Saturday, 22nd September 2018  

Vijayavani

ಸಿಎಂ ಜನತಾ ದರ್ಶನದಲ್ಲಿ ಸಿಗಲಿಲ್ಲ ನ್ಯಾಯ - ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ - ಸಿಎಂಗೆ ಪತ್ರ ಬರೆದು ನಾಲ್ವರು ಸುಸೈಡ್‌        ಬಿಎಸ್‌ವೈ ನಿವಾಸದಲ್ಲಿ ಬಿಗ್‌ ಮೀಟಿಂಗ್‌ - ಮೈತ್ರಿ ಸರ್ಕಾರದ ವಿರುದ್ಧ ಹೋರಾಟಕ್ಕೆ ರಣತಂತ್ರ        ಶೃಂಗೇರಿಯಲ್ಲಿ ಸಿಎಂ ಶತ್ರುಸಂಹಾರ ಯಾಗ - ಕಾರವಾರದಲ್ಲಿ ಡಿಸಿಎಂ ದೇವಿ ದರ್ಶನ - ಸಂಕಷ್ಟ ನಿವಾರಣೆಗೆ ದೇವರ ಮೊರೆ        ಜೆಡಿಎಸ್‌ಗೂ ಕಾಡ್ತಿದೆ ಅಪರೇಷನ್‌ ಭಯ - ಹಾಸನದಲ್ಲಿ ಜೆಡಿಎಲ್‌ಪಿ ಮೀಟಿಂಗ್‌ - ಶಾಸಕರನ್ನ ಹಿಡದಿಟ್ಟುಕೊಳ್ಳ ಗೌಡರ ತಂತ್ರ        ಒಡಿಸ್ಸಾದಲ್ಲಿ ಪ್ರಧಾನಿ ರೌಂಡ್ಸ್‌ - ವಿವಿದ ಅಭಿವೃದ್ಧಿಕಾರ್ಯಗಳಿಗೆ ಮೋದಿ ಚಾಲನೆ - ಹೊಸ ಒಡಿಸ್ಸಾ ಕಟ್ಟೋಣ ಎಂದ ಪ್ರಧಾನಿ        ರಫೇಲ್‌ ಯುದ್ಧ ವಿಮಾನಕ್ಕೆ ಓಕೆ ಎಂದ ಐಎಎಫ್‌- ಮೊದಲ ಪರೀಕ್ಷೆಯಲ್ಲಿ ಯಶಸ್ವಿ ಹಾರಾಟ - ಮೋದಿ ಸರ್ಕಾರಕ್ಕೆ ಬಿಗ್‌ ಬೂಸ್ಟ್‌       
Breaking News

ವಿವಿಧ ಕ್ಷೇತ್ರದ ಸಮಸ್ಯೆ ನಿವಾರಣೆಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ತಾಕೀತು

Thursday, 14.06.2018, 1:17 PM       No Comments

ಬೆಂಗಳೂರು: ನಿರುದ್ಯೋಗ ಸಮಸ್ಯೆ ನಿವಾರಣೆ, ಕಿರಿಯ ಅಧಿಕಾರಿಗಳ ಲಂಚಬಾಕತನ, ನಿವೇಶನ, ವಸತಿ ರಹಿತ ಬಡವರಿಗೆ ನೆರವು, ರೈತರ ಪಹಣಿ, ಖಾತೆ ವಿಚಾರದಲ್ಲಿ ತೊಂದರೆ ಹಾಗೂ ಶಿಕ್ಷಣ, ಆರೋಗ್ಯ, ಕಂದಾಯ ಕ್ಷೇತ್ರಗಳ ಸಮಸ್ಯೆಗಳನ್ನು ನಿವಾರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್​.ಡಿ. ಕುಮಾರಸ್ವಾಮಿ ಅವರು ಅಧಿಕಾರಿಗಳಿಗೆ ತಾಕೀತು ಮಾಡಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗುರುವಾರ ನಡೆದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಸೂಚನೆ ನೀಡಿದ ಅವರು ಗ್ರಾಮ ಪಂಚಾಯಿತಿ ಪಿಡಿಒಗಳು ಲಂಚ ಪಡೆಯುವ ವಿಚಾರವನ್ನ ಗಂಭೀರವಾಗಿ ಪರಿಗಣಿಸಿ ಕ್ರಮಕೈಗೊಳ್ಳಿ ಎಂದು ಅಧಿಕಾರಿಗಳಿಗೆ ತಿಳಿಸಿದರು.

ಎರಡು ತಿಂಗಳೊಳಗೆ ವಿವರಣೆ ನೀಡಿ
ನಿವೇಶನ, ವಸತಿ ರಹಿತ ಬಡವರಿಗೆ ಅವಶ್ಯಕವಾದ ನೆರವು ಸಿಗಬೇಕು. 2 ತಿಂಗಳೊಳಗೆ ವಸತಿ ಹಂಚಿಕೆ ಹಾಗೂ ಖಾಲಿ ಜಾಗದ ವಿವರ ನೀಡಬೇಕು. ರೈತರ ಪಹಣಿ ಮತ್ತು ಖಾತೆ ವಿಚಾರದಲ್ಲಿ ನಡೆಯುವ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ ಎಂದು ನಿರ್ದೇಶಿಸಿದರು.

