Monday, 23rd October 2017  

Vijayavani

1. ಲಿಂಗಾಯತರು ಹಿಂದೂಗಳಲ್ಲ ಹೇಳಿಕೆ – ಜಾಮದಾರ್​ಗೆ ಕನೇರಿ ಮಠದ ಶ್ರೀ ತಿರುಗೇಟು – ಬಹಿರಂಗ ಚರ್ಚೆಗೆ ಕಾಡಸಿದ್ದೇಶ್ವರ ಸ್ವಾಮಿಗಳ ಆಹ್ವಾನ 2. ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದ ಭಿನ್ನಾಭಿಪ್ರಾಯ – ಸಿದ್ದು, ಪರಂ, ಡಿಕೆಶಿ ದೂರ ದೂರ – ಹೈಕಮಾಂಡ್​ ಸಾಮೂಹಿಕ ಜಪ, ನಾಯಕರು ಸಪರೇಟ್​ ರೂಪ 3. ಧಾರವಾಡದಲ್ಲಿ ಸರ್ಕಾರದ ಸಾಧನಾ ಸಮಾವೇಶ – ಜನರ ತೆರಿಗೆ ದುಡ್ಡಲ್ಲಿ ಕಾಂಗ್ರೆಸ್‌ ಪಕ್ಷಕ್ಕೂ ಪ್ರಚಾರ – ಬೆನ್ನುತಟ್ಟಿಕೊಳ್ಳೋ ಸಮಾವೇಶಕ್ಕೆ ಪಿಡಿಓಗಳೂ ದುರ್ಬಳಕೆ 4. ನಟ ವಿಜಯ್ ಬೆಂಬಲಕ್ಕೆ ನಿಂತ ತಲೈವಾ – ಮೆರ್ಸಲ್‌ ಸಿನಿಮಾದ ಬಗ್ಗೆ ಮೆಚ್ಚುಗೆಯ ಟ್ವೀಟ್ – ವಿವಾದಾತ್ಮಕ ವಿಷಯಗಳಿಗೂ ರಜನಿಕಾಂತ್ ಪರೋಕ್ಷ ಶ್ಲಾಘನೆ 5. ಚುನಾವಣಾ ಹೊಸ್ತಿಲಲ್ಲಿ ಬಿಜೆಪಿಗೆ ಬಿಗ್​ ಶಾಕ್​ – ಬಿಜೆಪಿಗೆ ಸೇರಲು 1 ಕೋಟಿ ರೂ ಆಮೀಷ – ಹಾರ್ದಿಕ್​ ಪಟೇಲ್​ ಸಂಗಡಿಗನ ಗಂಭೀರ ಆರೋಪ
Breaking News :

ಸತ್ತವರ ಹೆಸ್ರಲ್ಲಿ ಶೌಚಾಲಯ: ಮಿಟ್ಟೇಮರಿ ಗ್ರಾಪಂ ಅವ್ಯವಹಾರ ಸರ್ಕಾರಕ್ಕೆ ಕಾಣ್ತಿಲ್ವಾ?

Sunday, 06.08.2017, 12:50 PM       No Comments

ಚಿಕ್ಕಬಳ್ಳಾಪುರ: ಭ್ರಷ್ಟಾಚಾರ ನಿರ್ಣಾಮವಾಗುವವರೆಗೂ ಬಲಿಷ್ಟ ಭಾರತದ ಕನಸು ನನಸಾಗದು. ಭ್ರಷ್ಟರ ಬೇಟೆಗೆ ಎಷ್ಟೇ ಕಾನೂನು ತಂದರು ಭ್ರಷ್ಟಾಚಾರಕ್ಕೆ ಮಾತ್ರ ಕಡಿವಾಣ ಹಾಕಲು ಸಾಧ್ಯವಾಗುತ್ತಿಲ್ಲ.

