್ತಾಯಿಸಿದರು. (ದಿಗ್ವಿಜಯ ನ್ಯೂಸ್​)

 

Leave a Reply

Your email address will not be published. Required fields are marked *

Back To Top