ಅಧಿಕೃತವಾಗಿ ಜನತಾದರ್ಶನ ಆರಂಭ ಮಾಡಿಲ್ಲ
ನಾನು ಸಿಎಂ ಆಗಿ 21 ದಿನಗಳನ್ನು ಕಳೆದಿದ್ದೇನೆ. ಅಧಿಕೃತವಾಗಿ ಜನತಾದರ್ಶನ ಆರಂಭ ಮಾಡಿಲ್ಲ. ಆದರೂ, ಅನೇಕ ಸಮಸ್ಯೆಗಳನ್ನು ಹೊತ್ತು ಜನ ನನ್ನ ಬಳಿ ಬರುತ್ತಿದ್ದಾರೆ. ಆರ್.ಟಿ.ಇ ಕಾಯಿದೆ ಇದ್ದರೂ, ಖಾಸಗಿ ಶಾಲೆಗಳು ಸೀಟು ಕೊಡುತ್ತಿಲ್ಲ. ಬಿಇಒ ಸೇರಿ ಕೆಲ ಅಧಿಕಾರಿಗಳು ಖಾಸಗಿ ಶಾಲೆಗಳ ಜತೆ ಶಾಮೀಲಾಗಿರುವುದರಿಂದ ಅಧಿಕಾರಿಗಳ ಮಾತು ಕೇಳುತ್ತಿಲ್ಲ. ಸರ್ಕಾರಿ ಶಾಲೆಗಳನ್ನು ಖಾಸಗಿ ಶಾಲೆಗಳಿಗೆ ಸರಿಸಮಾನವಾಗಿ ಅಭಿವೃದ್ಧಿ ಮಾಡಲು ನೀಲಿ ನಕ್ಷೆ ಸಿದ್ಧಪಡಿಸುವಂತೆ ಸೂಚನೆ ನೀಡಿದರು.

ಉದ್ಯೋಗ ಸೃಷ್ಟಿ ಮಾಡಬೇಕು
ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿ ಮಾಡಬೇಕು. ಹೀಗಾಗಿ ಜಿಲ್ಲೆ ಹಾಗೂ ತಾಲೂಕುಗಳಲ್ಲಿರುವ ಖಾಸಗಿ ಕಾರ್ಖಾನೆಗಳ ಪಟ್ಟಿ ಮಾಡಿ. ಕಾರ್ಖಾನೆಗಳಲ್ಲಿನ ಉದ್ಯೋಗ ಲಭ್ಯತೆ ಬಗ್ಗೆ ಮಾಹಿತಿ ಸಿದ್ಧಪಡಿಸಿ, ಮಾಲೀಕರನ್ನು ವಿಶ್ವಾಸಕ್ಕೆ ಪಡೆದು ಉದ್ಯೋಗ ನೀಡಬೇಕು. ಕೌಶಲ್ಯ ಹಾಗೂ ವೃತ್ತಿ ಕೌಶಲ್ಯವಿಲ್ಲದವರಿಗೂ ಆವಕಾಶ ನೀಡಬೇಕು ಎಂದು ತಿಳಿಸಿದರು.

ಸಂಪೂರ್ಣ ರಕ್ಷಣೆ ಕೊಡಲಿದೆ
ಉತ್ತಮ ಕೆಲಸ ಮಾಡುವ ಅಧಿಕಾರಿಗಳಿಗೆ ಸರ್ಕಾರ ಸಂಪೂರ್ಣ ರಕ್ಷಣೆ ಕೊಡಲಿದೆ. ಜನರ ಆಶೋತ್ತರಗಳಿಗೆ ಸ್ಪಂದಿಸುವ ಅಧಿಕಾರಿಗಳಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲಿದ್ದೇವೆ. ಸರ್ಕಾರ ರೂಪಿಸುವ ಯೋಜನೆಗಳ ಪರಿಣಾಮಕಾರಿ ಜಾರಿಗೆ ಅಧಿಕಾರಿಗಳ ಸಹಕಾರ ಮುಖ್ಯ. ಅಧಿಕಾರಿಗಳು ಹಾಗೂ ರಾಜಕಾರಣಿಗಳು ಒಂದು ಕುಟುಂಬ ಇದ್ದಂತೆ. ಎಲ್ಲರೂ ಒಟ್ಟುಗೂಡಿ ರಾಜ್ಯದ ಅಭಿವೃದ್ಧಿ ಹಾಗೂ ಜನರ ಆಶೋತ್ತರಗಳ ಈಡೇರಿಕೆಗೆ ಮುಂದಾಗುವಂತೆ ಸಲಹೆ ನೀಡಿದರು. (ದಿಗ್ವಿಜಯ ನ್ಯೂಸ್​​)

 

Leave a Reply

Your email address will not be published. Required fields are marked *

Back To Top