ಹೌದು, ಸರ್ಕಾರ ಏನೇ ಕಾನೂನು ತರಲಿ ನಾವು ಮಾತ್ರ ನಮ್ಮ ಕೆಲಸ ಬಿಡುವುದಿಲ್ಲ. ಭ್ರಷ್ಟತನ ತೋರುವುದು ನಮ್ಮ ಆ ಜನ್ಮ ಸಿದ್ಧ ಹಕ್ಕು ಎಂದು ಚಿಕ್ಕಬಳ್ಳಾಪುರದ ಮಿಟ್ಟೇಮರಿ ಗ್ರಾಮ ಪಂಚಾಯಿತಿ ಸರ್ಕಾರಕ್ಕೆ ಕೂಗಿ ಹೇಳುತ್ತಿದೆ. ಆದರೆ, ಪಾಪ ಸರ್ಕಾರಕ್ಕೆ ಕೇಳುತ್ತಿಲ್ಲವೇನೋ… ಬಯಲು ಮುಕ್ತ ಶೌಚಾಲಯ ಮಾಡುವ ಕೇಂದ್ರ ಸರ್ಕಾರದ ಗುರಿಗೆ ಸೆಡ್ಡು ಹೊಡೆದಿದ್ದಾರೆ ಇಲ್ಲಿನ ಅಧಿಕಾರಿಗಳು.

ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಕೋಟ್ಯಾಂತರ ರೂಪಾಯಿ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಿಟ್ಟೇಮರಿ ಗ್ರಾಮಪಂಚಾಯತಿಯಲ್ಲಿ ಭಾರಿ ಅವ್ಯವಹಾರ ನಡೆದಿದ್ದು, ಮರಣ ಹೊಂದಿರುವ ವ್ಯಕ್ತಿಗಳ ಹೆಸರಿನಲ್ಲಿ ಅಧಿಕಾರಿಗಳು ಶೌಚಾಲಯ ನಿರ್ಮಿಸಿ ಲಕ್ಷಾಂತರ ರೂಪಾಯಿ ಹಣವನ್ನ ನುಂಗಿ ನೀರು ಕುಡಿದಿದ್ದಾರೆ.

ಮಿಟ್ಟೇಮರಿ ಗ್ರಾಮಪಂಚಾಯತಿ ಪಿಡಿಓ ವೆಂಕಟರೋಣಪ್ಪ ಹಾಗೂ ಇತರೆ ಅಧಿಕಾರಿಗಳು ವಿರುದ್ಧ ಆರೋಪ ಕೇಳಿಬಂದಿದೆ. ಸತ್ತವರ ಹೆಸರಲ್ಲಿ ನಕಲಿ ದಾಖಲೆಗಳನ್ನ ಸೃಷ್ಟಿಸಿ ಬೇನಾಮಿ ಖಾತೆಗಳ ಮೂಲಕ ಹಣ ಲೂಟಿ ಮಾಡಲಾಗಿದೆ. 2016-17 ನೇ ಸಾಲಿನಲ್ಲಿ ಮಿಟ್ಟೇಮರಿ ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ 283 ಶೌಚಾಲಯಗಳನ್ನ ನಿರ್ಮಿಸಿರುವುದಾಗಿ ದಾಖಲೆ ಸೃಷ್ಠಿಸಿ 37 ಲಕ್ಷ ರೂಪಾಯಿ ಸರ್ಕಾರದ ಹಣವನ್ನ ಡ್ರಾ ಮಾಡಲಾಗಿದೆ.

ಆದರೆ, ಯೋಜನೆಯಡಿ ಶೌಚಾಲಯ ಕಟ್ಟಿಕೊಂಡ ಬಹುತೇಕ ಅರ್ಹ ಫಲಾನುಭವಿಗಳ ಖಾತೆಗ ಹಣವೇ ಜಮಾ ಆಗಿಲ್ಲ. ಆದ್ರೆ ಅವರ ಹೆಸರಲ್ಲಿ ಬೇನಾಮಿ ಖಾತೆಗಳಿಗೆ ಹಣ ಜಮಾ ಆಗಿರೋದು ಇದೀಗ ದಾಖಲೆಗಳಿಂದ ಬಹಿರಂಗವಾಗಿದೆ.(ದಿಗ್ವಿಜಯ ನ್ಯೂಸ್​)

Leave a Reply

Your email address will not be published. Required fields are marked *

Back To Top