Monday, 11th December 2017  

Vijayavani

1. ಜೈಲಿನ ಆಸ್ಪತ್ರೆಯಲ್ಲಿ ಬೆಳಗೆರೆಗೆ ಚಿಕಿತ್ಸೆ – ಚೇತರಿಸಿಕೊಂಡ್ರೆ ಬ್ಯಾರಕ್‌ಗೆ ರವಾನೆ – ನೆಲದ ಮೇಲೆ ಕೂರಲು ರವಿ ಪರದಾಟ 2. ಕೊತ ಕೊತ ಕುದಿಯುತ್ತಿದೆ ಕುಮಟಾ – ಉಗ್ರ ಸ್ವರೂಪ ಪಡೆದ ಹಿಂದೂ ಸಂಘಟನೆಗಳ ಪ್ರತಿಭಟನೆ – ಆಕ್ರೋಶಕ್ಕೆ ಹೊತ್ತಿ ಉರಿದ ಐಜಿಪಿ ಕಾರು 3. ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನ – ಪ್ರತಿಸ್ಪರ್ಧಿ ಇಲ್ಲದ್ದಕ್ಕೆ ಯುವರಾಜನಿಗೆ ಸಾರಥ್ಯ – ದೆಹಲಿಯಲ್ಲಿ ಕಾರ್ಯಕರ್ತರ ಸಂಭ್ರಾಮಾಚರಣೆ 4. ಮಂಡ್ಯದ ಸಂತೆಬಾಚಹಳ್ಳಿ ಕ್ರಾಸ್‌ ಬಳಿ ಭೀಕರ ಅಪಘಾತ – ಟ್ಯಾಂಕರ್ ಹರಿದು ಬೈಕ್ ಸವಾರರು ಸಾವು – ಕೆ.ಆರ್.ಪೇಟೆ ಗ್ರಾಮಾಂತರ ಠಾಣೆ ಪ್ರಕರಣ 5. ಸ್ಟೀಲ್‌ ಬ್ರಿಡ್ಜ್ ಹೋಯ್ತು ಮೆಟ್ರೋ ಬಂತು – ಏರ್‌ಪೋರ್ಟ್‌ಗೆ ರೈಲು ಬಿಡಲು ಸರ್ಕಾರದ ಒಪ್ಪಿಗೆ – ಮಹತ್ವದ ಯೋಜನೆಗೆ ಕ್ಯಾಬಿನೆಟ್‌ನಲ್ಲಿ ಅಸ್ತು
Breaking News :

ಪ್ರಿಯಕರನ ಜತೆಗೂಡಿ ದಿನಾಲೂ ಪತಿಗೆ ವಿಷ ತಿನ್ನಿಸ್ತಿದ್ಲು! ಮುಂದೇನಾಯ್ತು?

Thursday, 29.06.2017, 12:20 PM       No Comments

ಚಿಕ್ಕಬಳ್ಳಾಪುರ: ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯೊಬ್ಬಳು ತನ್ನ ಪ್ರಿಯಕರನ ಮಾತು ಕೇಳಿ ಪತಿಗೆ ವಿಷವಿಟ್ಟು ಕೊಲ್ಲಲು ಯತ್ನಿಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಚಿಕ್ಕಮುನಿಮಂಗಲದಲ್ಲಿ ನಡೆದಿದೆ.

ಚಿಕ್ಕಮುನಿಮಂಗಲ ಗ್ರಾಮದ ನರಸಿಂಹಪ್ಪ ಎಂಬಾತ ಕೃಷ್ಣಮ್ಮ ಎಂಬುವವರನ್ನು ವಿವಾಹವಾಗಿದ್ದ. ದಂಪತಿಗೆ ಇಬ್ಬರು ಮಕ್ಕಳೂ ಇದ್ದಾರೆ. ಆದರೆ, ಕೃಷ್ಣಮ್ಮಳಿಗೆ ಅದೇ ಗ್ರಾಮದ ಆನಂದರೆಡ್ಡಿ ಎಂಬಾತನ ಜತೆ ಅನೈತಿಕ ಸಂಬಂಧ ಇತ್ತು.

ಪತಿ ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾಗ್ತಾನೆ ಅಂತಾ ಕೃಷ್ಣಮ್ಮ ಪತಿಗೆ ನಿತ್ಯ ಊಟದಲ್ಲಿ ಸ್ವಲ್ಪ ಸ್ವಲ್ಪ ವಿಷಹಾಕಿ ಕೊಲೆ ಮಾಡಲು ಯತ್ನಿಸಿದ್ದಾಳೆ. ಇದರಿಂದ ನರಸಿಂಹನ ಆರೋಗ್ಯದಲ್ಲಿ ಏರುಪೇರಾಗಿದೆ. ಅನುಮಾನಗೊಂಡ ನರಸಿಂಹ ಪತ್ನಿಯ ಮೊಬೈಲ್​ ಜಾಲಾಡಿದಾಗ, ಪ್ರಿಯಕರನ ಜತೆ ಕೃಷ್ಣಮ್ಮ ಸೇರಿ ಮಾಡಿರುವ ಸಂಚು ಬಯಲಾಗಿದೆ.

ಸದ್ಯ ನರಸಿಂಹ ಚಿಂತಾಮಣಿ ಗ್ರಾಮಾಂತರ ಪೋಲಿಸರಿಗೆ ದೂರು ನೀಡಿದ್ದಾನೆ. ಪೊಲೀಸರು ಕೃಷ್ಣಮ್ಮನನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಆಕೆ ಸತ್ಯ ಬಾಯ್ಬಿಟ್ಟಿದ್ದಾಳೆ. ತಲೆತಪ್ಪಿಸಿಕೊಂಡಿರುವ ಆನಂದರೆಡ್ಡಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

 

Leave a Reply

Your email address will not be published. Required fields are marked *

Back To Top