Monday, 16th July 2018  

Vijayavani

ಡ್ಯಾಂಗಳು ತುಂಬಿವೆ, ಸಿಎಂ ರಿಂದ ಕಣ್ಣೀರಧಾರೆ - ಸಿಎಂ ಕಣ್ಣೀರಿಗೆ ಆಯನೂರು ವ್ಯಂಗ್ಯ - ಕಲ್ಲು ಹೃದಯಗಳಿಗೆ ಕಣ್ಣೀರು ಬರಲ್ಲ ಅಂತಾ ಸಚಿವ ನಾಡಗೌಡ ಟಾಂಗ್‌        ಮುಖ್ಯಮಂತ್ರಿ ಸ್ಥಾನ ಕೊಟ್ಟಿದ್ದೇವೆ, ಪ್ರಮುಖ ಖಾತೆ ಬಿಟ್ಟಿದ್ದೇವೆ - ಸಿಎಂ ‘ವಿಷಕಂಠ’ ಹೇಳಿಕೆಗೆ ಎ. ಮಂಜು ಟಾಂಗ್‌ - ದೋಸ್ತಿ ಸರ್ಕಾರದಲ್ಲಿ ಮತ್ತೇ ಜಂಗೀ ಕುಸ್ತಿ        ಒಂದೇ ವೇದಿಕೆಯಲ್ಲಿ ಎಚ್‌ಡಿಕೆ, ಡಿಕೆಶಿ - ರಾಮನಗರದಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ - ಉಪಚುನಾವಣೆಗೆ ದೋಸ್ತಿಗಳ ಅಡಿಪಾಯ        ಸಿದ್ದು ಅನ್ನಭಾಗ್ಯದಲ್ಲಿ ಮಿಂಚಿದ್ದವನಿಗೆ ದೌರ್ಭಾಗ್ಯ - ಮಗನಿಗೆ ಚಿಕಿತ್ಸೆ ಕೊಡಿಸಲು ತಂದೆಯ ಪರದಾಟ - ಜಾಹೀರಾತಿಗೆ ಬಳಸಿಕೊಂಡು ಕೈಬಿಟ್ಟ ಸರ್ಕಾರ        ನಾಲ್ಕನೇ ವರ್ಷಕ್ಕೆ ಕಾಲಿಟ್ಟ ಮಹಾದಾಯಿ ಹೋರಾಟ - ದಯಾಮರಣಕ್ಕಾಗಿ ರೈತರಿಂದ ಮನವಿ - ರಾಜ್ಯ ಕೇಂದ್ರದ ವಿರುದ್ಧ ಅನ್ನದಾತರ ಆಕ್ರೋಶ        ಮುಂದಿನ ಲೋಕಸಭೆ ಚುನಾವಣೆ ಭರ್ಜರಿ ತಯಾರಿ- 25 ಸ್ಥಾನ ಗೆಲ್ಲಲು ಬಿಜೆಪಿ ಬಿಗ್‌ ಪ್ಲಾನ್‌ - ಜುಲೈ 28 ಕ್ಕೆ ಅಮಿತ್‌ ಷಾ ರಾಜ್ಯಕ್ಕೆ ಆಗಮನ       
Breaking News

ಆರೋಗ್ಯಕ್ಕೆ ಲಂಚ ಕ್ರಮದ ಭರವಸೆ ನೀಡಿದ ಎಚ್​ಡಿಕೆ

Wednesday, 20.06.2018, 3:05 AM       No Comments

ಬೆಂಗಳೂರು: ಆರೋಗ್ಯ ಕರ್ನಾಟಕ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲು ಸರ್ಕಾರಿ ಆಸ್ಪತ್ರೆಗಳಿಗೆ ಲಂಚ ನೀಡಬೇಕಾದ ಪರಿಸ್ಥಿತಿ ನಿರ್ವಣವಾಗಿರುವುದನ್ನು ಬಯಲಿಗೆಳೆದ ವಿಜಯವಾಣಿ ವರದಿಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ಗಂಭೀರವಾಗಿ ಪರಿಗಣಿಸಿದ್ದಾರೆ. ಶಿಫಾರಸು ಪತ್ರ ನೀಡುವುದಕ್ಕಾಗಿ ಫಲಾನುಭವಿಗಳಿಂದ ಹಣ ಪಡೆಯುತ್ತಿರುವ ದೂರುಗಳ ಕುರಿತು ಕಠಿಣ ಕ್ರಮಕೈಗೊಳ್ಳುವುದಾಗಿ ಅವರು ಭರವಸೆ ನೀಡಿದ್ದಾರೆ. ಮಂಗಳವಾರ ಪ್ರೆಸ್​ಕ್ಲಬ್ ಮತ್ತು ವರದಿಗಾರರ ಕೂಟ ಆಯೋಜಿಸಿದ್ದ ಸಂವಾದದಲ್ಲಿ ಮಾತನಾಡಿದ ಅವರು ‘ಇದ್ದ ಒಳ್ಳೆಯ ಕಾರ್ಯಕ್ರಮ ಬಿಟ್ಟು ಇಂತಹ ಕಾರ್ಯಕ್ರಮಗಳನ್ನು ಜಾರಿಗೆ ತರುವುದರಿಂದ ಏನು ಅನಾಹುತ ಆಗುತ್ತದೆ ಎಂಬುದನ್ನು ನಾನು ಬಿಡಿಸಿ ಹೇಳಬೇಕಿಲ್ಲ. ಆಡಳಿತ ವ್ಯವಸ್ಥೆಯಲ್ಲಿ ಏನಾಗುತ್ತಿದೆ ಎಂಬುದೂ ನನಗೆ ಗೊತ್ತಿದೆ. ಇಂತಹ ಎಷ್ಟೋ ಸಮಸ್ಯೆಗಳು ನನ್ನ ಗಮನದಲ್ಲಿವೆ. ಅವುಗಳನ್ನು ಸರಿಪಡಿಸಬೇಕಿದೆ. ಆ ನಿಟ್ಟಿನಲ್ಲಿ ನನ್ನ ಪ್ರಯತ್ನ ನಿಲ್ಲುವುದಿಲ್ಲ’ ಎಂದು ಸ್ಪಷ್ಟಪಡಿಸಿದರು.

ಪರ್ವಿುಟ್ ಗೋಲ್ಮಾಲ್ ತನಿಖೆ

ಬೆಂಗಳೂರು: ಅರ್ಹತೆ ಇಲ್ಲದ ಖಾಸಗಿ ಪಿಯು ಕಾಲೇಜುಗಳ ಪ್ರಾರಂಭಕ್ಕೆ ಅನುಮತಿ ನೀಡಿರುವ ಪ್ರಕರಣದ ವಿಚಾರದಲ್ಲಿ ಕೊನೆಗೂ ಎಚ್ಚೆತ್ತುಕೊಂಡಿರುವ ಸರ್ಕಾರ, ಪ್ರಕರಣದ ತನಿಖೆಗಾಗಿ ಪ್ರತ್ಯೇಕ ಸಮಿತಿ ರಚಿಸಲು ತೀರ್ವನಿಸಿದೆ. ‘ಪರ್ವಿುಟ್ ಗೋಲ್ಮಾಲ್’ ಹೆಸರಿನಲ್ಲಿ ವಿಜಯವಾಣಿ ಜೂ.13ರಂದು ಪ್ರಕಟಿಸಿದ್ದ ವಿಶೇಷ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಸುದ್ದಿಗೋಷ್ಠಿ ನಡೆಸಿ ತನಿಖೆಗೆ ಆದೇಶಿಸುವ ನಿರ್ಧಾರ ಪ್ರಕಟಿಸಿದರು.

Leave a Reply

Your email address will not be published. Required fields are marked *

Back To Top